ಆರೋಗ್ಯ ಇಲಾಖೆ ಶಾಕಿಂಗ್​ ನ್ಯೂಸ್​: ರಾಜ್ಯದಲ್ಲಿ ಪತ್ತೆಯಾದ ಕೋವಿಡ್ ಪೈಕಿ JN.1 ಒಮಿಕ್ರಾನ್ ರೂಪಾಂತರಿಯೇ ಹೆಚ್ಚು

ಕರ್ನಾಟಕದಲ್ಲಿ ಕೊರೊನಾ JN.1 ಆತಂಕ ಹೆಚ್ಚಾಗಿದೆ. JN.1 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಇದರಿಂದ ರಾಜ್ಯದ ಜನತೆಗೆ ಟೆನ್ಷನ್​ ಶುರುವಾಗಿದೆ. ಇದೀಗ ರಾಜ್ಯ ಆರೋಗ್ಯ ಇಲಾಖೆ JN.1 ಕುರಿತು ಶಾಕಿಂಗ್​ ಮಾಹಿತಿಯೊಂದು ನೀಡಿದೆ. ಏನದು ಮಾಹಿತಿ ಇಲ್ಲಿದೆ ಓದಿ...

ಆರೋಗ್ಯ ಇಲಾಖೆ ಶಾಕಿಂಗ್​ ನ್ಯೂಸ್​: ರಾಜ್ಯದಲ್ಲಿ ಪತ್ತೆಯಾದ ಕೋವಿಡ್ ಪೈಕಿ JN.1 ಒಮಿಕ್ರಾನ್ ರೂಪಾಂತರಿಯೇ ಹೆಚ್ಚು
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Dec 29, 2023 | 9:10 AM

ಬೆಂಗಳೂರು, ಡಿಸೆಂಬರ್​ 29: ಕೊರೊನಾ (Covid) ಕಡಿಮೆ ಆಯ್ತು ಅಂದುಕೊಳ್ಳುವಷ್ಟರಲ್ಲಿ ರಾಜ್ಯದಲ್ಲಿ JN.1 ಆತಂಕ ಹೆಚ್ಚಾಗಿದೆ. ಇಲಿಯವರೆಗು ಕೊರೊನಾ ಮತ್ತೆ ಬಂತು ಎಂದು ತಿಳಿಯಲಾಗಿತ್ತು. ಆದರೆ ರಾಜ್ಯ ಆರೋಗ್ಯ ಇಲಾಖೆ (Health Department) ನೀಡಿದ ಮಾಹಿತಿ ಬೇರೆಯದ್ದೇ ಹೇಳುತ್ತಿದೆ. ಇದು ಆರೋಗ್ಯ ಇಲಾಖೆಗೂ ಟೆನ್ಷನ್ ಹೆಚ್ಚಿಸಿದೆ. ಕರ್ನಾಟಕದಲ್ಲಿ ದಾಖಲಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ 90 ರಷ್ಟು ಒಮಿಕ್ರಾನ್ (Omicron) ರೂಪಾಂತರಿ JN.1 ಅಂಶ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

197 ಸ್ಯಾಂಪಲ್ಸ್​ಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಮಾಡಲು ಕಳುಹಿಸಲಾಗಿದೆ. ಸದ್ಯ ಬಂದಿರುವ 60 ಸ್ಯಾಂಪಲ್ಸ್​ಗಳ ವರದಿ ಪ್ರಕಾರ ಶೇ50 ರಷ್ಟು ರೋಗಿಗಳಲ್ಲಿ ಉಪತಳಿ JN.1 ರೋಗದ ಅಂಶಗಳು ಕಂಡು ಬಂದಿವೆ. ಹೀಗಾಗಿ ರಾಜ್ಯದಲ್ಲಿ ಸರಾಸರಿ ಶೇ50 ರಷ್ಟು ಪ್ರಕರಣಗಳು JN.1 ಇರುವ ಸಾಧ್ಯತೆ ಇದೆ. ಇನ್ನು ಉಳಿದ ಸ್ಯಾಂಪಲ್ಸ್​ಗಳಲ್ಲೂ ಕೂಡ JN.1 ಅಂಶ ಇರುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ರೋಗ ಲಕ್ಷಣ ಇದ್ದರೆ ಕೊರೊನಾ ಟೆಸ್ಟ್: ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ

JN.1 ಇದು ಡಾಮಿನೆಂಟ್ ಸ್ಟ್ರೇನ್ ಇರುವುದರಿಂದ ಇದೇ ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ ವಿಶ್ವದಲ್ಲಿನ ಅನೇಕ ರಾಷ್ಟ್ರಗಳಲ್ಲಿ JN.1 ಉಪತಳಿಯೇ ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಇನ್ಮುಂದೆ ಕಾಣಿಸಿಕೊಳ್ಳುವ ಕೊರೊನಾ ಪಾಸಿಟಿವ್ ಪ್ರಕರಣಗಳು JN.1 ಇರುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹೆಚ್ಚುತ್ತಿದೆ JN.1 ರೂಪಾಂತರಿ ಪ್ರಕರಣ

ಕೋವಿಡ್‌ನ ಜೆಎನ್.1 ರೂಪಾಂತರದ ಪ್ರಕರಣಗಳು ದೇಶದಲ್ಲಿ ಪ್ರತಿದಿನ ಹೆಚ್ಚುತ್ತಿವೆ. ಗೋವಾದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದಲ್ಲದೆ, ಮಹಾರಾಷ್ಟ್ರ ಮತ್ತು ಕೇರಳದಲ್ಲಿಯೂ ಪ್ರಕರಣಗಳು ವರದಿಯಾಗಿವೆ. ಈ ಹೊಸ ರೂಪಾಂತರವು ಸಾಂಕ್ರಾಮಿಕವಾಗಿದೆ, ಆದರೆ ಮಾರಣಾಂತಿಕವಲ್ಲ ಎಂದು ತಜ್ಞರು ಹೇಳುತ್ತಾರೆ, ಆದರೂ ಇನ್ನೂ ಎಚ್ಚರವಾಗಿರಬೇಕಾದ ಅವಶ್ಯಕತೆಯಿದೆ. JN.1 ರೂಪಾಂತರದ ಪ್ರಕರಣಗಳು ಪ್ರಪಂಚದಾದ್ಯಂತ ಬರುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ. ಕಳೆದ ಒಂದು ತಿಂಗಳಲ್ಲಿ, ಕೋವಿಡ್ ಪ್ರಕರಣಗಳು ಪ್ರಪಂಚದಾದ್ಯಂತ ಶೇಕಡಾ 50 ಕ್ಕಿಂತ ಹೆಚ್ಚು ಹೆಚ್ಚಾಗಿದೆ. ಕೋವಿಡ್ ವೈರಸ್ ನಿಂದಾಗಿ ಆಸ್ಪತ್ರೆಗೆ ದಾಖಲಾಗುವ ಪ್ರಮಾಣವೂ ಹೆಚ್ಚಿದೆ, ಆದರೂ ಸಾವಿನ ಪ್ರಕರಣಗಳು ಹೆಚ್ಚಾಗದಿರುವುದು ಸಮಾಧಾನದ ಸಂಗತಿ.

ಗುರುವಾರ ರಾತ್ರಿಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 8,350 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 158 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.98ರಷ್ಟಿದೆ. 69 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಸದ್ಯ 568 ಸಕ್ರೀಯ ಪ್ರಕರಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:02 am, Fri, 29 December 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ