ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಪ್ರಮಾಣ ವಚನ ಸ್ವೀಕಾರ

| Updated By: ganapathi bhat

Updated on: Oct 11, 2021 | 5:33 PM

Justice Ritu Raj Awasthi: ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಂದ ಪ್ರಮಾಣ ವಚನ ಬೋಧನೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಪ್ರಮಾಣ ವಚನ ಸ್ವೀಕಾರ
ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ
Follow us on

ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಇಂದು (ಅಕ್ಟೋಬರ್ 11) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಂದ ಪ್ರಮಾಣ ವಚನ ಬೋಧನೆ ಮಾಡಲಾಗಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಸಚಿವ ಗೋವಿಂದ ಕಾರಜೋಳ, ಸಿಎಸ್ ರವಿಕುಮಾರ್, ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ, ಎಜಿ ಪ್ರಭುಲಿಂಗ ನಾವದಗಿ ಉಪಸ್ಥಿತರಿದ್ದರು. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅವಸ್ಥಿ ಇದೀಗ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಿಸಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಿಸಲಾಗಿತ್ತು. ಗುಜರಾತ್ ಸಿಜೆಯಾಗಿ ನ್ಯಾ.ಅರವಿಂದ್ ಕುಮಾರ್ ಅವರನ್ನೂ, ತೆಲಂಗಾಣ ಸಿಜೆಯಾಗಿ ಸತೀಶ್ ಚಂದ್ರ ಶರ್ಮ ಅವರನ್ನು ನೇಮಕಗೊಳಿಸಲಾಗಿತ್ತು

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದವರ ಪಟ್ಟಿ ಹೀಗಿದೆ:

– ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

–  ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಂಜಿತ್ ವಿ. ಮೊರೆ ಅವರನ್ನು, ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಮಧ್ಯಪ್ರದೇಶ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರನ್ನು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

– ಹಿಮಾಚಲ ಪ್ರದೇಶ ನ್ಯಾಯಮೂರ್ತಿ ಆರ್.ವಿ. ಮಲಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಅಲಹಾಬಾದ್ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

– ಕರ್ನಾಟಕ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಛತ್ತೀಸ್​ಗಢದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಒಬ್ಬರು ಜಡ್ಜ್​ ಸೇರಿ 7 ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಪದವಿ ತರಗತಿಗಳಲ್ಲಿ ಕನ್ನಡ ವಿಷಯ ಅಧ್ಯಯನ ಕಡ್ಡಾಯ ಆದೇಶ; ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

Published On - 5:32 pm, Mon, 11 October 21