AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾ: ಶಾಲಾ ಪ್ರವಾಸದ ಬಸ್​ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಉತ್ತರ ಕನ್ನಡದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಿತ್ರದುರ್ಗದಿಂದ ಬಂದಿದ್ದ ವಿದ್ಯಾರ್ಥಿಗಳು ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಬಾರ್​ಗೆ ಬಸ್ ಡಿಕ್ಕಿ ಹೊಡೆದಿದೆ. ಹಾಸನದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.

ಜೋಯಿಡಾ: ಶಾಲಾ ಪ್ರವಾಸದ ಬಸ್​ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಜೋಯಿಡಾ: ಶಾಲಾ ಪ್ರವಾಸದ ಬಸ್​ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 08, 2024 | 6:55 PM

Share

ಕಾರವಾರ, ಡಿಸೆಂಬರ್​ 08: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಪ್ರವಾಸದ ಬಸ್​ ಪಲ್ಟಿಯಾಗಿ 50 ವಿದ್ಯಾರ್ಥಿಗಳ (students) ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸೇಂಟ್ ಅಂತೋನಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

3 ಖಾಸಗಿ ಬಸ್​ನಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಮೌಲಂಗಿ ಬಳಿಯ ಹೋಮ್​​ ಸ್ಟೇನಲ್ಲಿ ವಿದ್ಯಾರ್ಥಿಗಳು ತಂಗಿದ್ದರು. ಬೆಳಗ್ಗೆ ಜಲಸಾಹಸ ಕ್ರಿಡೆ ಆಡಿ ಮರಳಿ ಬರುವಾಗ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಸ್ಥಳೀಯ ಗ್ರಾಮಸ್ಥರು ಸೇರಿ, ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಹೊರತೆಗೆದಿದ್ದಾರೆ. ಬಳಿಕ ಗಾಯಗೊಂಡವರನ್ನು ಎರಡು ಆಂಬ್ಯುಲೆನ್ಸ್ ಹಾಗೂ ಇನ್ನಿತರ ಖಾಸಗಿ ವಾಹನಗಳಲ್ಲಿ ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯಲ್ಲಿ ಬಾರ್​ಗೆ ಡಿಕ್ಕಿ ಹೊಡೆದ ಚಿಗರಿ ಬಸ್

ಮತ್ತೊಂದು ಪ್ರಕರಣದಲ್ಲಿ ಹುಬ್ಬಳ್ಳಿಯ ಭೈರಿದೇವರಕೊಪ್ಪ ಬಳಿ ಬಾರ್​ಗೆ ಚಿಗರಿ ಬಸ್ ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಧಾರವಾಡ ಕಡೆ ಹೊರಟಿದ್ದ ಬಸ್, ಏಕಾಏಕಿ ಬಾರ್​ಗೆ ಡಿಕ್ಕಿ ಹೊಡೆದಿದೆ. ಪದೇ ಪದೇ ಚಿಗರಿ ಬಸ್​ಗಳು ಅಪಘಾತಕ್ಕೆ ಕಾರಣವಾಗತ್ತಿದ್ದು, ಬಸ್ ಚಾಲಕನ ವಿರುದ್ಧ ಪ್ರಯಾಣಿಕರು ರೊಚ್ಚಿಗೆದಿದ್ದರು.

ಬ್ರೇಕ್​ ಫೇಲ್ ಆಗಿ ಡಿವೈಡರ್​ಗೆ ಖಾಸಗಿ ಬಸ್​ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ರಾಷ್ಟ್ರೀಯ ಹೆದ್ದಾರೆ 75ರಲ್ಲಿ ಬ್ರೇಕ್​ ಫೇಲ್ ಆಗಿ ಖಾಸಗಿ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಮಳಲಿ ಬೈಪಾಸ್​ನಲ್ಲಿ ನಡೆದಿದೆ.

ಇದನ್ನೂ ಓದಿ: ಮದುವೆಯಾಗಿದ್ದರೂ 2 ಗರ್ಲ್ ಫ್ರೆಂಡ್ಸ್​​ಗಾಗಿ ಕಳ್ಳತನಕ್ಕೆ ಇಳಿದಿದ್ದ ಆರೋಪಿ ಬಂಧನ

ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ‌ ಪ್ರಯಾಣಿಕರು ಪಾರಾಗಿದ್ದಾರೆ. ಸಕಲೇಶಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.