ಕಲಬುರಗಿ: ಹೆತ್ತವರು ಬುದ್ಧಿ ಹೇಳಿದ್ದೇ ತಪ್ಪಾಯ್ತಾ? ಸರಿಯಾಗಿ ಓದು ಎಂದಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ

ಸರಿಯಾಗಿ ಓದು ಎಂದು ಪೋಷಕರು ಬೈಯ್ದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಇನ್ನು ಇದೇ ಕಲಬುರಗಿಯಲ್ಲಿ ಎರಡು ವರ್ಷದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಈ ಎರಡು ಪ್ರತ್ಯೇಕ ಘಟನೆಯ ವಿವರ ಈ ಕೆಳಗಿನಂತಿದೆ.

ಕಲಬುರಗಿ: ಹೆತ್ತವರು ಬುದ್ಧಿ ಹೇಳಿದ್ದೇ ತಪ್ಪಾಯ್ತಾ? ಸರಿಯಾಗಿ ಓದು ಎಂದಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ
ಸಾಂದರ್ಭಿಕ ಚಿತ್ರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಮೇಶ್ ಬಿ. ಜವಳಗೇರಾ

Updated on:Aug 25, 2023 | 9:40 AM

ಕಲಬುರಗಿ, (ಆಗಸ್ಟ್ 25): ಕಾಲೇಜಿಗೆ (Collège) ಹೋಗಿ ಚೆನ್ನಾಗಿ ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ಪಿಯು ವಿದ್ಯಾರ್ಥಿನಿ(Student) ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ. ಕಾವೇರಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪ್ರತಿದಿನ ತಪ್ಪದೇ ಕಾಲೇಜಿಗೆ ಹೋಗಿ ಚೆನ್ನಾಗಿ ಓದುವಂತೆ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಕಾವೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾವೇರಿ ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಸರಿಯಾಗಿ ಓದು ಎಂದು ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಕಳೆದ ರಾತ್ರಿ ಮನೆಯಿಂದ ಹೊರಗೆ ಹೋಗಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕ ಆಕ್ರಂದನ ಮುಗಿಲು ಮುಟ್ಟಿದೆ. ಬುದ್ಧಿ ಹೇಳಿದ್ದೇ ತಪ್ಪಾಯ್ತಾ? ಎಂದು ಗೋಳಾಡುತ್ತಿದ್ದಾರೆ.

ಇದನ್ನೂ ಓದಿ: ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

ಮಗು ಚರಂಡಿಗೆ ಬಿದ್ದು ಸಾವು

ಕಲಬುರಗಿ: ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ನಗರದ ಮುಜಾಹಿರ್ ಬಡಾವಣೆಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಮೃತ ಮಗು. ಮನೆ ಮುಂದೆ ಆಡವಾಡುತ್ತಾ ಹೋಗಿ ತುಂಬಿದ್ದ ಚರಂಡಿಗೆ ಬಿದ್ದಿದೆ. ಚರಂಡಿ ವ್ಯವಸ್ಥೆ ಬಗ್ಗೆ ಪಾಲಿಕೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ಇನ್ನಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:39 am, Fri, 25 August 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್