Karnataka Dam Water Level: ಜೂ. 13ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಜೂ. 13ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಹಾರಾಷ್ಟ್ರ, ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಗುಳೇದಗುಡ್ಡ ತಾಲೂಕಿನ ಆಸಂಗಿ ಬ್ಯಾರೇಜ್ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸಂಗಿ ಬ್ಯಾರೇಜ್ನ 16 ಗೇಟ್ಗಳನ್ನು ತೆರೆಯಲಾಗಿದೆ. ಇದರಿಂದ ಬ್ಯಾರೇಜ್ ನೀರು ಅವಲಂಬಿತ ಹತ್ತಾರು ಗ್ರಾಮಗಳ ರೈತರು ಖುಷಿಯಾಗಿದ್ದಾರೆ. ಹಾಗಾದರೆ ಜೂನ್ 13 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 24.08 | 20.62 | 7490 | 430 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 5.29 | 5.02 | 4266 | 41 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 6.59 | 7.78 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 13.48 | 12.18 | 1760 | 451 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 14.62 | 14.10 | 3450 | 1924 |
ಕಬಿನಿ ಜಲಾಶಯ (Kabini Dam) | 696.13 | 19.52 | 8.42 | 4.05 | 2863 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 14.75 | 25.11 | 1395 | 342 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 8.26 | 4.21 | 348 | 1338 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 10.21 | 15.01 | 1093 | 250 |
ವರಾಹಿ ಜಲಾಶಯ (Varahi Dam) | 594.36 | 31.10 | 3.54 | 2.16 | 238 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.15 | 2.57 | 532 | 200 |
ಸೂಫಾ (Supa Dam) | 564.00 | 145.33 | 32.22 | 36.37 | 706 | 2241 |
ನಾರಾಯಣಪುರ ಜಲಾಶಯ (Narayanpura Dam) | 492.25 | 15.87 | 20.36 | 15.31 | 966 | 193 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 18.35 | 25.22 | 0 | 147 |
ವಿಜಯಪುರ ಜಿಲ್ಲೆಯ ಡೋಣಿ ನದಿಯಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿ ತೀವ್ರವಾಗಿದ್ದು, ನೀರಿನ ಮಟ್ಟ ದಿನದಿಂದ ಏರಿಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ