Jog Falls: ಜೋಗ ಜಲಪಾತ ನೋಡಬೇಕಾ?; ಕೊವಿಡ್ ನೆಗೆಟಿವ್ ರಿಪೋರ್ಟ್ ಇಲ್ಲದಿದ್ದರೆ ಪ್ರವೇಶ ನಿಷೇಧ

Shivamogga: ಜೋಗ ಜಲಪಾತ ವೀಕ್ಷಿಸಲು ವಾರಾಂತ್ಯದಲ್ಲಿ ಸಾವಿರಗಟ್ಟಲೆ ಪ್ರವಾಸಿಗರು ಬರುತ್ತಿರುವುದರಿಂದ ಕೊವಿಡ್ ಭೀತಿ ಹೆಚ್ಚಾಗಿದೆ. ಹೀಗಾಗಿ, ಶಿವಮೊಗ್ಗ ಜಿಲ್ಲಾಡಳಿತ ಜೋಗಕ್ಕೆ ಬರುವ ಪ್ರವಾಸಿಗರಿಗೆ ಕೊರೊನಾ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿದೆ.

Jog Falls: ಜೋಗ ಜಲಪಾತ ನೋಡಬೇಕಾ?; ಕೊವಿಡ್ ನೆಗೆಟಿವ್ ರಿಪೋರ್ಟ್ ಇಲ್ಲದಿದ್ದರೆ ಪ್ರವೇಶ ನಿಷೇಧ
ಜೋಗ ಜಲಪಾತ (ಚಿತ್ರಕೃಪೆ: ಅಂತರ್ಜಾಲ)
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 05, 2021 | 6:40 PM

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು (Jog Falls) ವೀಕ್ಷಿಸಲು ಬೇರೆ ರಾಜ್ಯದವರಿಗೂ ಅನುಕೂಲವಾಗುವಂತೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿತ್ತು. ಹೀಗಾಗಿ, ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕು ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ಧಾಪುರದ ಗಡಿಯಲ್ಲಿರುವ ಜೋಗ ಜಲಪಾತಕ್ಕೆ ಹೊರ ರಾಜ್ಯಗಳ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿತ್ತು. ಕಳೆದೊಂದು ತಿಂಗಳಿನಿಂದ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು, ಇದರ ಸೌದರ್ಯವನ್ನು ಸವಿಯಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೊವಿಡ್ ಹರಡುವಿಕೆಯ ಪ್ರಮಾಣ ಹೆಚ್ಚಾಗಬಹುದು ಎಂಬ ಭೀತಿಯಿಂದ ಶಿವಮೊಗ್ಗ ಜಿಲ್ಲಾಡಳಿತ ಹೊಸ ಕೊವಿಡ್ ನಿಯಮಾವಳಿಯನ್ನು ಜಾರಿಗೆ ತಂದಿದೆ. ಇನ್ನುಮುಂದೆ ಜೋಗ ಜಲಪಾತ ವೀಕ್ಷಿಸಲು ಬರುವವರಿಗೆ ಕೊವಿಡ್ ನೆಗೆಟಿವ್ ಆರ್​ಟಿ-ಪಿಸಿಆರ್ (RT-PCR) ವರದಿ ಕಡ್ಡಾಯವಾಗಿದೆ.

ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರು ಸಾಮಾಜಿಕ ಅಂತರವನ್ನು ಮರೆತು, ಮಾಸ್ಕ್ ಧರಿಸದೆ ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಮತ್ತೆ ಕೊರೊನಾ ಹರಡುವ ಅಪಾಯವಿದೆ. ಹೀಗಾಗಿ, ಜೋಗ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ಕೊವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆಯ ಭೀತಿ ಎದುರಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.

ಪಕ್ಕದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗಿದೆ. ಆದರೆ, ವೀಕೆಂಡ್​ನಲ್ಲಿ ಜೋಗ ಜಲಪಾತಕ್ಕೆ ಕರ್ನಾಟಕದವರು ಮಾತ್ರವಲ್ಲದೆ ಹೊರ ರಾಜ್ಯದ ಪ್ರಯಾಣಿಕರು ಕೂಡ ಹೆಚ್ಚಾಗಿ ಆಗಮಿಸುತ್ತಿದ್ದಾರೆ. ಕಳೆದ ಭಾನುವಾರ ಒಂದೇ ದಿನ ಜೋಗ ಜಲಪಾತಕ್ಕೆ 14 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ಹೀಗಾಗಿ, ಪ್ರವಾಸಿಗರ ಸಂಖ್ಯೆಗೆ ಕಡಿವಾಣ ಹಾಕಲು ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕೇರಳದಿಂದ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರಯಾಣಿಕರ ಮೇಲೆ ಕಣ್ಣಿಡಲು ಆಗುಂಬೆ ಘಾಟ್, ಹುಲಿಕಲ್ ಘಾಟ್​ ಚೆಕ್​ಪೋಸ್ಟ್​ನಲ್ಲಿ ಎಚ್ಚರ ವಹಿಸಲಾಗಿದೆ.

ಈಗಾಗಲೇ ಬೆಂಗಳೂರಿನಿಂದ ಜೋಗಕ್ಕೆ ವಿಶೇಷ ಬಸ್ ಸೌಲಭ್ಯವನ್ನೂ ಕಲ್ಪಿಸಲಾಗಿದ್ದು, ಕೆಎಸ್​ಆರ್​ಟಿಸಿ ಪರಿಚಯಿಸಿರುವ ವಿಶೇಷ ಬಸ್​ನಲ್ಲಿ (Non AC Sleeper) 30 ಆಸನಗಳ ವ್ಯವಸ್ಥೆ ಇದ್ದು, ಪ್ರತಿ ವಾರಾಂತ್ಯಕ್ಕೆ ಈ ಬಸ್​ ಬೆಂಗಳೂರಿನಿಂದ ಜೋಗಕ್ಕೆ ಸೇವೆ ಒದಗಿಸುತ್ತಿತ್ತು. ಆದರೆ, ಇನ್ನು ಕೊವಿಡ್ ನೆಗೆಟಿವ್ ವರದಿ ಇರುವವರಿಗೆ ಮಾತ್ರ ಜೋಗ ಜಲಪಾತ ವೀಕ್ಷಿಸಲು ಅವಕಾಶ ನೀಡುವುದರಿಂದ ಈ ವಿಶೇಷ ಬಸ್ ಸೌಲಭ್ಯವನ್ನು ರದ್ದು ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಿಂದ ಜೋಗ ಜಲಪಾತ ವೀಕ್ಷಿಸಲು ಬರುವವರಿಗೆ ವಿಶೇಷ ಬಸ್​ ವ್ಯವಸ್ಥೆ ಕಲ್ಪಿಸಿದ ಕೆಎಸ್​ಆರ್​ಟಿಸಿ

Jog Falls Video: ಆಹಾ! ಭೋರ್ಗರೆವ ಜೋಗ ಜಲಪಾತದ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳಿ

(Jog Falls: Covid Negative RT-PCR Report Mandatory for Tourists to visit Shivamogga District Jog Falls)

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ