AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಲ್ವಡಿ ಕೃಷ್ಣರಾಜ ಒಡೆಯರ್ ಸೇವೆ ಎಂದಿಗೂ ಮರೆಯಲಾಗದು’: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಶಿಕ್ಷಣ ಸಂಸ್ಥೆಯ ಹೊಸ ಕಟ್ಟಡಕ್ಕೆ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಬ್ಲಾಕ್‌ ಎಂದು ಹೆಸರು ಇಡಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಾಲ್ಗೊಂಡಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ ಹೆಸರು ಇಟ್ಟಿದ್ದಕ್ಕೆ ಸಂತಸ ಆಗಿದೆ ಎಂದು ಅವರು ಹೇಳಿದರು. ಬಳಿಕ ಮಾತನಾಡಿದ ಅವರು ಈ ಸಂಸ್ಥೆಯ ಕಾರ್ಯಗಳನ್ನು ಶ್ಲಾಘಿಸಿದರು.

‘ನಾಲ್ವಡಿ ಕೃಷ್ಣರಾಜ ಒಡೆಯರ್ ಸೇವೆ ಎಂದಿಗೂ ಮರೆಯಲಾಗದು’: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
‘ನಾಲ್ವಡಿ ಕೃಷ್ಣರಾಜ ಒಡೆಯರ್’ ಬ್ಲಾಕ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಮದನ್​ ಕುಮಾರ್​
|

Updated on: Aug 23, 2024 | 8:42 PM

Share

ಡಾ. ಬಿಎನ್‌ವಿ ಜ್ಯೋತಿ ಮೆಮೋರಿಯಲ್ ಎಡ್ಯುಕೇಶನಲ್ ಟ್ರಸ್ಟ್‌ನ ಅಂಗ ಸಂಸ್ಥೆಯಾದ ‘ಜ್ಯೋತಿ ಇನ್ಸಿಟ್ಯೂಟ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್’ನ ಹೊಸ ಕಟ್ಟಡಕ್ಕೆ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಬ್ಲಾಕ್‌ ಅನ್ನು ಮೈಸೂರು ಸಂಸ್ಥಾನ ಅರಸರು ಮತ್ತು ಕೊಡಗು-ಮೈಸೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ಆ ಬಳಿಕ ಅವರು ಮಾತನಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ನೀಡಿದ್ದ ಕೊಡುಗೆಯನ್ನು ಯದುವೀರ್ ಅವರು ಸ್ಮರಿಸಿದರು.

ನೂತನ ಕಟ್ಟಡದ ಉದ್ಘಾಟನೆ ಬಳಿಕ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತಾಡಿದರು. ‘ಈ ನೂತನ ಕಟ್ಟಡಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಇಟ್ಟಿರುವುದಕ್ಕೆ ಸಂತಸ ಆಗಿದೆ. ಅವರ ಹೆಸರು ಇಡೀ ಕರುನಾಡಿಗೆ ಹೆಮ್ಮೆಯ ವಿಷಯವಾಗಿದೆ. ತಮ್ಮ ಸಂಪೂರ್ಣ ಜೀವನವನ್ನು ಅವರು ಸಾಮಾಜಿಕ ಹಾಗೂ ಆರ್ಥಿಕ ನ್ಯಾಯಕ್ಕಾಗಿ ಮುಡುಪಾಗಿಟ್ಟಿದ್ದರು’ ಎಂದರು ಯದುವೀರ್.

‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವೆಯನ್ನು ಪರಿಗಣಿಸಿ, ಜ್ಯೋತಿ ಶಿಕ್ಷಣ ಸಂಸ್ಥೆಯ ಒಂದು ಕಟ್ಟಡಕ್ಕೆ ಅವರ ಹೆಸರನ್ನೇ ಇಡಲಾಗಿದೆ. ಸಂಸ್ಥೆಯು ಸಕರಾತ್ಮಕವಾಗಿ ಕೆಲಸಗಳನ್ನು ಮಾಡುತ್ತಿರುವುದಕ್ಕೆ ಶ್ಲಾಘಿಸಬೇಕಾದ ವಿಷಯ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೆ ಉತ್ತಮ ಪರಿಣಾಮ ಬೀರುತ್ತವೆ. ಜ್ಯೋತಿ ಸಂಸ್ಥೆಗೆ ಐಎಸ್‌ಓ ಪ್ರಮಾಣ ಪತ್ರ ಬಂದಿದೆ. ಇದು ಮುಂದೆ ದೊಡ್ಡ ಮಟ್ಟದಲ್ಲಿ ಬೆಳೆಯಬೇಕೆಂದು ಪ್ರಾರ್ಥನೆ ಮಾಡುತ್ತೇನೆ. ಇಲ್ಲಿಗೆ ಬಂದಾಗ ಸಕರಾತ್ಮಕವಾದ ಕಂಪನ ಬಂತು. ಇದೇ ರೀತಿಯಲ್ಲಿ ಉಳಿದ ಎಲ್ಲಾ ಸಂಸ್ಥೆಗಳು ಕೆಲಸ ಮಾಡಿದರೆ ಸಮಾಜದ ಏಳಿಗೆ ನಿಶ್ಚಿತವಾಗಿ ಆಗುತ್ತದೆ’ ಎಂದು ಯದುವೀರ್ ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವ; ಸಂಸದ ಯದುವೀರ್ ಭಾಗಿ

ಇದೇ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ರಾಜೇಶ್ ಕೆ. ಅವರು ಮಾತನಾಡಿ, ಸಂಸ್ಥೆಯು ಬೆಳೆದು ಬಂದ ರೀತಿಯನ್ನು ಮೆಲುಕು ಹಾಕಿದರು. ಸುಂದರ ಅರ್ಥಪೂರ್ಣ ಸಮಾರಂಭದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್, ಟ್ರಸ್ಟ್‌ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಬಿ.ವಿ. ಸೀತಾ, ನಿರ್ದೇಶಕರುಗಳು, ಪ್ರಾಂಶುಪಾಲರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ, ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ