ಕಲಬುರಗಿಯಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿದ್ದ ಬಸ್ ಅಪಘಾತ
ಕಲಬುರಗಿ: ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿದ್ದ ಬಸ್ ಅಪಘಾತವಾಗಿರುವ ಘಟನೆ ಕಲಬುರಗಿ ನಗರದ ವೆಂಕಟಗಿರಿ ಹೋಟೆಲ್ ಬಳಿ ನಡೆದಿದೆ. ಚನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಹೊರಟಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿದ್ದ ಬಸ್ ಅಪಘಾತವಾಗಿರುವ ಘಟನೆ ಕಲಬುರಗಿ ನಗರದ ವೆಂಕಟಗಿರಿ ಹೋಟೆಲ್ ಬಳಿ ನಡೆದಿದೆ. ಚನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಹೊರಟಿದ್ದಾರೆ.
ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.