AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೂರು ಅಖಾಡದಲ್ಲಿ ಕಾಂಚಾಣದ ಅಬ್ಬರ, JDS ನಾಯಕರ ವಿರುದ್ಧ ಹಣ ಹಂಚಿಕೆ ಆರೋಪ

ಹುಣಸೂರು: ಡಿಸೆಂಬರ್​ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ರಂಗ ರಂಗೇರಿದೆ. ಮತದಾರರನ್ನು ಸೆಳೆಯಲು ನಾಯಕರು ಹಣ ಹಂಚುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕ್ಷೇತ್ರದಲ್ಲಿ ಮತದಾರರಿಗೆ ಜೆಡಿಎಸ್ ನಾಯಕರ ಬೆಂಬಲಿಗರು ಹಣ ಹಂಚಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಹಣ ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ಫುಲ್ […]

ಹುಣಸೂರು ಅಖಾಡದಲ್ಲಿ ಕಾಂಚಾಣದ ಅಬ್ಬರ, JDS ನಾಯಕರ ವಿರುದ್ಧ ಹಣ ಹಂಚಿಕೆ ಆರೋಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 17, 2019 | 4:48 PM

Share

ಹುಣಸೂರು: ಡಿಸೆಂಬರ್​ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ರಂಗ ರಂಗೇರಿದೆ. ಮತದಾರರನ್ನು ಸೆಳೆಯಲು ನಾಯಕರು ಹಣ ಹಂಚುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕ್ಷೇತ್ರದಲ್ಲಿ ಮತದಾರರಿಗೆ ಜೆಡಿಎಸ್ ನಾಯಕರ ಬೆಂಬಲಿಗರು ಹಣ ಹಂಚಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಹಣ ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ.

Published On - 4:47 pm, Sun, 17 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು