AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಮಾಲೀಕನ ತಲೆಗೆ ಗನ್​ ಇಟ್ಟು ದರೋಡೆ

ಕಲಬುರಗಿಯ ಸರಾಫ್ ಬಜಾರ್‌ನಲ್ಲಿರುವ ಚಿನ್ನದ ಅಂಗಡಿಯಲ್ಲಿ ಹಗಲು ದರೋಡೆ ನಡೆದಿದೆ. 2-3 ಕೆಜಿ ಚಿನ್ನಾಭರಣವನ್ನು ಖದೀಮರು ದೋಚಿಕೊಂಡು ಪರಾರಿಯಾಗಿದ್ದಾರೆ. ಬ್ರಹ್ಮಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕ ಮನೆ ಮಾಡಿದೆ.

ಕಲಬುರಗಿ: ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಮಾಲೀಕನ ತಲೆಗೆ ಗನ್​ ಇಟ್ಟು ದರೋಡೆ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 11, 2025 | 3:43 PM

Share

ಕಲಬುರಗಿ, ಜುಲೈ 11: ಕಲಬುರಗಿ (Kalaburagi) ನಗರದ ಸರಾಫ್ ಬಜಾರ್​​ನಲ್ಲಿರುವ ಮಾಲೀಕ್ ಚಿನ್ನದ ಅಂಗಡಿಗೆ (Jewelry Shop) ಹಾಡಹಗಲೇ ಖದೀಮರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಸಿನೀಮಿಯ ಶೈಲಿಯಲ್ಲಿ ಅಂಗಡಿಗೆ ನುಗ್ಗಿದ ಖದೀಮರು 2-3 ಕೆಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ತಲೆಗೆ ಕ್ಯಾಪ್​​, ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದಿದ್ದ ನಾಲ್ವರು ಅಂಗಡಿ ಮಾಲೀಕನಿಗೆ ಗನ್​​ ತೋರಿಸಿ ಬೆದರಿಸಿ, ದರೋಡೆ ಮಾಡಿದ್ದಾರೆ.

ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ ದರೋಡೆಯಾಗಿದೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಲಬುರಗಿ ನಗರದ ಬ್ರಹ್ಮಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಬ್ರಹ್ಮಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ನೋಡಿ: ಕಲಬುರಗಿ: ಎಟಿಎಂನಲ್ಲಿರುವ ಸಿಸಿಟಿವಿ ಕೆಮೆರಾಗಳಿಗೆ ಕಪ್ಪುಮಸಿ ಸ್ಪ್ರೇ ಮಾಡಿ ₹ 18 ಲಕ್ಷ ದರೋಡೆ

ಇದನ್ನೂ ಓದಿ
Image
ಬೆಂಗಳೂರು: ಏಕಾಏಕಿ ಶಾಪ್​ಗೆ ನುಗ್ಗಿ 2 ಕೋಟಿ ರೂ ದೋಚಿದ ದುಷ್ಕರ್ಮಿಗಳು
Image
ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಕೋಲಾರದಲ್ಲಿ SBI ಎಟಿಎಂ ದೋಚಿದ ಖದೀಮರು!
Image
ಕಲಬುರಗಿ APMC ವರ್ತಕರಿಗೆ 15 ಕೋಟಿ ರೂ. ಪಂಗನಾಮ ಹಾಕಿದ ದಾಲ್​ ಮಿಲ್‌ ಮಾಲೀಕ
Image
ಬೀದರ್​ ಬೆನ್ನಲ್ಲೇ ಕಲಬುರಗಿಯಲ್ಲಿ ATMಗೆ ಕನ್ನ: ದರೋಡೆ ಕೇಸ್​ ಹೆಚ್ಚಳ!

ಪ್ರಕರಣ ಸಂಬಂಧ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾತನಾಡಿ, ಮಾಲೀಕನ ತಲೆಗೆ ಗನ್ ಇಟ್ಟು ದರೋಡೆ ಮಾಡಿದ್ದಾರೆ. ದರೋಡೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡ ರಚನೆ ಮಾಡಿದ್ದೇವೆ. ಆದಷ್ಟು ಬೇಗ ದರೋಡೆಕೋರರ ಬಂಧನ ಮಾಡುತ್ತೇವೆ. ಅಂಗಡಿಯಲ್ಲಿದ್ದ 2-3 ಕೆಜಿ ಚಿನ್ನ ದರೋಡೆಯಾಗಿದೆ. ಈ ಅಂಗಡಿಯವರು ಪ್ರತಿನಿತ್ಯ 15-20 ಗ್ರಾಂ ಚಿನ್ನಾಭರಣ ಮಾರಟ ಮಾಡುತ್ತಿದ್ದರು ಎಂದು ಹೇಳಿದರು.

ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು

ಘಟನೆ ಕುರಿತು ಪ್ರತ್ಯಕ್ಷದರ್ಶಿ ರಾಜಶೇಖರ್ ಮಾತನಾಡಿ, ದರೋಡೆಯಾದ ಬಳಿಕ ಅಂಗಡಿ ಮಾಲೀಕ ಕಿರುಚಿಕೊಂಡರು. ಕಿರುಚಿದ್ದನ್ನು ಕೇಳಿ ನಾನು ಓಡಿ ಹೋಗಿ ನೋಡಿದೆ. ಅಂಗಡಿ ಮಾಲೀಕರ ಕೈಕಾಲು ಕಟ್ಟಲಾಗಿತ್ತು. ನಾನು ಓಡಿ ಹೋಗವಷ್ಟರಲ್ಲಿ ದರೋಡೆಕೋರರು ಪರಾರಿಯಾಗಿದ್ದರು. ಹಾಡಹಗಲೇ ಈ ರೀತಿಯಾಗಿದ್ದು ನಮ್ಮಲ್ಲಿ ಭಯ ಮೂಡಿಸಿದೆ. ನಮಗಂತೂ ಸಾಕಷ್ಟು ಆತಂಕವಾಗಿದೆ. ಪ್ರತಿನಿತ್ಯ ಇಲ್ಲೇ ಇರುತ್ತಿದ್ದೆವು, ಇಲ್ಲಿಯವರೆಗೂ ಈ ರೀತಿ ಆಗಿರಲಿಲ್ಲ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Fri, 11 July 25

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ