Sakala: ಸಕಾಲ ಸೇವೆ ನೀಡುವಲ್ಲಿ ಕಲಬುರಗಿ ಮತ್ತೆ ಕರ್ನಾಟಕಕ್ಕೆ ಅಗ್ರಸ್ಥಾನ

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​, ಸಕಾಲ ಸೇವೆ ನೀಡುವಲ್ಲಿ ಕಲಬುರಗಿ ಮತ್ತೆ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದ್ದಾರೆ. ಇದಕ್ಕಾಗಿ ಶ್ರಮಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಡಿಸಿ ಅವರು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

Sakala: ಸಕಾಲ ಸೇವೆ ನೀಡುವಲ್ಲಿ ಕಲಬುರಗಿ ಮತ್ತೆ ಕರ್ನಾಟಕಕ್ಕೆ ಅಗ್ರಸ್ಥಾನ
ಸಕಾಲ ಸೇವೆ ನೀಡುವಲ್ಲಿ ಕಲಬುರಗಿ ಮತ್ತೆ ರಾಜ್ಯದಲ್ಲಿಯೇ ಅಗ್ರಸ್ಥಾನ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 04, 2024 | 6:01 PM

ಕಲಬುರಗಿ, ಆಗಸ್ಟ್​ 4: ಸಾರ್ವಜನಿಕರಿಗೆ ಕಾಲಮಿತಿಯಲ್ಲಿಯೇ ಸರ್ಕಾರಿ ಸೇವೆ ಒದಗಿಸುವ “ಸಕಾಲ” ಯೋಜನೆಯಡಿ (Sakala services) ಕಳೆದ ಜುಲೈ ತಿಂಗಳಲ್ಲಿ ಅರ್ಜಿ‌ ವಿಲೇವಾರಿಯಲ್ಲಿ ಕಲಬುರಗಿ (Kalaburagi) ಜಿಲ್ಲೆ ರಾಜ್ಯದಲ್ಲಿಯೇ ಮತ್ತೆ ಮೊದಲನೇ ಸ್ಥಾನ ಪಡೆದುಕೊಂಡಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಸಲ್ಲಿಕೆಯಾದ 1,58,990 ಅರ್ಜಿಗಳಲ್ಲಿ 1,46,088 ಅರ್ಜಿ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗಿದ್ದು, ತಿಂಗಳ ಕೊನೆಯಲ್ಲಿ ಕೇವಲ 911 ಅರ್ಜಿ ಮಾತ್ರ ಬಾಕಿ ಉಳಿದುಕೊಂಡಿವೆ.

ಕಾಲಮಿತಿಯಲ್ಲಿ ವಿಲೇವಾರಿಗೆ ಶೇ.30, ವಿಳಂಬಕ್ಕೆ ಶೇ.10, ತಿರಸ್ಕಾರಕ್ಕೆ ಶೇ.10, ಒಂದು‌ ಲಕ್ಷ ಜನಸಂಖ್ಯೆಗೆ ಸಲ್ಲಿಕೆಯಾದ ಅರ್ಜಿಗಳಿಗೆ ಶೇ.30 ಹಾಗೂ ಬಾಕಿ ಅರ್ಜಿಗಳಿಗೆ ಶೇ.20 ಅಂಕಗಳನ್ನು ನೀಡಿ ಒಟ್ಟಾರೆ ರ‍್ಯಾಂಕಿಂಗ್​ ತೆಗೆಯಲಾಗಿದ್ದು, ಕಲಬುರಗಿ ಮುಂಚೂಣಿಯಲ್ಲಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃಷ್ಣಭೈರೇಗೌಡ ಇದ್ದಾಗಲೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು, ಬೆಳಗಾವಿ ಹೊರತುಪಡಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಅರ್ಜಿ ಸ್ವೀಕೃತಗೊಂಡಿದ್ದು, ವಿಲೇವಾರಿಯಲ್ಲಿಯೂ ಕಲಬುರಗಿ‌ ಜಿಲ್ಲೆ ಮುಂದಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳ ಪ್ರಯತ್ನದ ಫಲವಾಗಿ ಜಿಲ್ಲೆ ಇಂದು ರಾಜ್ಯದಲ್ಲಿಯೇ ಮೊದಲನೇ ಸ್ಥಾನದಲ್ಲಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲಾ ಅಧಿಕಾರಿ-ಸಿಬ್ಬಂದಿಗಳಿಗೆ ಡಿ.ಸಿ‌. ಅವರು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಕಂದಾಯ ಸೇವೆಯಲ್ಲಿ ನಂಬರ್-1 ಅಬಾಧಿತ

ಜುಲೈ ತಿಂಗಳ ಅರ್ಜಿ ವಿಲೇವಾರಿಯಲ್ಲಿ ಎಲ್ಲಾ ಇಲಾಖೆಯನ್ನೊಳಗೊಂಡಂತೆ ಕಲಬುರಗಿ ಜಿಲ್ಲೆ ನಂಬರ್ 1 ಸ್ಥಾನದಲ್ಲಿದ್ದರೆ, ಇತ್ತ ಸುಮಾರು 59 ಸೇವೆಗಳನ್ನು ನೀಡುವ ಸರ್ಕಾರದ ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಯು ಕಳೆದ 6 ತಿಂಗಳಿಂದ ಅರ್ಜಿ‌ ವಿಲೇವಾರಿಯಲ್ಲಿ ಸತತ ಪ್ರಥಮ ಸ್ಥಾನದಲ್ಲಿದೆ. ಜಾತಿ-ಆದಾಯ, ವಾಸಸ್ಥಳ, 371ಜೆ ಮೀಸಲಾತಿ, ಸಿಂಧುತ್ವ, ಪಹಣಿ, ಮೊಟೇಷನ್, ಖಾತಾ, ಕೃಷಿಯೇತರ ಭೂಮಿ ಪರಿವರ್ತನೆ ಹೀಗೆ ಅನೇಕ ಸೇವೆಗಳನ್ನು ಇಲಾಖೆ ಸಕಾಲನಡಿ ಕಾಲಮಿತಿಯಲ್ಲಿ ನೀಡುತ್ತಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ತಮ್ಮ ಇಲಾಖೆಯ ಸಾಧನೆ ಬಿಚ್ಚಿಟ್ಟರು.

ಇದನ್ನೂ ಓದಿ: ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನೀರಿಗೆ ಬರ: ಆಪರೇಷನ್ ಥಿಯೇಟರ್ ಬಂದ್​

ಇಂದು, ನಾಳೆ, ಇನ್ನಿಲ್ಲ, ಹೇಳಿದ ದಿನ ತಪ್ಪೊಲ್ಲ! ಎಂಬ ಘೋಷವಾಕ್ಯದ ಸಕಾಲ ಯೋಜನೆಯಡಿ ರಾಜ್ಯದ 100 ಇಲಾಖೆ, ಸಂಸ್ಥೆಗಳ 1,181 ಸೇವೆಗಳನ್ನು ಕಾಲಮಿತಿಯಲ್ಲಿ ನೀಡಲಾಗುತ್ತಿದೆ. ಕಾಲಮಿತಿಯಲ್ಲಿ ಸೇವೆ ಸಿಗದೆ ಅರ್ಜಿದಾರ ಮೇಲ್ಮನವಿ ಸಲ್ಲಿಸಿದಲ್ಲಿ ಪ್ರತಿ ದಿನದ ವಿಳಂಬಕ್ಕೆ ಅಧಿಕಾರಿ-ಸಿಬ್ಬಂದಿಗಳಿಗೆ ದಂಡ ವಿಧಿಸಿ ಆ ಹಣ ಅರ್ಜಿದಾರರಿಗೆ ನೀಡುವ ಅಪರೂಪದ ಯೋಜನೆ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:59 pm, Sun, 4 August 24

ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ