AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಇತರರಿಗೂ ಮಾದರಿಯಾದ ಹಾವೇರಿಯ ಕಾಗಿನೆಲೆ ಪಿಎಸ್ಐ

ವೃದ್ಧೆ ನೋಡುವುದಕ್ಕೆ ಹುಚ್ಚಿಯಂತಾಗಿದ್ದು, ಅನಾಥಳಾಗಿ ವಾಸ ಮಾಡುತ್ತಿದ್ದಳು. ಇದನ್ನು ಗಮನಿಸಿ ಪಿಎಸ್ಐ ಸರ್ ಗಮನಕ್ಕೆ ಬಂದಾಗ ಅವರು ತಕ್ಷಣಕ್ಕೆ ಸ್ಥಳಕ್ಕೆ ದಾವಿಸಿ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ. ಪಿಎಸ್ಐ ಅವರ ಕಾರ್ಯ ಶ್ಲಾಘನೀಯ ಎಂದು ಸ್ಥಳೀಯರಾದ ಉಮೇಶ್​ ಎಂಬುವವರು ಮೆಚ್ಚುಗೆ ವ್ಯಕ್ತಪಡಿಸಿದರು.

ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಇತರರಿಗೂ ಮಾದರಿಯಾದ ಹಾವೇರಿಯ ಕಾಗಿನೆಲೆ ಪಿಎಸ್ಐ
ವೃದ್ಧೆಯನ್ನು ವಿಚಾರಿಸುತ್ತಿರುವ ಪಿಎಸ್ಐ ಡಿ.ಕೆ.ಬಳಿಗಾರ
sandhya thejappa
| Edited By: |

Updated on:Mar 09, 2021 | 2:34 PM

Share

ಹಾವೇರಿ: ಖಾಕಿ ತೊಟ್ಟಿರುವ ಪೊಲೀಸರು ಅಂದರೆ ಇತ್ತೀಚಿನ ದಿನಗಳಲ್ಲಿ ಮಾನವೀಯತೆ ಇಲ್ಲದವರು ಎಂಬ ಭಾವನೆ ಮೂಡುವಂತಾಗಿದೆ. ಆದರೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಪಿಎಸ್ಐ ಖಾಕಿಯಲ್ಲೂ ಮಾನವೀಯತೆ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಕಾಗಿನೆಲೆ ಗ್ರಾಮದಲ್ಲಿ ಅರವತ್ತೈದು ವರ್ಷದ ವೃದ್ಧೆಯೊಬ್ಬಳು ಅನಾಥವಾಗಿ ಎಲ್ಲೆಂದರಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಮಾಹಿತಿದಾರರೊಬ್ಬರು ಪಿಎಸ್ಐಗೆ ತಿಳಿಸುತ್ತಾರೆ. ಅದರಂತೆ ತಕ್ಷಣ ಸ್ಥಳಕ್ಕೆ ದಾವಿಸಿದ ಪಿಎಸ್ಐ ಡಿ.ಕೆ.ಬಳಿಗಾರ ವೃದ್ಧೆಯ ಮಾಹಿತಿ ಕಲೆ ಹಾಕಿದರು.

ಅನಾಥವಾಗಿದ್ದ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿದರು. ಅರವತ್ತೈದು ವರ್ಷದ ವೃದ್ಧೆ ಗೌರಮ್ಮನನ್ನು ಕಂಡು ವಿಚಾರಿಸಿದ ಪಿಎಸ್ಐ ಕೂಡಲೆ ಖಾಸಗಿ ವಾಹನದ ವ್ಯವಸ್ಥೆ ಮಾಡಿ ವೃದ್ಧೆಯನ್ನು ಶಿಗ್ಗಾಂವಿ ಪಟ್ಟಣದಲ್ಲಿರುವ ವೃದ್ಧಾಶ್ರಮಕ್ಕೆ ಸೇರಿಸಿದರು. ಗೌರಮ್ಮಳ ಪತಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಪತಿಯ ಮರಣದ ನಂತರ ಗೌರಮ್ಮ ಅಲ್ಲಿ ಇಲ್ಲಿ ವಾಸ ಮಾಡಿಕೊಂಡು ಅನಾಥೆಯಂತೆ ಜೀವನ ಸಾಗಿಸುತ್ತಿದ್ದಳು. ಮಾಹಿತಿದಾರರೊಬ್ಬರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಿಎಸ್ಐ ಬಳಿಗಾರ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸುವ ಕೆಲಸವನ್ನು ಮಾಡಿದ್ದಾರೆ.

ಮಕ್ಕಳಿದ್ದರು ಅನಾಥೆ ಮೂಲತಃ ತಿಮ್ಮಾಪುರ ಗ್ರಾಮದವಳಾದ ವೃದ್ಧೆ ಗೌರಮ್ಮಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಗೌರಮ್ಮಳಿಗೆ ಇಬ್ಬರು ಗಂಡು ಮತ್ತು ಒಬ್ಬ ಹೆಣ್ಣು ಮಗಳು ಸೇರಿದಂತೆ ಒಟ್ಟು ಮೂವರು ಮಕ್ಕಳಿದ್ದಾರೆ. ಆದರೆ ಯಾವುದೋ ಕಾರಣಕ್ಕೆ ಗೌರಮ್ಮಳೆ ಮನೆಬಿಟ್ಟು ಬಂದು ಅಲ್ಲಿ ಇಲ್ಲಿ ವಾಸ ಮಾಡಿಕೊಂಡಿದ್ದಾಳೋ ಅಥವಾ ಮಕ್ಕಳೆ ವೃದ್ಧೆಯನ್ನು ಆರೈಕೆ ಮಾಡಲಾಗದೆ ಮನೆಯಿಂದ ಹೊರಗೆ ಹಾಕಿದ್ದಾರೋ ಗೊತ್ತಿಲ್ಲ. ಗೌರಮ್ಮ ಮಾತ್ರ ಥೇಟ್ ಅನಾಥಳಂತೆ ಕಾಗಿನೆಲೆ ಗ್ರಾಮ ಸೇರಿದಂತೆ ಅಲ್ಲಲ್ಲಿ ವಾಸವಾಗಿದ್ದಳು.

ಅನಾಥವಾಗಿ ಕಂಡ ವೃದ್ಧೆ

ವೃದ್ಧಾಶ್ರಮಕ್ಕೆ ಸೇರಿಸಿದ ಕಾಗಿನೆಲೆ ಪಿಎಸ್ಐ ಡಿ.ಕೆ.ಬಳಿಗಾರ

ವೃದ್ಧೆ ನೋಡುವುದಕ್ಕೆ ಹುಚ್ಚಿಯಂತಾಗಿದ್ದು, ಅನಾಥಳಾಗಿ ವಾಸ ಮಾಡುತ್ತಿದ್ದಳು. ಇದನ್ನು ಗಮನಿಸಿ ಪಿಎಸ್ಐ ಸರ್ ಗಮನಕ್ಕೆ ಬಂದಾಗ ಅವರು ತಕ್ಷಣಕ್ಕೆ ಸ್ಥಳಕ್ಕೆ ದಾವಿಸಿ ವೃದ್ಧೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ. ಪಿಎಸ್ಐ ಅವರ ಕಾರ್ಯ ಶ್ಲಾಘನೀಯ ಎಂದು ಸ್ಥಳೀಯರಾದ ಉಮೇಶ್​ ಎಂಬುವವರು ಮೆಚ್ಚುಗೆ ವ್ಯಕ್ತಪಡಿಸಿದರು.

ತಂದೆ, ತಾಯಿ ದೇವರಿಗೆ ಸಮಾನ. ಪ್ರತಿಯೊಬ್ಬರು ತಂದೆ, ತಾಯಿಯರ ಪಾಲನೆ ಪೋಷಣೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಹೆತ್ತ ತಂದೆ, ತಾಯಿಯರಿಗೆ ತುತ್ತು ಅನ್ನ ಹಾಕಲು ಕೆಲವು ಮಕ್ಕಳು ಹಿಂದೇಟು ಹಾಕುತ್ತಿರುವುದು ಕಳವಳಕಾರಿವಿಚಾರ. ಯಾರೂ ಕೂಡ ಹೆತ್ತವರನ್ನು ಮನೆಯಿಂದ ಹೊರಗೆ ಹಾಕುವ ಕೆಲಸ ಮಾಡಬಾರದು. ವೃದ್ಧ ತಂದೆ ತಾಯಿಗಳನ್ನು ಆರೈಕೆ ಮಾಡಬೇಕಾದದ್ದು ಪ್ರತಿಯೊಬ್ಬರ ಮಕ್ಕಳ ಕರ್ತವ್ಯ ಎಂದು ವೃದ್ಧಾಶ್ರಮಕ್ಕೆ ಸೇರಿಸಿದ ಕಾಗಿನೆಲೆ ಪಿಎಸ್ಐ ಡಿ.ಕೆ.ಬಳಿಗಾರ ಹೇಳಿದರು.

ಇದನ್ನೂ ಓದಿ

ಹಸುಗಳ ಹಾಲು ಕರೆಯುವ ಸ್ಪರ್ಧೆ: ನಾ ಮುಂದು ತಾ ಮುಂದು ಎಂದು ಬಂದ ಪಶುಪಾಲಕರು

ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ರಾಯಚೂರು ರೈತರು: ನೀರು ಬಿಡುಗಡೆಗೆ ರೈತರ ಆಗ್ರಹ

Published On - 11:39 am, Tue, 9 March 21

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ