World Yoga Day 2021: 1 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆಯಂದು ವರ್ಚುವಲ್ ಯೋಗ
ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಕೊವಿಡ್ 19, ಯುವಜನರು, ಯೋಗ, ಧ್ಯಾನʼ ಎಂಬ ಶೀರ್ಷಿಕೆ ಅಡಿಯಲ್ಲಿ ಯೋಗ ದಿನಾಚರಣೆ ಆಚರಿಸಲಾಗುವುದು. ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಸುರೇಶ್ ಕುಮಾರ್, ಸಚಿವ ನಾರಾಯಣಗೌಡ ಭಾಗಿಯಾಗಲಿದ್ದಾರೆ. ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದರು.
ಬೆಂಗಳೂರು: ಇದೇ 21ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದ್ದು, 1 ಲಕ್ಷ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಚುವಲ್ ವೇದಿಕೆಗಳ ಮೂಲಕ ಭಾಗಿಯಾಗಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿಳಿಸಿದರು.
ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ. ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಅಂದಿನ ಸರಕಾರಿ ಕಾರ್ಯಕ್ರಮದಲ್ಲಿ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.
ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಕೊವಿಡ್ 19, ಯುವಜನರು, ಯೋಗ, ಧ್ಯಾನʼ ಎಂಬ ಶೀರ್ಷಿಕೆ ಅಡಿಯಲ್ಲಿ ಯೋಗ ದಿನಾಚರಣೆ ಆಚರಿಸಲಾಗುವುದು. ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಸುರೇಶ್ ಕುಮಾರ್, ಸಚಿವ ನಾರಾಯಣಗೌಡ ಭಾಗಿಯಾಗಲಿದ್ದಾರೆ. ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದರು.
Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ
( June 21 World Yoga Day 1 lakh higher education students will be performed Virtually yoga in Kanteerava Indoor Stadium)
Published On - 8:33 pm, Tue, 15 June 21