ನ್ಯಾಯಾಂಗ ಸೇವೆಗಳ ಮುಖ್ಯ ಪರೀಕ್ಷೆ: ತುಂಬು ಗರ್ಭಿಣಿಗೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ

ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲಿ ಹೊಂದಿರುವ ಉನ್ನತ ಗೌರವವನ್ನು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರ ಈ ನಡೆ ಎತ್ತಿಹಿಡಿದಿದೆ ಎಂದು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆಎಸ್ ಭರತ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಂಗ ಸೇವೆಗಳ ಮುಖ್ಯ ಪರೀಕ್ಷೆ: ತುಂಬು ಗರ್ಭಿಣಿಗೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Nov 18, 2023 | 11:42 AM

ಬೆಂಗಳೂರು, ನವೆಂಬರ್ 18: ದಕ್ಷಿಣ ಕನ್ನಡ ಜಿಲ್ಲೆಯ ಎಂಟೂವರೆ ತಿಂಗಳ ಗರ್ಭಿಣಿ ವಕೀಲರೊಬ್ಬರಿಗೆ ಬೆಂಗಳೂರಿಗೆ ತೆರಳಲು ಸಾಧ್ಯವಾಗದ ಕಾರಣ ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ (Mangaluru court) ನ್ಯಾಯಾಂಗ ಸೇವೆಗಳ ಮುಖ್ಯ ಪರೀಕ್ಷೆ ಬರೆಯಲು ಕರ್ನಾಟಕ ಹೈಕೋರ್ಟ್ (Karnataka High Court) ಅನುಮತಿ ನೀಡಿದೆ. ಇದೇ ಮೊದಲ ಬಾರಿಗೆ ನ್ಯಾಯಾಂಗ ಸೇವೆಗಳ ಮುಖ್ಯ ಪರೀಕ್ಷೆಯನ್ನು ಪ್ರತ್ಯೇಕವಾಗಿ ಬರೆಯಲು ಅಭ್ಯರ್ಥಿಯೊಬ್ಬರಿಗೆ ಅನುಕೂಲ ಮಾಡಿಕೊಡಲಾಗಿದೆ.

ವಕೀಲೆ ನೇತ್ರಾವತಿ ಅವರ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್​, ದಕ್ಷಿಣ ಕನ್ನಡದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಅಭ್ಯರ್ಥಿ ಪರೀಕ್ಷೆಯನ್ನು ಬರೆಯಬಹುದು ಎಂದಿದೆ. ಪರೀಕ್ಷೆ ನಡೆಸಲು ಬೆಂಗಳೂರಿನ ಮಹಿಳಾ ನ್ಯಾಯಾಂಗ ಅಧಿಕಾರಿಯನ್ನು ವೀಕ್ಷಕರನ್ನಾಗಿ ವಿಶೇಷವಾಗಿ ಹೈಕೋರ್ಟ್ ನಿಯೋಜಿಸಿದೆ.

ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲಿ ಹೊಂದಿರುವ ಉನ್ನತ ಗೌರವವನ್ನು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರ ಈ ನಡೆ ಎತ್ತಿಹಿಡಿದಿದೆ ಎಂದು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆಎಸ್ ಭರತ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿವಿಲ್ ನ್ಯಾಯಾಧೀಶರ 57 ಹುದ್ದೆಗಳಿಗೆ, 6,000 ಅಭ್ಯರ್ಥಿಗಳು ಜುಲೈ 2023 ರಲ್ಲಿ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿದ್ದರು. ಬೆಂಗಳೂರಿನಲ್ಲಿ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ಅರ್ಹರಾಗಿರುವ 1,022 ಅಭ್ಯರ್ಥಿಗಳಲ್ಲಿ ನೇತ್ರಾವತಿ ಕೂಡ ಒಬ್ಬರಾಗಿದ್ದಾರೆ.

ನೇತ್ರಾವತಿ ಅವರು ತುಂಬು ಗರ್ಭಿಣಿಯಾಗಿರುವುದರಿಂದ ಬೆಂಗಳೂರಿಗೆ ಪ್ರಯಾಣಿಸಲು ಸಾಧ್ಯವಾಗದ ಕಾರಣ ಮಂಗಳೂರಿನಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ಮೇಲಿನ ಎಫ್​ಐಆರ್​ಗೆ ಹೈಕೋರ್ಟ್ ತಡೆ

ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್, ನ್ಯಾಯಮೂರ್ತಿ ಕೆ.ಸೋಮಶೇಖರ್, ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್, ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಮತ್ತು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಹೈಕೋರ್ಟ್​​ನ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಸಮಿತಿಯ ಮುಂದೆ ಮನವಿಯನ್ನು ಸಲ್ಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ