ಸೆಕ್ಯುರಿಟಿ ಗಾರ್ಡ್ನಿಂದ ಬಾತ್ ರೂಮ್ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್: ಕಂಬಕ್ಕೆ ಕಟ್ಟಿ ಥಳಿಸಿದ ಜನರು
ಕಲಬುರಗಿ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ಮೆಂಟ್ನಲ್ಲಿ ಸೆಕ್ಯುರಿಟಿ ಗಾರ್ಡ್ನಿಂದ ಬಾತ್ ರೂಮ್ನಲ್ಲಿದ್ದ ಮಹಿಳೆಯ ವಿಡಿಯೋ ಮಾಡಿರುವಂತಹ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ಅಂಡರ್ ಗ್ರೌಂಡ್ನಲ್ಲಿರುವ ಕಂಬಕ್ಕೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್ ನನ್ನು ಕಟ್ಟಿ ಹಾಕಿ ಅಪಾರ್ಟ್ಮೆಂಟ್ನ ನಿವಾಸಿಗಳು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕಲಬುರಗಿ, ಏಪ್ರಿಲ್ 19: ಸೆಕ್ಯುರಿಟಿ ಗಾರ್ಡ್ನಿಂದ ಬಾತ್ ರೂಮ್ನಲ್ಲಿದ್ದ ಮಹಿಳೆಯ (woman) ವಿಡಿಯೋ (Video) ಮಾಡಿರುವಂತಹ ಘಟನೆ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಅಪಾರ್ಟ್ಮೆಂಟ್ನಲ್ಲಿ ಬಾಡಿಗೆಯಿದ್ದ ಮಹಿಳೆಯ ವಿಡಿಯೋವನ್ನು ಸೆಕ್ಯುರಿಟಿ ಗಾರ್ಡ್ ರೆಕಾರ್ಡ್ ವಿಶ್ವನಾಥ್ ಎಂಬಾತ ಮಾಡುತ್ತಿರುವುದನ್ನು ಗಮನಿಸಿದ ಮಹಿಳೆ, ತಕ್ಷಣ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅಪಾರ್ಟ್ಮೆಂಟ್ಗೆ ಆಗಮಿಸಿದ ಮಹಿಳೆಯ ಗಂಡ ಸೆಕ್ಯುರಿಟಿ ಗಾರ್ಡ್ ನನ್ನು ಹಿಡಿದು ಥಳಿಸಿದ್ದಾರೆ.
ಅಪಾರ್ಟ್ಮೆಂಟ್ ಅಂಡರ್ ಗ್ರೌಂಡ್ನಲ್ಲಿರುವ ಕಂಬಕ್ಕೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್ ನನ್ನು ಕಟ್ಟಿ ಹಾಕಿ ಅಪಾರ್ಟ್ಮೆಂಟ್ನ ನಿವಾಸಿಗಳು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸರಗಳ್ಳತನ, ಮನಗಳವು ಮಾಡುತ್ತಿದ್ದ 6 ಆರೋಪಿಗಳ ಬಂಧನ
ಬೆಂಗಳೂರು: ಸರಗಳ್ಳತನ, ಮನೆಗಳ್ಳತನ ಮಾಡುತ್ತಿದ್ದ ಅಕಾಶ್, ನಾಗೇಶ್, ಪ್ರಸನ್ನ, ಪುನೀತ್, ಶಿವಲಿಂಗ ಮತ್ತು ಪ್ರತಾಪ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ಇದ್ದ 10.82 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಕುಶಾಲನಗರ: ಹಿಟ್ ಆ್ಯಂಡ್ ರನ್ಗೆ ಬಿಜೆಪಿ ಕಾರ್ಯಕರ್ತ ಬಲಿ, ಒಬ್ಬನ ಬಂಧನ
ಹಲವು ವರ್ಷಗಳಿಂದ ತಲೆಮರಿಸಿಕೊಂಡಿದ್ದ ಐವರು ರೌಡಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆ ಯತ್ನ, ಹಲ್ಲೆ ಸೇರಿ ಹಲವಾರು ಪ್ರಕಾರಣದಲ್ಲಿ ಆರೋಪಿಗಳು ಭಾಗಿಯಾಗಿದ್ದರು. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದರು.
ಇದನ್ನೂ ಓದಿ: ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ
ಸಿದ್ದಾಪುರ ಪೊಲೀಸರಿಂದ ಮಂಜುನಾಥ್ ಅಲಿಯಾಸ್ ಜಾನಿ, ಬನಶಂಕರಿ ಪೊಲೀಸರಿಂದ ಸೈಯದ್ ಅಲಿಯಾಸ್ ಸ್ಕೂಟರ್ ಜಾವಿದ್, ಸೈಯದ್ ಇಮ್ರಾನ್, ಬಲಿಂಗ್ ಅಲಿಯಾಸ್ ಅಸ್ಕರ್, ಮುಬಾರಕ್ ಅಲಿಯಾಸ್ ಬಾಬು, ಸೈಯದ್ ಅಲಿಯಾಸ್ ಕುರುಪಳ್ಳಿ ಬಂಧಿತರು. ಸದ್ಯ ಆರು ಜನರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಬೆಂಗಳೂರಿನ ಹೊರಮಾವಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (28) ಕೊಲೆಯಾದ ಯುವಕ. ಕೌಟುಂಬಿಕ ಕಲಹದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.