74ನೇ ಕಲ್ಯಾಣ ಕರ್ನಾಟಕ ಉತ್ಸವ: ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ, ವಿವಿಧ ಜಿಲ್ಲೆಗಳಲ್ಲಿ ಸಂಭ್ರಮಾಚರಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಧಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಸಚಿವ ಮುರುಗೇಶ್ ನಿರಾಣಿ ಕೂಡ ಉಪಸ್ಥಿತರಿದ್ದರು.
ಕಲಬುರಗಿ: 74ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಲಬುರಗಿ ನಗರದ ಡಿ.ಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ಸರ್ಧಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಸಚಿವ ಮುರುಗೇಶ್ ನಿರಾಣಿ ಕೂಡ ಉಪಸ್ಥಿತರಿದ್ದರು.
ಬಳ್ಳಾರಿ: ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರಿಂದ ಧ್ವಜಾರೋಹಣ ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಧ್ವಜಾರೋಹಣ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಸ್ಪಿ ಸೈದುಲ್ಲ ಅಡಾವತ್,ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯನಗರ: ಸಚಿವ ಆನಂದ್ ಸಿಂಗ್ ಅವರಿಂದ ಧ್ವಜಾರೋಹಣ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಿನ್ನಲೆ, ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ಕಾಲೇಜ್ ಮೈದಾನದಲ್ಲಿ ಸಚಿವ ಆನಂದ್ ಸಿಂಗ್ ಅವರು ಧ್ವಜಾರೋಹಣ ಮಾಡಿದ್ದಾರೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಕಲ್ಯಾಣ ಕರ್ನಾಟಕ ಉತ್ಸವ ದಿನ ಹಿನ್ನಲೆ ಬೀದರ್ ಉಸ್ತುವಾರಿ ಸಚಿವರಾದ ಪ್ರಭು ಚೌಹಾನ್ರಿಂದ ಧ್ವಜಾರೋಹಣ. ಪೋಲಿಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ್ದು, ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಶಾಸಕ ರಹೀಂ ಖಾನ್ ಭಾಗಿಯಾಗಿದ್ದರು.
ಯಾದಗಿರಿ: ಧ್ವಜಾರೋಹಣ ನೆರವೇರಿಸಿದ ಸಚಿವ ಬಿ.ಸಿ.ನಾಗೇಶ್ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನಲೆ, ಯಾದಗಿರಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ಬಳಿಕ ತೆರೆದ ಜೀಪಿನಲ್ಲಿ ಸಚಿವರು ಪರೇಡ್ ತಂಡಗಳ ವೀಕ್ಷಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಯಾದಗಿರಿ ಶಾಸಕರಾದ ವೆಂಕಟರಡ್ಡಿ ಮುದ್ನಾಳ್, ರಾಜುಗೌಡ ಹಾಗೂ ಸಂಸದ ರಾಜಾ ಅಮರೇಶ್ವರ ನಾಯಕ ಸೇರಿ ಹಲವರು ಭಾಗಿಯಾಗಿದ್ದರು.
ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ಮಾಡುವಾಗ ಕಗ್ಗಂಟು ಕೊಪ್ಪಳದ ಎಸ್ಪಿ ಕಚೇರಿಯಲ್ಲಿ ಡಿವೈಎಸ್ಪಿ ಗೀತಾ ಧ್ವಜಾರೋಹಣ ಮಾಡುವಾಗ ಗೊಂದಲ ಸೃಷ್ಟಿಯಾಗಿದೆ. ಧ್ವಜಾರೋಹಣ ಹಗ್ಗ ಕಗ್ಗಂಟಾಗಿ ಧ್ವಜಾರೋಹಣ ವಿಳಂಬವಾಗಿದೆ. ಎಷ್ಟೇ ಪ್ರಯತ್ನ ಪಟ್ಟರು ಗಂಟು ಬಿಚ್ಚದ ಹಿನ್ನಲೆ ಪಕ್ಕದ ಅಧಿಕಾರಿಗಳಿಂದ ಧ್ವಜಾರೋಹಣ ನಡೆಸಲಾಯಿತು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ; ಕೆಕೆಆರ್ಡಿಬಿಯಿಂದ 15 ಕೋಟಿ ಮಂಜೂರು
Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ನಾಳೆ ಗಜಪಯಣ ಆರಂಭ
Published On - 9:51 am, Fri, 17 September 21