job fair: ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ: ಸಹಾಯವಾಣಿ ಬಿಡುಗಡೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 31, 2024 | 8:18 PM

ರಾಜ್ಯ ಸರ್ಕಾರ ರಾಜ್ಯಮಟ್ಟದ ಉದ್ಯೋಗ ಮೇಳವನ್ನು ಫೆಬ್ರವರಿ 19, 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ ಮಾಡಿದೆ. ಇದೀಗ ಉದ್ಯೋಗ ಮೇಳದ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ರಾಜ್ಯಮಟ್ಟದ ಈ ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ 6 ಸಚಿವರನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ.

job fair: ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ: ಸಹಾಯವಾಣಿ ಬಿಡುಗಡೆ
ಬೃಹತ್ ಉದ್ಯೋಗ ಮೇಳ
Follow us on

ಬೆಂಗಳೂರು, ಜನವರಿ 31: ಇದೇ ಫೆಬ್ರವರಿ 19, 20ರಂದು ರಾಜ್ಯ ಸರ್ಕಾರ ರಾಜ್ಯಮಟ್ಟದ ಉದ್ಯೋಗ ಮೇಳ (job fair) ಆಯೋಜನೆ ಮಾಡಿದೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಇದೀಗ ಉದ್ಯೋಗ ಮೇಳದ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಏನಾದರೂ ಗೊಂದಲಗಳು ಇದ್ದರೆ 18005999918 ನಂಬರ್​ಗೆ ಕರೆ ಮಾಡಬಹುದಾಗಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮೇಳಕ್ಕೆ ಅವಕಾಶವಿದೆ.

ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ಸ್ಕಿಲ್ ಕನೆಕ್ಟ್​ ವೆಬ್​ಸೈಟ್​ಗೆ ಭೇಟಿ ನೀಡಿ ವಿವಿಧ ಹಂತಗಳಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಇನ್ನು ರಾಜ್ಯಮಟ್ಟದ ಈ ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ 6 ಸಚಿವರನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ.

ತಂಡದಲ್ಲಿ ಯಾವೆಲ್ಲ ಸಚಿವರು

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ, ಬಿಟಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚನೆ ಮಾಡಲಾಗಿದ್ದು, ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮೊದಲ ಸಭೆಯಲ್ಲೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಕೆಲ ಖಡಕ್ ಸೂಚನೆಗಳನ್ನು ನೀಡಿದ ಸಿದ್ದರಾಮಯ್ಯ

ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ: ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್​ ಘೋಷಣೆ

ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಸಿಎಂ ಸಿದ್ದರಾಮಯ ಸೂಚಿಸಿದ್ದಾರೆ. ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಸಿಎಂ ತಾಕೀತು ಮಾಡಿದ್ದಾರೆ.

ಸ್ಕಿಲ್ ಡೆವಲಪ್ಮೆಂಟ್ ಗೆ 80 ಸಾವಿರದಷ್ಟು ರಿಜಿಸ್ಟರ್ ಆಗಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಕನ್ನಡಿಗ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.