AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ […]

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!
ಸಾಧು ಶ್ರೀನಾಥ್​
| Edited By: |

Updated on:Jun 27, 2020 | 7:31 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ BSY ನಿರ್ಧಾರ ಮಾಡಿದ್ದಾರೆ.

ಶನಿವಾರ ಕೂಡಾ ಲಾಕ್​ಡೌನ್​ಗೆ ಸಿಎಂ ಒಲವು ಭಾನುವಾರದ ಜೊತೆ ಶನಿವಾರ ಕೂಡಾ ಲಾಕ್​ಡೌನ್ ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಸಿಎಂ ಒಲವು ತೋರಿಸಿದ್ದಾರೆ. ಆದರೆ ತಕ್ಷಣಕ್ಕೆ ವಾರದಲ್ಲಿ ಎರಡು ದಿನ ಲಾಕ್​ಡೌನ್ ಬೇಡ, ಒಂದೆರಡು ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಕೊರೊನಾ ಸೋಂಕು ಪ್ರಮಾಣ ತಹಬದಿಗೆ ಬಂದರೆ ನಂತರ ಶನಿವಾರ ಮತ್ತು ಭಾನುವಾರ ಎರಡು ದಿನ ಲಾಕ್​ಡೌನ್ ಮಾಡಬಹುದು.

ಅಗಲೂ ನಿಯಂತ್ರಣ ‌ಸಾಧ್ಯವಾಗದಿದ್ದಲ್ಲಿ ಮತ್ತೆ ಱಂಡಮ್ ಟೆಸ್ಟ್ ಮಾಡುವುದು, ವೈದ್ಯಕೀಯ ಸೌಲಭ್ಯ ಹೆಚ್ಚು ಮಾಡುವತ್ತ ಗಮನ ಹರಿಸಬಹುದು. ಈ ಸಂಬಂಧ ಇಂದಿ‌ನ ಸಭೆಯಲ್ಲಿ ಸಿಎಂಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಸದ್ಯ ಭಾನುವಾರ ಮಾತ್ರ ಲಾಕ್​ಡೌನ್ ಮಾಡುವ ಬಗ್ಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.

ಭಾನುವಾರ ಮದ್ಯ ಸಿಗಲ್ಲ ಪ್ರತಿ ಭಾನುವಾರ ಲಾಕ್​ಡೌನ್ ಇರುವ ಹಿನ್ನೆಲೆಯಲ್ಲಿ ಜುಲೈ 5ರಿಂದ ರಾಜ್ಯದಲ್ಲಿ ಭಾನುವಾರದಂದು ಮದ್ಯ ಸಿಗಲ್ಲ. ನಾಳೆಯಿಂದಲೇ ಮದ್ಯ ಮಾರಾಟದ ಅವಧಿ 1 ಗಂಟೆ ಕಡಿತವಾಗಲಿದೆ. ರಾತ್ರಿ 9ಗಂಟೆಯ ಬದಲು ರಾತ್ರಿ 8 ಗಂಟೆಗೆ ಮದ್ಯದಂಗಡಿ ಬಂದ್ ಆಗಲಿದೆ.

ಅಗತ್ಯಸೇವೆ ಹೊರತುಪಡಿಸಿ ಉಳಿದೆಲ್ಲಾ ಬಂದ್ ಭಾನುವಾರದಂದು ಆಟೋ, ಟ್ಯಾಕ್ಸಿ, ಕ್ಯಾಬ್‌, ಬಸ್‌ ಯಾವುದೂ ಓಡಾಡಲ್ಲ. ಅಂಗಡಿ-ಮುಂಗಟ್ಟುಗಳು ಎಲ್ಲವೂ ಬಂದ್ ಆಗಲಿದೆ. ಮೆಡಿಕಲ್ ಶಾಪ್, ದಿನಸಿ ಅಂಗಡಿ, ಹಾಲು ಸೇರಿದಂತೆ ಅಗತ್ಯ ಸೇವೆಗಳನ್ನ ಹೊರತುಪಡಿಸಿ ಉಳಿದೆಲ್ಲವೂ ಬಂದ್‌ ಆಗಲಿದೆ.

Published On - 7:06 pm, Sat, 27 June 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ