AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಗೆ ಭಾರಿ ಹಿನ್ನಡೆ, ಯೇಸು ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದಿಂದ ಬ್ರೇಕ್?

ಬೆಂಗಳೂರು: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಉಯ್ಯಂಬಳ್ಳಿ ಬಳಿ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಬ್ರೇಕ್​ ಹಾಕುತ್ತಾ? ಎಂಬ ಪ್ರಶ್ನೆ ಉದ್ಭವವಾಗಿದೆ. ಈಗಾಗಲೇ ಕಂದಾಯ ಸಚಿವ ಆರ್.ಅಶೋಕ್ ರಾಮನಗರ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಅಶೋಕ್ ತಿಳಿಸಿದ್ದಾರೆ. ಹಾಗಾದರೆ, ವರದಿ ಪರಿಶೀಲನೆ ಬಳಿಕ ಜಮೀನು ಮುಟ್ಟುಗೋಲಿಗೆ ಮುಂದಾಗಲಿದ್ಯಾ ಸರ್ಕಾರ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ. 10 ಎಕರೆ ಪ್ರದೇಶ ಮುಟ್ಟುಗೋಲು ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರತಿಮೆ […]

ಡಿಕೆಶಿಗೆ ಭಾರಿ ಹಿನ್ನಡೆ, ಯೇಸು ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದಿಂದ ಬ್ರೇಕ್?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 28, 2019 | 3:02 PM

Share

ಬೆಂಗಳೂರು: ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಉಯ್ಯಂಬಳ್ಳಿ ಬಳಿ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಬ್ರೇಕ್​ ಹಾಕುತ್ತಾ? ಎಂಬ ಪ್ರಶ್ನೆ ಉದ್ಭವವಾಗಿದೆ. ಈಗಾಗಲೇ ಕಂದಾಯ ಸಚಿವ ಆರ್.ಅಶೋಕ್ ರಾಮನಗರ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಅಶೋಕ್ ತಿಳಿಸಿದ್ದಾರೆ. ಹಾಗಾದರೆ, ವರದಿ ಪರಿಶೀಲನೆ ಬಳಿಕ ಜಮೀನು ಮುಟ್ಟುಗೋಲಿಗೆ ಮುಂದಾಗಲಿದ್ಯಾ ಸರ್ಕಾರ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.

10 ಎಕರೆ ಪ್ರದೇಶ ಮುಟ್ಟುಗೋಲು ಹಾಕಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರತಿಮೆ ನಿರ್ಮಿಸುವ ಜಾಗ ವಾಪಸ್​​ ಪಡೆಯಲು ಪ್ಲ್ಯಾನ್ ರೂಪಿಸುತ್ತಿದೆ. ಆ ಜಾಗವನ್ನು ವಶಪಡಿಸಿಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಈ ಮೂಲಕ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಬೇಕು ಎಂಬ ಡಿಕೆ ಶಿವಕುಮಾರ್ ಪ್ರಯತ್ನಕ್ಕೆ ಭಾರಿ ಹಿನ್ನಡೆಯಾಗುತ್ತಾ ಎಂಬ ಶಂಕೆ ವ್ಯಕ್ತವಾಗಿದೆ.

ಡಿಕೆಶಿ ಗೋಮಾಳ ಜಮೀನು ಖರೀದಿಸಿದ್ದಾರೆ: ಕಪಾಲ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಡಿ.ಕೆ.ಶಿವಕುಮಾರ್ ಗೋಮಾಳ ಜಮೀನು ಖರೀದಿ ಮಾಡಿದ್ದಾರೆ. ಟ್ರಸ್ಟ್​​ ಮೂಲಕ ಪ್ರತಿಮೆ ನಿರ್ಮಿಸಲು ಅವಕಾಶವಿದೆಯಾ ಎಂದು ಗೊತ್ತಾಗಬೇಕು. ಟ್ರಸ್ಟ್​​ನ ಉದ್ದೇಶ ಏನು ಎಂಬುದನ್ನು ಮೊದಲು ಡಿಕೆಶಿ ಬಹಿರಂಗಪಡಿಸಬೇಕು. ಈ ವಿಚಾರದಲ್ಲಿ ಕಾನೂನು ಸಚಿವರು ಮಧ್ಯಪ್ರವೇಶಿಸಲಿ. ಪ್ರತಿಮೆ ವಿಚಾರವಾಗಿ ನಾನು ಸಿಎಂಗೆ ಪತ್ರ ಬರೆಯುತ್ತೇನೆ ಎಂದು ಟಿವಿ9ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್​​​.ರವಿಕುಮಾರ್​ ಪ್ರತಿಕ್ರಿಯಿಸಿದ್ದಾರೆ.

Published On - 3:23 pm, Fri, 27 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ