AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರ್ಗಿ-ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ

ಕಲಬುರ್ಗಿ ಪಾಲಿಕೆಯ ಮೇಯರ್ ಸ್ಥಾನದ ಚುನಾವಣೆ ನ.20ಕ್ಕೆ ಹಾಗೂ ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆ ನ.18ಕ್ಕೆ ನಿಗದಿಯಾಗಿತ್ತು.

ಕಲಬುರ್ಗಿ-ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 16, 2021 | 7:34 PM

Share

ಕಲಬುರ್ಗಿ: ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಲಬುರ್ಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಸ್ಥಾನದ ಚುನಾವಣೆಗಳನ್ನು ಮುಂದೂಡಿ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಕಲಬುರ್ಗಿ ಪಾಲಿಕೆಯ ಮೇಯರ್ ಸ್ಥಾನದ ಚುನಾವಣೆ ನ.20ಕ್ಕೆ ಹಾಗೂ ಬಳ್ಳಾರಿ ಪಾಲಿಕೆ ಮೇಯರ್ ಚುನಾವಣೆ ನ.18ಕ್ಕೆ ನಿಗದಿಯಾಗಿತ್ತು. ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಮೇಯರ್ ಸ್ಥಾನದ ಚುನಾವಣೆ ಮುಂದೂಡಲಾಗಿದೆ.

ಐವರು ಹಾಲಿ ಎಂಎಲ್​ಸಿಗಳಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ ಕರ್ನಾಟಕದ 25 ವಿಧಾನ ಪರಿಷತ್​​ (Vidhan Parishad) ಕ್ಷೇತ್ರಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಬಿಜೆಪಿಯ (BJP) ಹಾಲಿ ವಿಧಾನ ಪರಿಷತ್ ಸದಸ್ಯರ ಪೈಕಿ ಐವರಿಗೆ ಮತ್ತೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎಂ.ಕೆ. ಪ್ರಾಣೇಶ್, ಬಿ.ಜಿ. ಪಾಟೀಲ್, ಮಹಾಂತೇಶ್​​ ಕವಟಗಿಮಠ, ಪ್ರದೀಪ್ ಶೆಟ್ಟರ್​ಗೆ ಮತ್ತೆ ಟಿಕೆಟ್ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಡಿ.10ಕ್ಕೆ ವಿಧಾನ ಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಕರ್ನಾಟಕದ ವಿಧಾನ ಪರಿಷತ್​​ನ 25 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 10ರಂದು ಮತದಾನ ನಡೆಸುವುದಾಗಿ ಘೋಷಣೆ ಮಾಡಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 26 ಕೊನೆಯ ದಿನವಾಗಿದೆ.

ಡಿಸೆಂಬರ್ 10ರ ಶುಕ್ರವಾರ ಚುನಾವಣೆ ನಡೆಯಲಿದೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ಮಾಡಬಹುದಾಗಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 16ರ ವೇಳೆಗೆ ಎಲ್ಲ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಬೀದರ್ 1 , ಕಲಬುರ್ಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಮೈಸೂರು ,2, ಚಿಕ್ಕಮಗಳೂರು 1, ಹಾಸನ 1, ತುಮಕೂರು 1, ಮಂಡ್ಯ 1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1 ಹಾಗೂ ಕೊಡಗು ಜಿಲ್ಲೆಯ ಒಂದು ಕ್ಷೇತ್ರಕ್ಕೆ ಡಿ. 10ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ ಇದನ್ನೂ ಓದಿ: ಡಿ. 10ಕ್ಕೆ ವಿಧಾನ ಪರಿಷತ್ ಕ್ಷೇತ್ರಗಳಿಗೆ ಚುನಾವಣೆ; ಜನವರಿ 5ಕ್ಕೆ ತೆರವಾಗಲಿರುವ ಸ್ಥಾನಗಳಿವು

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು