Karnataka Dam Water Level: ಜೂ. 2ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜೂ. 01ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ. 2ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ

Updated on: Jun 02, 2024 | 7:47 AM

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದೆ. ಉತ್ತಮ ಮಳೆಯಾಗುತ್ತಿರುವುದರಿಂದ ನೀರಿನ ಮೂಲಗಳಿಗೆ ಜೀವ ಕಳೆ ಬಂದಿದೆ. ಹಳ್ಳ-ಕೊಳ್ಳ, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ರಾಜ್ಯದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕೆಆರ್​ಎಸ್​, ಕಬಿನಿ, ಘಟಪ್ರಭ, ನಾರಾಯಾಣಪುರ ಜಲಾಶಯಗಳಲ್ಲಿ ಕಳೆದ ಬಾರಿಗಿಂತ ಈ ವರ್ಷ ಹೆಚ್ಚು ನೀರು ಸಂಗ್ರಹವಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ (Karnataka Dam Water Level) ಇಂದು (ಜೂ. 02) ಎಷ್ಟು ನೀರು ಸಂಗ್ರಹವಾಗಿದೆ, ಒಳಹರಿವು, ಹೊರಹರಿವು ಎಷ್ಟಿದೆ? ಇಲ್ಲಿದೆ ವಿವರ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 21.23 21.41 0 1725
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.34 4.78 270 90
ಮಲಪ್ರಭಾ ಜಲಾಶಯ (Malaprabha Dam) 633.80 37.73 6.76 8.38 0 194
ಕೆ.ಆರ್.ಎಸ್ (KRS Dam) 38.04 49.45 12.66 10.75 1233 545
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.78 16.73 0 2128
ಕಬಿನಿ ಜಲಾಶಯ (Kabini Dam) 696.13 19.52 7.51 4.38 286 300
ಭದ್ರಾ ಜಲಾಶಯ (Bhadra Dam) 657.73 71.54 14.36 25.26 483 379
ಘಟಪ್ರಭಾ ಜಲಾಶಯ (Ghataprabha Dam) 662.91 51.00 10.40 5.36 0 5551
ಹೇಮಾವತಿ ಜಲಾಶಯ (Hemavathi Dam) 890.58 37.10 9.90 16.63 201 250
ವರಾಹಿ ಜಲಾಶಯ (Varahi Dam) 594.36 31.10 3.78 2.27 434 0
ಹಾರಂಗಿ ಜಲಾಶಯ (Harangi Dam)​​ 871.38 8.50 3.04 2.62 242 200
ಸೂಫಾ (Supa Dam) 564.00 145.33 34.28 41.61 31 4232
ನಾರಾಯಣಪುರ ಜಲಾಶಯ (Narayanpura Dam) 492.25 33.31 15.24 15.62 0 2220
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.18 25.76 0 147

ಜಲಾಶಯಗಳಲ್ಲಿ ನೀರು ಸಂಗ್ರಹ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದು ಜನರಲ್ಲಿ ಸಂತಸ ಮೂಡಿಸಿದೆ. ವಿಶೇಷವಾಗಿ ಕಾವೇರಿ ನದಿ ತೀರಿದ ರೈತರಿಗೆ ಹೋದ ಜೀವ ಮರಳಿ ಬಂದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Sun, 2 June 24