ಪಾಕ್ ಪರ ಘೋಷಣೆ ಕೇಸ್: ಕಾಶ್ಮೀರಿ ವಿದ್ಯಾರ್ಥಿಗಳ ಬೇಲ್ ವಿಚಾರಣೆ ಏನಾಯ್ತು?
ಹುಬ್ಬಳ್ಳಿ: ಹುಬ್ಬಳ್ಳಿಯ KLE ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿಚಾರ ಸಂಬಂಧ ಮಾರ್ಚ್ 7ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಪ್ರಕರಣ 2ನೇ ಜೆಎಂಎಫ್‌ಸಿ ಕೋರ್ಟ್‌ಗೆ ವರ್ಗಾವಣೆಯಾಗಿರುವ ಹಿನ್ನೆಲೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಸದ್ಯ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆರೋಪಿಗಳಿಂದ ಮಾರ್ಚ್ 5ರಂದು ಜಾಮೀನಿಗೆ ತಕರಾರು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆ ಹುಬ್ಬಳ್ಳಿಯ 3ನೇ JMFC ನ್ಯಾಯಾಲಯ […]
ಹುಬ್ಬಳ್ಳಿ: ಹುಬ್ಬಳ್ಳಿಯ KLE ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿಚಾರ ಸಂಬಂಧ ಮಾರ್ಚ್ 7ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಪ್ರಕರಣ 2ನೇ ಜೆಎಂಎಫ್‌ಸಿ ಕೋರ್ಟ್‌ಗೆ ವರ್ಗಾವಣೆಯಾಗಿರುವ ಹಿನ್ನೆಲೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಸದ್ಯ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆರೋಪಿಗಳಿಂದ ಮಾರ್ಚ್ 5ರಂದು ಜಾಮೀನಿಗೆ ತಕರಾರು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.
ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆ ಹುಬ್ಬಳ್ಳಿಯ 3ನೇ JMFC ನ್ಯಾಯಾಲಯ ಮೂವರು ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಕಾಶ್ಮೀರ ಮೂಲದ ಬಾಸಿತ್ ಸೋಫಿ, ತಾಲಿಬ್ ಮಜೀದ್ ಹಾಗೂ ಅಮೀರ ಮೋಯಿನುದ್ದೀನ ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿಗಳು.
ಇವರನ್ನು ನ್ಯಾಯಾಂಗ ಬಂಧನದ ಅವಧಿ ಮುಗಿದರೂ ಆರೋಪಿಗಳನ್ನ ಕೋರ್ಟ್ ಗೆ ಕರೆತರೋದು ಡೌಟ್ ಆಗಿತ್ತು. ಈ ಹಿಂದೆ ಆರೋಪಿಗಳನ್ನ ಕೋರ್ಟ್ ಗೆ ಕರೆತಂದಾಗ ಹಿಂದೂಪರ ಸಂಘಟನೆಗಳಿಂದ ಹಲ್ಲೆ ನಡೆದಿತ್ತು. ಹೀಗಾಗಿ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.