ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮ: ತನಿಖಾ ವರದಿ ಸಲ್ಲಿಕೆ, ಕಾನೂನು ಕ್ರಮಕ್ಕೆ ಶಿಫಾರಸು

ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಸಂಬಂಧ ತನಿಖೆಗಾಗಿ ನಾಗಮೋಹನ್​ ದಾಸ್​ ಆಯೋಗ ಅವರನ್ನು ರಚನೆ ಮಾಡಲಾಗಿತ್ತು. ಇದೀಗ ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಏನಾದರೂ ಅಕ್ರಮಗಳು ನಡೆದಿವೆಯಾ ಎಂದು ಆಯೋಗ ಪರಿಶೀಲಿಸಿ ವರದಿ ಸಿದ್ಧಪಡಿಸಿದ್ದು, ಈ ವರದಿಯನ್ನು ನಾಗಮೋಹನ್​ ದಾಸ್​ ಆಯೋಗವು ಇಂದು (ಆಗಸ್ಟ್ 30) ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದೆ.

ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮ: ತನಿಖಾ ವರದಿ ಸಲ್ಲಿಕೆ, ಕಾನೂನು ಕ್ರಮಕ್ಕೆ ಶಿಫಾರಸು
Bbmp Irregularities report
Updated By: ರಮೇಶ್ ಬಿ. ಜವಳಗೇರಾ

Updated on: Aug 30, 2025 | 8:38 PM

ಬೆಂಗಳೂರು (ಆಗಸ್ಟ್​ 30) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್​ ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗವು ಇಂದು (ಆಗಸ್ಟ್ 30) ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯನವರಿಗೆ ತಮ್ಮ ವರದಿಯನ್ನು ಸಲ್ಲಿಸಿತು. ಇನ್ನು ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8900 ಪುಟಗಳನ್ನು ಹೊಂದಿದೆ. ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಹಲವು ಲೋಪಗಳು ಕಂಡು ಬಂದಿದ್ದು, ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸು ಮಾಡಿದೆ. ಜೊತೆಗೆ ಸುಧಾರಣಾ ಕ್ರಮ ಕೈಗೊಳ್ಳಲು ಸಹ ಶಿಫಾರಸು ಮಾಡಿದೆ.

ಲೋಪಗಳನ್ನು ಎತ್ತಿ ಹಿಡಿದ ಆಯೋಗ

ಈ ತನಿಖಾ ವರದಿಯು ಅನುಬಂಧಗಳೊಂದಿಗೆ ಒಟ್ಟು 8900 ಪುಟಗಳನ್ನು ಹೊಂದಿದೆ. ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಿ ಹಲವು ಲೋಪಗಳು ಕಂಡು ಬಂದಿದ್ದು, ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸು ಮಾಡಿದೆ. ಜೊತೆಗೆ ಸುಧಾರಣಾ ಕ್ರಮ ಕೈಗೊಳ್ಳಲು ಸಹ ಶಿಫಾರಸು ಮಾಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಲು ಉಪ ಮುಖ್ಯಮಂತ್ರಿಗಳು 2023 ರಲ್ಲಿ ಟಿಪ್ಪಣಿ ಮೂಲಕ ಮುಖ್ಯಮಂತ್ರಿಗಳಿಗೆ ಕೋರಿದ್ದರು.

2023 ರ ಆಗಸ್ಟ್ 5 ರಂದು ತಜ್ಞರನ್ನೊಳಗೊಂಡ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ರಚಿಸಿ ಪರಿಪೂರ್ಣ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು. ಬಳಿಕ 2023 ರ ಡಿಸೆಂಬರ್ 15 ರಂದು ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ಹಿಂಪಡೆದು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್​ ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಯನ್ನು ವರ್ಗಾಯಿಸಲಾಗಿತ್ತು.

2024ರ ಏಪ್ರಿಲ್ 20 ರಂದು ಸರ್ಕಾರ ಅಧಿಸೂಚನೆ ಹೊರಡಿಸಿ ಈ ತನಿಖೆಯನ್ನು ವಿಚಾರಣಾ ಆಯೋಗದ ಮತ್ತು ವಿಶೇಷ ತನಿಖಾ ಸಮಿತಿಗಳ ಪರಿಶೀಲನಾ ಅಂಶಗಳನ್ನು ಸಹ ಒಳಗೊಂಡಂತೆ ವಿಚಾರಣಾ ಆಯೋಗವು ತನಿಖೆಯನ್ನು ಮುಂದುವರೆಸಿತ್ತು. ಈ ಹಿನ್ನೆಲೆಯಲ್ಲಿ ಆಯೋಗವು ತನಿಖೆ ನಡೆಸಲು ಕೆಳಕಂಡ ಪರಿಶೀಲನಾ ಮಾರ್ಗವನ್ನು ಅನುಸರಿಸಿತ್ತು.

ಕಾಮಗಾರಿಗಳ ಕಡತ ಪರಿಶೀಲನೆ, ಕಾಮಗಾರಿಗಳ ಸ್ಥಳ ಪರಿಶೀಲನೆ, ಕಾಮಗಾರಿಗಳ ಲೆಕ್ಕ ಪರಿಶೀಲನೆ ಮಾಡಲಾಗಿತ್ತು. ರ‍್ಯಾಂಡಮ್ ಆಯ್ಕೆ ಮೂಲಕ ಆಯ್ಕೆಯಾದ 528 ಮತ್ತು ಇತರೆ 233 ಒಟ್ಟು 761 ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ ಹಲವು ನ್ಯೂನತೆಗಳನ್ನು ಪತ್ತೆ ಮಾಡಿದೆ. ಅಂತಿಮವಾಗಿ ವಿಚಾರಣಾ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.