ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್

Gruha Jyothi Scheme: ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಕೆಲವು ಗ್ರಾಹಕರನ್ನು ಗೊಂದಲಕ್ಕೀಡು ಮಾಡಿದೆ. ಇದಕ್ಕೆ ಕಾರಣ, ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿರುವುದು. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನಿಡಿದ್ದಾರೆ.

ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಗೊಂದಲ: ಕ್ಯಾಶ್​ಬ್ಯಾಕ್ ಮಾಡಲಾಗುವುದು ಎಂದ ಕೆ.ಜೆ.ಜಾರ್ಜ್
ಇಂಧನ ಸಚಿವ ಕೆ.ಜೆ.ಜಾರ್ಜ್
Follow us
| Updated By: Rakesh Nayak Manchi

Updated on: Jul 30, 2023 | 9:35 PM

ಚಿಕ್ಕಮಗಳೂರು, ಜುಲೈ 30: ಜೂನ್ ತಿಂಗಳಿನ ವಿದ್ಯುತ್ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳ ಶುಲ್ಕ ಕೂಡ ಸೇರ್ಪಡೆಯಾಗಿದ್ದರೆ ಹೆಚ್ಚುವರಿ ದಿನಗಳ ಹಣ ನಿಮಗೆ ಮರುಪಾವತಿಯಾಗಲಿದೆ. ಈ ಗೊಂದಲದಲ್ಲಿರುವ ಗ್ರಾಹಕರು ಯಾವುದೇ ಬಾಕಿ ಇರಿಸಿಲ್ಲವೆಂದರೆ ಮಾತ್ರ ಹಣ ವಾಪಸ್ ಸಿಗಲಿದೆ. ಒಂದೊಮ್ಮೆ ವಿದ್ಯುತ್ ಬಿಲ್ ಬಾಕಿ ಇರಿಸಿದ್ದರೆ ಮರುಪಾವತಿ ಆಗುವುದಿಲ್ಲ. ಈ ಬಗ್ಗೆ ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಕೆ.ಜೆ. ಜಾರ್ಜ್, ಜೂನ್ ತಿಂಗಳ ವಿದ್ಯುತ್ ಬಿಲ್​ನಲ್ಲಿ ಸ್ವಲ್ಪ ಗೊಂದಲಗಳಿತ್ತು. ಆ ತಿಂಗಳ ಬಿಲ್​ನಲ್ಲಿ ಜುಲೈ ತಿಂಗಳ ಕೆಲವು ದಿನಗಳು ಸೇರಿಕೊಂಡಿವೆ. ಈ ಸಮಸ್ಯೆ ಕೆಲವರಿಗೆ ಮಾತ್ರ ಆಗಿದೆ. ಅಂತಹ ಗ್ರಾಹಕರಿಗೆ ಕ್ರೆಡಿಟ್ ಕೊಡುತ್ತೇವೆ. ಬಾಕಿ ಮೊತ್ತ ಇಲ್ಲದಿದ್ದರೆ ನಾಲ್ಕು ತಿಂಗಳ ಬಳಿಕ ಹಣ ಹಿಂದಿರುಗಿಸುತ್ತೇವೆ. ಜುಲೈ ತಿಂಗಳ ಬಿಲ್ ಕಟ್ಟಿದರೆ ವಾಪಸ್ ಹಣ ನೀಡುತ್ತೇವೆ ಎಂದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್

ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆ ಜಾರಿಯಾಗಿದೆ. ಆದರೆ ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ಅಗಸ್ಟ್ 5 ಕ್ಕೆ ನೀಡಲಾಗುವುದು. ಇದಕ್ಕಾಗಿ ಕಲಬುರಗಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಅವಕಾಶ ನೀಡಲಾಗಿತ್ತು. ಅದರಂತೆ, 1 ಕೋಟಿ 40 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಜುಲೈ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಸಿಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ