Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಪೂಜಿ ಸೇವಾಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆ ಲಭ್ಯ; ಯಾವೆಲ್ಲಾ ಸೌಲಭ್ಯಗಳು ಇರಲಿವೆ ಗೊತ್ತಾ?

ಬಾಪೂಜಿ ಸೇವಾ ಕೇಂದ್ರ (Bapuji Service Center)ಗಳ ಮೂಲಕ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ನಾಡ ಕಚೇರಿಗಳ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ ಇನ್ನೂ 44 ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅನುವು ಮಾಡಿಕೊಟ್ಟಿದೆ.

ಬಾಪೂಜಿ ಸೇವಾಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆ ಲಭ್ಯ; ಯಾವೆಲ್ಲಾ ಸೌಲಭ್ಯಗಳು ಇರಲಿವೆ ಗೊತ್ತಾ?
ಬಾಪೂಜಿ ಸೇವಾ ಕೇಂದ್ರದಲ್ಲಿ ಹೆಚ್ಚುವರಿ ಸೌಲಭ್ಯ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 03, 2023 | 7:47 PM

ಕಲಬುರಗಿ, ಅ.03: ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು 2016 ರಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಿದ ಬಾಪೂಜಿ ಸೇವಾ ಕೇಂದ್ರ (Bapuji Service Center)ಗಳ ಮೂಲಕ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ನಾಡ ಕಚೇರಿಗಳ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ ಇನ್ನೂ 44 ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅನುವು ಮಾಡಿಕೊಟ್ಟಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸೇವೆಗಳಿಗೆ ಚಾಲನೆ ನೀಡಿದ್ದು, ಈ ಸೇವೆ ಬಳಸಿಕೊಳ್ಳಲು‌ ಸಚಿವ ಪ್ರಿಯಾಂಕ್ ಖರ್ಗೆ(Priyank kharge) ಮನವಿ ಮಾಡಿದ್ದಾರೆ.

ಬಾಪೂಜಿ ಕೇಂದ್ರಗಳಲ್ಲಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಿದ್ದು,ಆಧಾರ್‌ ಸೇವೆಗಳ ಸೌಲಭ್ಯವನ್ನು ಹೊಂದಬಹುದಾಗಿದೆ.

ಇದನ್ನೂ ಓದಿ:ಹಾವೇರಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಬಾಪೂಜಿ ಸೇವಾ ಕೇಂದ್ರ: ಕಚೇರಿಗಳಿಗೆ ಅಲೆದಲೆದು ಸಾರ್ವಜನಿಕರು ಹೈರಾಣ

ಇನ್ನು ಪ್ರತಿಯೊಂದು ಹೋಬಳಿಯು 6 ರಿಂದ 7 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20-50 ಸಾವಿರ ಜನರು ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಸಮಸ್ಯೆಗೆ ಪರಿಹಾರವಾಗಿ ನಾಡ ಕಚೇರಿಗಳ ಅಟಲ್‌ಜಿ ಜನಸ್ನೇಹಿ ನಿರ್ದೇಶನಾಲಯದಡಿ ಸಿಗುತ್ತಿದ್ದ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸ ಸ್ಥಳ ಪ್ರಮಾಣ ಪತ್ರ ಗಳಂತಹ ಪ್ರಮುಖ ಸೇವೆಗಳನ್ನು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ನೀಡಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೂತನವಾಗಿ ಒದಗಿಸಲು ಸರ್ಕಾರವು ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಲಭ್ಯವಿರುವ ಸೇವೆಗಳು

ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರ.ಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿರಹಿತ ದೃಢೀಕರಣ ಪತ್ರ, ವಿಧವೆ ದೃಢೀಕರಣ ಪತ್ರ, ಜೀವಂತ ದೃಡೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಡೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಡೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಡೀಕರಣ ಪತ್ರ, ಮೃತರ ಕುಟುಂಬ ಸದಸ್ಯರ ದೃಡೀಕರಣ ಪತ್ರ, ನಿರುದ್ಯೋಗಿ ದೃಢಿಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಡಿಕರಣ ಪತ್ರ, ಸಣ್ಣ /ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ಥರಕ್ಕೆ ಸೇರಿಲ್ಲವೆಂದು ದೃಢಿಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ.

ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ: ಅರ್ಜಿ ಸಲ್ಲಿಕೆಗೆ ಅರ್ಹತೆ ಏನು? ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ಮಾಹಿತಿ

ಜೊತೆಗೆ ಬೋನಫೈಡ್ ದೃಡಿಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢಿಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢಿಕರಣ ಪತ್ರ (ಅನುಕಂಪದ ಆದಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢಿಕರಣ ಪತ್ರ, ಹೈದ್ರಾಬಾದ್-ಕರ್ನಾಟಕ ವಿಭಾಗ/ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಡೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (EWS), ಜಾತಿ ಪ್ರಮಾಣಪತ್ರ, ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ವಿಕ್ಟಿಮ್ ಪೆನ್ಷನ್ ಸೇರಿದಂತೆ ಎಲ್ಲ ಸೌಲಭ್ಯಗಳು ಸಿಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ