ಕಲಬುರಗಿ, ಜೂನ್ 29: ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಉಪಹಾರ ಮಾಡಿದ್ದು, ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫುಡ್ ಪಾಯಿಸನ್ನಿಂದಾಗಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗಾಣಗಾಪುರದ ದತ್ತನ ದರ್ಶನಕ್ಕೆ ಬಂದವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ
ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ ನಡೆಸಿದೆ. ಕಲಬುರಗಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಒಂದೆಡೆ ಸರಕಾರ ಹಾಲಿನ ದರ ಹೆಚ್ಚಳ ಮಾಡಿ ಜನ ಸಾಮಾನ್ಯರಿಗೆ ಹೊರೆ ಹಾಕಿದೆ. ಇನ್ನೊಂದೆಡೆ ರೈತರಿಗೆ ಹಾಲಿನ ಪ್ರೋತ್ಸಾಹ ಧನವೂ ಬಿಡುಗಡೆ ಮಾಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಬಸವರಾಜ್ ಮತ್ತಿಮೂಡ ಸೇರಿದಂತೆ ಬಿಜೆಪಿ ಮುಖಂಡರು, ರೈತ ಮೋರ್ಚಾ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:23 pm, Sat, 29 June 24