ಕಲಬುರಗಿ: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ಈರ್ವರ ಬಂಧನ

Kalaburgi: ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿ ಅನಧಿಕೃತವಾಗಿ ಸಾಗಿಸಲಾಗುತ್ತಿದ್ದ 27 ಎಮ್ಮೆಗಳನ್ನು ರಕ್ಷಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈರ್ವರನ್ನು ಬಂಧಿಸಲಾಗಿದೆ.

ಕಲಬುರಗಿ: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ಈರ್ವರ ಬಂಧನ
ಎಮ್ಮೆಗಳನ್ನು ಗಾಡಿಯಲ್ಲಿ ಸಾಗಿಸುತ್ತಿದ್ದ ದೃಶ್ಯ
Follow us
TV9 Web
| Updated By: shivaprasad.hs

Updated on:Jan 21, 2022 | 8:50 AM

ಕಲಬುರಗಿ: ಜಿಲ್ಲೆಯಲ್ಲಿ ಅನಧಿಕೃತವಾಗಿ ಎಮ್ಮೆ ಸಾಗಾಟ ಮಾಡುತ್ತಿದ್ದ ಈರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಪ್ರಕರಣ ನಡೆದಿದ್ದು, ಠಾಣೆಯ ಪೊಲೀಸರು  ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳನ್ನು ರಕ್ಷಿಸಿದ್ದಾರೆ. ರಕ್ಷಿಸಿದ 27 ಎಮ್ಮೆಗಳನ್ನು ಗೋಶಾಲೆಗೆ ರವಾನಿಸಲಾಗಿದೆ. ಎಮ್ಮೆಗಳ ಕಾಲು ಕಟ್ಟಿಹಾಕಿ, ಬಾಯಿಗೆ ಬಟ್ಟೆಯನ್ನು ಸುತ್ತಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಉಮರ್ ಅಲಿ, ಅಬ್ದುಲ್ ರಜಾಕ್​ರನ್ನು ವಶಕ್ಕೆ ಪಡೆಯಲಾಗಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ನಗರ: ಶಹಬಜಾರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಕಲಬುರಗಿ: ಎರಡು ಸಮುದಾಯಗಳ ಮಧ್ಯೆ ಘರ್ಷಣೆ ಹಿನ್ನೆಲೆಯಲ್ಲಿ ನಗರದ ಶಹಬಜಾರ್ ಸುತ್ತಮುತ್ತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಜನವರಿ 22ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಕಲಬುರಗಿ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಶಹಬಜಾರ್ ನಾಕಾದಲ್ಲಿ ಮೂರ್ತಿ ಸ್ಥಾಪನೆ ವಿಚಾರವಾಗಿ ಘರ್ಷಣೆ ನಡೆದಿತ್ತು. ಎರಡು ಸಮುದಾಯಗಳ ನಡುವೆ ಘರ್ಷಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಹೊರಸಡಿಸಲಾಗಿದೆ.

ಕಲಬುರಗಿ: ಚೆನ್ನೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ 14 ವಿದ್ಯಾರ್ಥಿಗಳಿಗೆ ಕೊರೊನಾ ಜಿಲ್ಲೆಯ ಜೇವರ್ಗಿ ತಾಲೂಕಿನ ಚೆನ್ನೂರು ಗ್ರಾಮದ ಬಳಿಯಿರುವ ಆದರ್ಶ ವಿದ್ಯಾಲಯದ 14 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಹೋಮ್ ಐಸೋಲೇಷನ್ ಮಾಡಲಾಗಿದೆ. ಕಲಬುರಗಿಯಲ್ಲಿ ಈಗಾಘಲೇ ಹಲವು ಶಾಲೆಗಳಲ್ಲಿ ಕೊರೊನಾ ಪತ್ತೆಯಾಗಿದೆ. ಆದರ್ಶ ವಿದ್ಯಾಲಯದಲ್ಲಿ 1 ರಿಂದ 10 ನೇ ತರಗತಿಯವರೆಗೆ ಶಾಲೆ ಇದೆ. ಪ್ರಸ್ತುತ ಹಲವರಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ಉಳಿದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ:

Covid Compensation: ಸುತ್ತಿ ಸುತ್ತಿ ಸುಸ್ತಾದರೂ ಪರಿಹಾರ ಹಣ ಮಾತ್ರ ಕೈಗೆ ಸಿಗುತ್ತಿಲ್ಲ, ಸರ್ಕಾರ ನೀಡಿದ ಕೋವಿಡ್ ಪರಿಹಾರ ಚೆಕ್ ಬೌನ್ಸ್

ಚಿತ್ರದುರ್ಗ: ಕೊವಿಡ್ ಪಾಸಿಟಿವ್ ಆಗಿದ್ದೂ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ; ತಹಶೀಲ್ದಾರ್ ದಾಳಿ, ಆಸ್ಪತ್ರೆ ಸೀಲ್​ಡೌನ್

Published On - 8:44 am, Fri, 21 January 22

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು