Karnataka Dam Water Level: ಜೂ. 5ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Jun 05, 2024 | 7:05 AM

ಕರ್ನಾಟಕದ ಜಲಾಶಯಗಳ ಜೂ. 05ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ. 5ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಂಚನಬೆಲೆ ಅಣೆಕಟ್ಟು
Follow us on

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳಿಗೆ ನೀರು ಹರಿದು ಬರುತ್ತಿದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ನೀರಿಲ್ಲದೆ ಪರದಾಡುತ್ತಿದ್ದ ಪ್ರದೇಶದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಕೆಆರ್​ಎಸ್​, ಕಬಿನಿ, ಘಟಪ್ರಭಾ ಜಲಾಶಯಗಳಲ್ಲಿ ಒಳಹರಿವು ಹೆಚ್ಚಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ (Karnataka Dam Water Level) ಇಂದು (ಜೂ.05) ಒಳ, ಹೊರ ಹರಿವು ಮತ್ತು ಎಷ್ಟು ನೀರು ಸಂಗ್ರಹವಾಗಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 15.87 15.56 8515 241
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.46 4.94 659 74
ಮಲಪ್ರಭಾ ಜಲಾಶಯ (Malaprabha Dam) 633.80 37.73 6.71 8.21 0 194
ಕೆ.ಆರ್.ಎಸ್ (KRS Dam) 38.04 49.45 12.86 10.97 1586 549
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.07 16.14 0 2478
ಕಬಿನಿ ಜಲಾಶಯ (Kabini Dam) 696.13 19.52 7.65 4.33 1178 300
ಭದ್ರಾ ಜಲಾಶಯ (Bhadra Dam) 657.73 71.54 14.36 25.22 433 341
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.99 4.29 0 5387
ಹೇಮಾವತಿ ಜಲಾಶಯ (Hemavathi Dam) 890.58 37.10 9.93 16.16 908 250
ವರಾಹಿ ಜಲಾಶಯ (Varahi Dam) 594.36 31.10 3.59 2.20 136 0
ಹಾರಂಗಿ ಜಲಾಶಯ (Harangi Dam)​​ 871.38 8.50 3.04 2.61 283 200
ಸೂಫಾ (Supa Dam) 564.00 145.33 34.38 41.17 134 4395
ನಾರಾಯಣಪುರ ಜಲಾಶಯ (Narayanpura Dam) 492.25 15.87 15.56 15.62 8515 241
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.16 25.65 0 147

ಜೂನ್ 8 ರವರೆಗೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ