JSW steel: ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕ ಪೂರೈಕೆಗೆ ಜೆಎಸ್‌ಡಬ್ಲ್ಯೂ ಸ್ಟೀಲ್ ಸಮ್ಮತಿ

ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ತೀವ್ರ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಿತ್ಯ 400 ಟನ್ ಆಮ್ಲಜನಕ ಪೂರೈಕೆಗೆ ಜೆಎಸ್​ಡಬ್ಲ್ಯೂ ಸ್ಟೀಲ್ ಒಪ್ಪಿಕೊಂಡಿದೆ.

JSW steel: ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕ ಪೂರೈಕೆಗೆ ಜೆಎಸ್‌ಡಬ್ಲ್ಯೂ ಸ್ಟೀಲ್ ಸಮ್ಮತಿ
ಆಕ್ಸಿಜನ್ ಸಿಲಿಂಡರ್ (ಪ್ರಾತಿನಿಧಿಕ ಚಿತ್ರ)
Follow us
Srinivas Mata
|

Updated on: Apr 20, 2021 | 8:16 PM

ಬೆಂಗಳೂರು: ಕೊವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು (ಆಕ್ಸಿಜನ್ )ಪೂರೈಕೆ ಮಾಡಲು ಜೆಎಸ್‌ಡಬ್ಲ್ಯೂ ಸ್ಟೀಲ್ ಕಂಪೆನಿ ಒಪ್ಪಿಕೊಂಡಿದೆ. ಮಂಗಳವಾರ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಹಾಗೂ ಜೆಎಸ್‌ಡಬ್ಲ್ಯೂ ಸ್ಟೀಲ್ ಉಪ ವ್ಯವಸ್ಥಾಪಕ ನಿರ್ದೇಶಕ ಡಾ.ವಿನೋದ್ ನೋವಲ್ ನೇತೃತ್ವದ ಪ್ರತಿನಿಧಿಗಳ ಸಭೆಯ ಬಳಿಕ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಕೊವಿಡ್ -19 ಪ್ರಕರಣಗಳ ಸಂಖ್ಯೆಯು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಪರಿಣಾಮವಾಗಿ ಅಪಾರ ಸಂಖ್ಯೆಯ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಇದರಿಂದಾಗಿ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) ದಾಖಲಾದ ರೋಗಿಗಳಿಗೆ ಆಮ್ಲಜನಕದ ಪೂರೈಕೆಯ ಕೊರತೆಯು ತೀವ್ರವಾಗಿದೆ ಎಂದು ಸಭೆಯಲ್ಲಿ ಕಳವಳ ವ್ಯಕ್ತಪಡಿಸಲಾಯಿತು.

ಆಮ್ಲಜನಕದ ಪೂರೈಕೆಯ ಕೊರತೆಯಿಂದ ‌ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ‌ಏರುಪೇರು ಉಂಟಾಗಿದೆ‌. ರಾಜ್ಯದಲ್ಲಿ ಹದಗೆಟ್ಟ ಪರಿಸ್ಥಿತಿಯ ಮಧ್ಯೆ ಸಚಿವ ಮುರುಗೇಶ್ ನಿರಾಣಿ ಅವರು ಆಸ್ಪತ್ರೆಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಸಭೆಯಲ್ಲಿ ಮುಂದಿಟ್ಟರು. ಉಕ್ಕಿನ ಉತ್ಪಾದನೆಯಲ್ಲಿ ಅವುಗಳ ಬಳಕೆಗಾಗಿ ತಮ್ಮ ಘಟಕಗಳಲ್ಲೇ ದ್ರವೀಕೃತ ಆಮ್ಲಜನಕವನ್ನು ಉತ್ಪಾದಿಸುವ ಹಲವಾರು ಉಕ್ಕಿನ ಕಂಪೆನಿಗಳ ಪ್ರತಿನಿಧಿಗಳೊಂದಿಗೆ ಅವರು ಸಭೆ ನಡೆಸಿ, ರಾಜ್ಯದ ವಸ್ತು ಸ್ಥಿತಿಯನ್ನು ಮುಂದಿಟ್ಟರು.

ಕೊವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗುವ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಪರಿಹರಿಸಲು ಬೃಹತ್ ಪ್ರಮಾಣದಲ್ಲಿ ಆಮ್ಲಜನಕವನ್ನು ಉತ್ಪಾದಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ಸಭೆಯಲ್ಲಿ ಹಾಜರಿದ್ದ ಜೆಎಸ್‌ಡಬ್ಲ್ಯು ಸ್ಟೀಲ್‌ನ ಉಪ ವ್ಯವಸ್ಥಾಪಕ ನಿರ್ದೇಶಕ ಡಾ.ವಿನೋದ್ ನೋವಲ್ ಅವರು ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಸಲು ಸಮ್ಮತಿಸಿದರು. ಈ ಬಿಕ್ಕಟ್ಟನ್ನು ನಿಭಾಯಿಸಲು ಕರ್ನಾಟಕ ಸರ್ಕಾರಕ್ಕೆ ಎಲ್ಲ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

“ನಮ್ಮ ಕಂಪೆನಿಗಳ ಬದ್ಧತೆ ಕರ್ನಾಟಕದ ಕಡೆಗೆ. ಬೇಡಿಕೆ ಎದುರಾದರೆ ನಾವು ಹೆಚ್ಚು ಆಮ್ಲಜನಕವನ್ನು ಪೂರೈಸಲು ಸಿದ್ಧರಾಗಿದ್ದೇವೆ,”ಎಂದು ನೋವಲ್ ಸಭೆಯ ನಂತರ ಹೇಳಿದರು. ನಿರ್ಣಾಯಕ ಹಂತದಲ್ಲಿ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಉತ್ಪಾದಿಸಲು ಮತ್ತು ಪೂರೈಸಲು ಉಕ್ಕಿನ ಕಂಪೆನಿಗಳು ಮುಂದಾಗಿವೆ ಎಂದು ಸಚಿವ ನಿರಾಣಿ ಹೇಳಿದರು. ಸಾಂಕ್ರಾಮಿಕ ರೋಗವು ನಮ್ಮ ವ್ಯವಸ್ಥೆಗೆ ದೊಡ್ಡ ಸವಾಲನ್ನು ಸೃಷ್ಟಿಸಿದೆ. ಇದು ಅನೇಕ ಕುಟುಂಬಗಳಿಗೆ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಮಾರಣಾಂತಿಕ ವೈರಸ್ ಅನ್ನು ಹಿಮ್ಮೆಟ್ಟಿಸಲು ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಇದನ್ನೂ ಓದಿ: Oxygen Shortage| ಜೀವವಾಯು ಆಕ್ಸಿಜನ್​ಗಾಗಿ ಬಂಧುಗಳ ಪರದಾಟ.. ಕಣ್ಣ ಮುಂದೆಯೇ ಪತ್ನಿ ಸಾವು, ಪತಿಗೆ ಮುಂದುವರಿದ ಚಿಕಿತ್ಸೆ

ಇದನ್ನೂ ಓದಿ: Oxygen Shortage : ಕೊರೊನಾ ಅಲ್ಲ, ಸಾಮಾನ್ಯ ರೋಗಿಗಳಿಗೂ ಆಕ್ಸಿಜನ್ ಸಿಗುತ್ತಿಲ್ಲ.. ನನ್ ಗಂಡ ಸತ್ತೋದ್ರು, ಮಹಿಳೆ ಕಣ್ಣೀರು

(JSW steel company agreed to supply 400 tons of oxygen in Karnataka everyday. After the meeting with minister Murugesh R. Nirani company agreed to supply oxygen from steel plant)

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ