ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ

ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೇಡಿಕೆ ಹೆಚ್ಚಾದ ಕಾರಣಕ್ಕೆ ಆಸ್ಪತ್ರೆಯ ಸಿಬ್ಬಂದಿಗಳೇ ಶಾಮಿಲಾಗಿ ಕಳ್ಳತನ ಮಾಡಿರುವ ಶಂಕೆ ಸದ್ಯ ವ್ಯಕ್ತವಾಗಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ
ಆಕ್ಸಿಜನ್ ಸಿಲಿಂಡರ್‌
Follow us
preethi shettigar
|

Updated on: May 08, 2021 | 11:14 AM

ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ತವರು ಕ್ಷೇತ್ರದಲ್ಲಿ ಕಳ್ಳತನವಾಗಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ ಸಿಲೆಂಡರ್​ಗಳನ್ನು ಹುಡುಕಿಕೊಡುವಂತೆ ನಗರದ ಠಾಣೆಗೆ ದೂರು ನೀಡಿದ್ದಾರೆ.

ಕೊರೊನಾ ಎರಡನೇ ಅಲೆ ದೇಶದಾದ್ಯಂತ ಹಬ್ಬಿದ್ದು, ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇದರ ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಿರುವಾಗಲೇ ಆಕ್ಸಿಜನ್ ಕೊರತೆ ಕಂಡುಬಂದಿದ್ದು, ಎಲ್ಲೇಡೆ ಹಾಹಾಕಾರ ಸೃಷ್ಟಿಯಾಗಿದೆ. ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೇಡಿಕೆ ಹೆಚ್ಚಾದ ಕಾರಣಕ್ಕೆ ಆಸ್ಪತ್ರೆಯ ಸಿಬ್ಬಂದಿಗಳೇ ಶಾಮಿಲಾಗಿ ಕಳ್ಳತನ ಮಾಡಿರುವ ಶಂಕೆ ಸದ್ಯ ವ್ಯಕ್ತವಾಗಿದ್ದು, ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಈ ಹಿಂದೆ ಸೋಂಕಿನಿಂದ ಮೃತಪಟ್ಟವರ ಚಿನ್ನಾಭರಣ ಕಳ್ಳತನ ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಇಂದು (ಮೇ 2) ಬೆಳಗಿನ ಜಾವ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಂದಾರ್ಲಹಳ್ಳಿ ಗ್ರಾಮದ 48 ವರ್ಷದ ಲಕ್ಷ್ಮಮ್ಮ ಎಂಬ ಮಹಿಳೆ ಮೃತಪಡುತ್ತಾರೆ. ಶವ ಪಡೆಯಲು ಮೃತಳ ಸಂಬಂಧಿಕರು ಆಸ್ಪತ್ರೆಗೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಮೃತಳ ಸಂಬಂಧಿಕರು ನಗರ ಠಾಣೆ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

ಇದನ್ನೂ ಓದಿ:

ಕೋಲಾರ ಜಿಲ್ಲಾಸ್ಪತ್ರೆಯ ಎಲ್ಲ ಬೆಡ್​ಗಳನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು; ಡಿಸಿಎಂ ಡಾ ಅಶ್ವತ್ಥನಾರಾಯಣ

ಮೊಬೈಲ್​ ಚಾರ್ಜ್​ ಹಾಕೋಕೂ ದುಡ್ಡು ಕೊಡ್ಬೇಕು, ಡೈಪರ್​ ತಂದುಕೊಟ್ರೆ ಅದನ್ನೂ ಮಾರ್ತಾರೆ​, ಇವರೇ ನಮ್ಮಪ್ಪನ್ನ ಸಾಯಿಸಿದ್ದು: ಮಕ್ಕಳ ಆಕ್ರೋಶ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ