Justice Ritu Raj Awasthi: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ; ಸುಪ್ರೀಂಕೋರ್ಟ್ ಶಿಫಾರಸಿನಂತೆ ಅಧಿಸೂಚನೆ

| Updated By: guruganesh bhat

Updated on: Oct 09, 2021 | 7:19 PM

Karnataka High Court: ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಿಸಲಾಗಿದೆ.

Justice Ritu Raj Awasthi: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ತಿ; ಸುಪ್ರೀಂಕೋರ್ಟ್ ಶಿಫಾರಸಿನಂತೆ ಅಧಿಸೂಚನೆ
ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ
Follow us on

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ರಿತುರಾಜ್ ಅವಸ್ತಿ ಅವರನ್ನು ನೇಮಿಸಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಸುಪ್ರೀಂಕೋರ್ಟ್ ಶಿಫಾರಸಿನಂತೆ ಈ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 13 ರಾಜ್ಯಗಳ ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಾಧೀಶರನ್ನು ನೇಮಿಸಲಾಗಿದೆ. ಗುಜರಾತ್ ಸಿಜೆಯಾಗಿ ನ್ಯಾ.ಅರವಿಂದ್ ಕುಮಾರ್ ಅವರನ್ನೂ, ತೆಲಂಗಾಣ ಸಿಜೆಯಾಗಿ ಸತೀಶ್ ಚಂದ್ರ ಶರ್ಮ ಅವರನ್ನು ನೇಮಕಗೊಳಿಸಲಾಗಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದವರ ಪಟ್ಟಿ ಹೀಗಿದೆ:

– ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

–  ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಂಜಿತ್ ವಿ. ಮೊರೆ ಅವರನ್ನು, ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಮಧ್ಯಪ್ರದೇಶ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರನ್ನು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

– ಹಿಮಾಚಲ ಪ್ರದೇಶ ನ್ಯಾಯಮೂರ್ತಿ ಆರ್.ವಿ. ಮಲಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಅಲಹಾಬಾದ್ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

– ಕರ್ನಾಟಕ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಛತ್ತೀಸ್​ಗಢದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: 

ಪದವಿ ತರಗತಿಗಳಲ್ಲಿ ಕನ್ನಡ ವಿಷಯ ಅಧ್ಯಯನ ಕಡ್ಡಾಯ ಆದೇಶ; ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

ನನಗಾಗಿ ಸುಪ್ರೀಂಕೋರ್ಟ್​ ಬದಲಾಯ್ತು: ನ್ಯಾಯಮೂರ್ತಿ ಚಂದ್ರಚೂಡ್ ಸಹಾಯಕ ರಾಹುಲ್ ಬಜಾಜ್ ಬರಹ

Published On - 7:10 pm, Sat, 9 October 21