Karnataka Dam Water Level: ಜೂ. 13ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

|

Updated on: Jun 13, 2024 | 6:00 AM

ಕರ್ನಾಟಕದ ಜಲಾಶಯಗಳ ಜೂ. 13ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ. 13ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
Follow us on

ಮಹಾರಾಷ್ಟ್ರ, ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಗುಳೇದಗುಡ್ಡ ತಾಲೂಕಿನ ಆಸಂಗಿ ಬ್ಯಾರೇಜ್ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸಂಗಿ ಬ್ಯಾರೇಜ್​ನ 16 ಗೇಟ್​ಗಳನ್ನು ತೆರೆಯಲಾಗಿದೆ. ಇದರಿಂದ ಬ್ಯಾರೇಜ್ ನೀರು ಅವಲಂಬಿತ ಹತ್ತಾರು ಗ್ರಾಮಗಳ ರೈತರು ಖುಷಿಯಾಗಿದ್ದಾರೆ. ಹಾಗಾದರೆ ಜೂನ್​ 13 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 24.08 20.62 7490 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.29 5.02 4266 41
ಮಲಪ್ರಭಾ ಜಲಾಶಯ (Malaprabha Dam) 633.80 37.73 6.59 7.78 0 194
ಕೆ.ಆರ್.ಎಸ್ (KRS Dam) 38.04 49.45 13.48 12.18 1760 451
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.62 14.10 3450 1924
ಕಬಿನಿ ಜಲಾಶಯ (Kabini Dam) 696.13 19.52 8.42 4.05 2863 300
ಭದ್ರಾ ಜಲಾಶಯ (Bhadra Dam) 657.73 71.54 14.75 25.11 1395 342
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.26 4.21 348 1338
ಹೇಮಾವತಿ ಜಲಾಶಯ (Hemavathi Dam) 890.58 37.10 10.21 15.01 1093 250
ವರಾಹಿ ಜಲಾಶಯ (Varahi Dam) 594.36 31.10 3.54 2.16 238 0
ಹಾರಂಗಿ ಜಲಾಶಯ (Harangi Dam)​​ 871.38 8.50 3.15 2.57 532 200
ಸೂಫಾ (Supa Dam) 564.00 145.33 32.22 36.37 706 2241
ನಾರಾಯಣಪುರ ಜಲಾಶಯ (Narayanpura Dam) 492.25 15.87 20.36 15.31 966 193
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.35 25.22 0 147

ವಿಜಯಪುರ ಜಿಲ್ಲೆಯ ಡೋಣಿ ನದಿಯಲ್ಲಿ ಪ್ರಸ್ತುತ ಪ್ರವಾಹ ಪರಿಸ್ಥಿತಿ ತೀವ್ರವಾಗಿದ್ದು, ನೀರಿನ ಮಟ್ಟ ದಿನದಿಂದ ಏರಿಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ