ಕಲಬುರಗಿಯಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿದ್ದ ಬಸ್​ ಅಪಘಾತ

ಕಲಬುರಗಿಯಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿದ್ದ ಬಸ್​ ಅಪಘಾತ

ಕಲಬುರಗಿ: ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿದ್ದ ಬಸ್​ ಅಪಘಾತವಾಗಿರುವ ಘಟನೆ ಕಲಬುರಗಿ ನಗರದ ವೆಂಕಟಗಿರಿ ಹೋಟೆಲ್ ಬಳಿ ನಡೆದಿದೆ. ಚನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಹೊರಟಿದ್ದಾರೆ.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click on your DTH Provider to Add TV9 Kannada