ಮೃತ ಸೋಂಕಿತರ ಆಭರಣ, ಬೆಲೆಬಾಳುವ ವಸ್ತು, ಮೊಬೈಲ್​ ಮಾಯ; ಆಸ್ಪತ್ರೆಯಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಆರೋಪ

ಸೋಂಕಿತರು ಆಸ್ಪತ್ರೆಗೆ ಸೇರಿದ ನಂತರ ಕುಟುಂಬಸ್ಥರ ಸಂಪರ್ಕಕ್ಕೆ ಬರುವುದಿಲ್ಲವಾದ್ದರಿಂದ ಒಳಗೆ ಏನಾಗುತ್ತಿದೆ ಎನ್ನುವುದೇ ಹೆಚ್ಚಿನವರಿಗೆ ತಿಳಿಯುತ್ತಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟರೆ ಅವರ ಬಳಿ ಇರುವ ಬೆಲೆಬಾಳುವ ವಸ್ತು, ಆಭರಣ, ಮೊಬೈಲ್ ಇತ್ಯಾದಿಗಳನ್ನೆಲ್ಲಾ ಅವರೇ ಇಟ್ಟುಕೊಳ್ಳುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ಮೃತ ಸೋಂಕಿತರ ಆಭರಣ, ಬೆಲೆಬಾಳುವ ವಸ್ತು, ಮೊಬೈಲ್​ ಮಾಯ; ಆಸ್ಪತ್ರೆಯಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಆರೋಪ
ಪ್ರಾತಿನಿಧಿಕ ಚಿತ್ರ
Follow us
Skanda
|

Updated on:Apr 24, 2021 | 8:17 AM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು, ಆರೋಗ್ಯ ವ್ಯವಸ್ಥೆಗೆ ಸೋಂಕು ನಿಯಂತ್ರಿಸುವುದೇ ಸವಾಲಾಗಿದೆ. ಎಷ್ಟೋ ಜನ ಗಂಭೀರ ಸ್ಥಿತಿಗೆ ತಲುಪಿ ವೈದ್ಯಕೀಯ ಸೌಲಭ್ಯದ ಕೊರತೆಯಿಂದಾಗಿ ಸಾವಿಗೀಡಾಗುತ್ತಿದ್ದಾರೆ. ಆದರೆ, ಇದನ್ನೇ ಬಂಡವಾಳವಾಗಿಸಿಕೊಂಡು ಹಲವೆಡೆ ಸೋಂಕಿತರ ಶವ ರವಾನಿಸಲು ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ, ಶವ ಸಂಸ್ಕಾರಕ್ಕೆ ಹಣ ಕೀಳಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಇದಕ್ಕೆ ಪುಷ್ಠಿ ನಿಡುವಂತೆ ಬೆಂಗಳೂರಿನ ಆಸ್ಪತ್ರೆಗಳ ಇನ್ನೊಂದು ಕರಾಳ ಮುಖದ ಬಗ್ಗೆ ಮೃತರ ಸಂಬಂಧಿಗಳು ಬಾಯಿಬಿಟ್ಟಿದ್ದು, ಮೃತರಿಗೆ ಸಂಬಂಧಿಸಿದ ಬೆಲೆಬಾಳುವ ವಸ್ತುಗಳನ್ನು ಆಸ್ಪತ್ರೆಯಲ್ಲಿ ಕದಿಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸೋಂಕಿತರು ಆಸ್ಪತ್ರೆಗೆ ಸೇರಿದ ನಂತರ ಕುಟುಂಬಸ್ಥರ ಸಂಪರ್ಕಕ್ಕೆ ಬರುವುದಿಲ್ಲವಾದ್ದರಿಂದ ಒಳಗೆ ಏನಾಗುತ್ತಿದೆ ಎನ್ನುವುದೇ ಹೆಚ್ಚಿನವರಿಗೆ ತಿಳಿಯುತ್ತಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟರೆ ಅವರ ಬಳಿ ಇರುವ ಬೆಲೆಬಾಳುವ ವಸ್ತು, ಆಭರಣ, ಮೊಬೈಲ್ ಇತ್ಯಾದಿಗಳನ್ನೆಲ್ಲಾ ಅವರೇ ಇಟ್ಟುಕೊಳ್ಳುತ್ತಾರೆ. ಕುಟುಂಬಸ್ಥರು ಕೇಳಿದರೆ ಆಸ್ಪತ್ರೆಗೆ ಬರುವಾಗ ಏನೂ ಇರಲಿಲ್ಲ ಎಂದು ಸಬೂಬು ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ಅತ್ತಿಬೆಲೆ ಬಳಿ ಇರುವ ಆಕ್ಸ್‌ಫರ್ಡ್‌ ಆಸ್ಪತ್ರೆಯಲ್ಲಿ ಮೊನ್ನೆ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, ಅವರ ಮಗಳು ಈ ಬಗ್ಗೆ ಆರೋಪಿಸಿದ್ದಾರೆ. ತಂದೆಯನ್ನು ಆಸ್ಪತ್ರೆಗೆ ಸೇರಿಸುವಾಗ ಬಂಗಾರದ ಆಭರಣಗಳು ಹಾಗೂ ಮೊಬೈಲ್ ಅವರ ಬಳಿ ಇತ್ತು. ಆದರೆ, ಮೃತಪಟ್ಟ ನಂತರ ಅವೆಲ್ಲವೂ ಕಣ್ಮರೆಯಾಗಿದೆ. ಕೇಳಿದರೆ ಅವರ ಮೈಮೇಲೆ ಏನೂ ಇರಲಿಲ್ಲ ಎಂದು ಸಮಜಾಯಿಷಿ ಕೊಡುತ್ತಾರೆ. ಆಸ್ಪತ್ರೆಗಳಲ್ಲಿ ಕಳ್ಳತನವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

(Jewellery and valuable things on the dead body of covid patient stolen by hospital staff alleges Family members in Bangalore)

ಇದನ್ನೂ ಓದಿ: Corona Positive Report : ಕಣ್ಣಲ್ಲೇ ಅಳೆದು ಕೊರೊನಾ ಪಾಸಿಟಿವ್‌ ರಿಪೋರ್ಟ್‌ ಕೊಡ್ತಾರೆ ಆನೆಕಲ್‌ನ ಆಕ್ಷಫರ್ಡ್‌ ಆಸ್ಪತ್ರೆಯಲ್ಲಿ 

ಗರ್ಭಿಣಿ ಮಹಿಳೆಯರಿಗೆ ಸಿಗ್ತಿಲ್ಲ ಕೊರೊನಾ ಚಿಕಿತ್ಸೆ.. ಇದು ಎರಡು ಜೀವಗಳ ಪ್ರಶ್ನೆ ಸಾರ್ ಎಂದು ಕುಟುಂಬಸ್ಥರ ಕಣ್ಣೀರು

Published On - 8:14 am, Sat, 24 April 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ