AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ ಕೇಸ್: 8 ಜೈಲಧಿಕಾರಿಗಳ ಅಮಾನತು

8 Officials Suspended: ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಥೇಟ್ ಸಿನಿಮಾದಂತೆಯೇ ರಿಯಲ್ ಆಗಿ ಮಂಗಳವಾರ ಮಧ್ಯರಾತ್ರಿ ಎಸ್ಕೇಪ್ ಆಗಿದ್ದಾರೆ. ಮೂವರ ಪೈಕಿ ಓರ್ವನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರಿಗಾಗಿ ಡ್ರೋನ್ ಬಳಸಿ ತಲಾಶ್ ಮಾಡಲಾಗುತ್ತಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜೈಲಧಿಕಾರಿಗಳ ಅಮಾನತು ಮಾಡಲಾಗಿದೆ.

ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ ಕೇಸ್: 8 ಜೈಲಧಿಕಾರಿಗಳ ಅಮಾನತು
ಜೈಲಿನಿಂದ ಕೈದಿಗಳು ಪರಾರಿ ಕೇಸ್​Image Credit source: tv9 kannada
ದತ್ತಾತ್ರೇಯ ಪಾಟೀಲ್​
| Edited By: |

Updated on: Jul 15, 2026 | 5:50 PM

Share

ಮುಖ್ಯಾಂಶಗಳು

  • ಕಲಬುರಗಿ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿ ಕೇಸ್​
  • ಟಿವಿ9 ವರದಿ ಬೆನ್ನಲ್ಲೇ 8 ಜೈಲಧಿಕಾರಿಗಳ ಅಮಾನತು
  • ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶ

ಕಲಬುರಗಿ,  ಜುಲೈ 15: ನಗರದ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಪರಾರಿ (Jail Escape) ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ಹಿನ್ನೆಲೆ 8 ಜೈಲಧಿಕಾರಿಗಳನ್ನು ಅಮಾನತುಗೊಳಿಸಿ (Suspension) ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜೈಲಾಧಿಕಾರಿಗಳ ಈ ಬೇಜವಾಬ್ದಾರಿತನದ ಕುರಿತು ಟಿವಿ9 ಕನ್ನಡ ವಾಹಿನಿ ಸಾಕ್ಷಿ ಸಮೇತ ವರದಿ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಅಮಾನತುಗೊಳಿಸಲಾಗಿದೆ.

ಯಾರೆಲ್ಲಾ ಅಮಾನತು?

ಕಲಬುರಗಿ ಸೆಂಟ್ರಲ್ ಜೈಲಿನ ಅಧೀಕ್ಷಕ ರಾಕೇಶ್ ಕಾಂಬ್ಳೆ, ಸಹಾಯಕ ಅಧೀಕ್ಷಕ ಬಿ. ಸುರೇಶ್ ಹಾಗೂ ಜೈಲರ್ ಶ್ರೀಮಂತಗೌಡ ಪಾಟೀಲ್ ಸೇರಿದಂತೆ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ವಾರ್ಡರ್‌ಗಳಾದ ನಿಂಗಣ್ಣ, ಯಮನಪ್ಪ ಕುರುಬರ, ಬಸವರಾಜ್ ಮೇತ್ರಿ, ಸಾವಿತ್ರಿ ತಳಕೇರಿ ಹಾಗೂ ಅಜೀಮ್​​ರನ್ನು ಸಹ ಕರ್ತವ್ಯಲೋಪದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಎಸ್ಕೇಪ್ ಆಗಿದ್ದ ಮೂವರಲ್ಲಿ ಓರ್ವ ಸೆರೆ!

ಮೂವರು ಕೈದಿಗಳ ಪೈಕಿ ಓರ್ವ ನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಎಸ್ಕೇಪ್ ಆಗಿರುವ ಮಾಸ್ಟರ್ ಮೈಂಡ್ ಮಸ್ತಾನ್ ಹಾಗೂ ಸಾಗರ್‌ನ ಸೆರೆಗಾಗಿ ಪೊಲೀಸರು ಕಾರ್ಯಚರಣೆ ಮುಂದುವರೆಸಿದ್ದಾರೆ. ಇದಕ್ಕೆಂದು ಡ್ರೋನ್ ಕ್ಯಾಮರಾ ಬಳಕೆ ಮಾಡಲಾಗುತ್ತಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್​ನ ಕೆಲ ರೈತರ ಜಮೀನುಗಳಲ್ಲಿ ಡ್ರೋನ್ ಬಳಸಿ ಕೈದಿಗಳ ತಲಾಶ್ ಮಾಡಲಾಗಿದೆ.

ಈ ಘಟನೆ ನೋಡಿ ನನಗೆ ದೊಡ್ಡ ಶಾಕ್ ಆಗಿದೆ ಎಂದ ಆರಗ ಜ್ಞಾನೇಂದ್ರ

ಇನ್ನು ಪ್ರಕರಣ ಕುರಿತಾಗಿ ಶಿವಮೊಗ್ಗದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘‘ಈ ಘಟನೆ ನೋಡಿ ನನಗೆ ದೊಡ್ಡ ಶಾಕ್ ಆಗಿದೆ. ರಾಜ್ಯದಲ್ಲಿ ಕಾರಾಗೃಹಗಳ ಅವ್ಯವಸ್ಥೆ ಸರಿಪಡಿಸುವ ಅಗತ್ಯವಿದೆ. ನಾನು ಗೃಹ ಸಚಿವ ಇದ್ದಾಗ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಪಾರ್ಟಿ ಮಾಡಿದ್ದರು. ಈ ಘಟನೆ ಬೆನ್ನಲ್ಲೇ ಅಧಿಕಾರಿಗಳನ್ನು ಅಮಾನತು ಮಾಡಿ ಶಿಕ್ಷೆ ಕೊಟ್ಟಿದ್ದೆ. ಕಾಂಗ್ರೆಸ್ ಸರ್ಕಾರದ ಮೂರೂವರೆ ವರ್ಷದ ಅವಧಿಯಲ್ಲಿ ಯಾರು ಹೇಳೋರು ಕೇಳೋರು ಇಲ್ಲದಂತಾಗಿದೆ. ಗೃಹ ಇಲಾಖೆಯ ಸಂಪೂರ್ಣ ವಿಫಲ ಆಗಿದೆ’’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳ ಸಿನಿಮೀಯ ಎಸ್ಕೇಪ್: ಇಲ್ಲಿದೆ ನೋಡಿ ಸಿಸಿಟಿವಿ ದೃಶ್ಯ!

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ ಆರಗ ಜ್ಞಾನೇಂದ್ರ, ‘‘ಕಾರಾಗೃಹ ಸುಧಾರಣೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ತಮ್ಮ ಇಲಾಖೆ ವಿಷಯ ಬಿಟ್ಟು ಬೇರೆಲ್ಲಾ ಕೆಲಸಗಳನ್ನು ಮಾಡುತ್ತಿದ್ದಾರೆ. ಗೃಹ ಇಲಾಖೆಯನ್ನು ಬೇರೆ ಯಾರಿಗಾದರೂ ವಹಿಸಿಕೊಡಬೇಕು, ಇಲ್ಲದಿದ್ದರೆ ಸಮರ್ಥವಾಗಿ ಗೃಹ ಇಲಾಖೆ ಸಚಿವರು ನಿಭಾಯಿಸಬೇಕು. ರಾಜ್ಯದ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹದಗೆಡುತ್ತದೆ. ಕಾರಾಗೃಹಗಳಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಜೈಲಿನಲ್ಲಿ ಡ್ರಗ್ಸ್​, ಮಾರಕಾಸ್ತ್ರ ಹಾಗೂ ಪಿಸ್ತೂಲುಗಳು ಪತ್ತೆಯಾಗುತ್ತಿವೆ. ಇದು ಕರ್ನಾಟಕಕ್ಕೆ ದೊಡ್ಡ ಕಳಂಕ, ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ. ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು, ಇಲ್ಲದಿದ್ದರೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ರಾಜೀನಾಮೆ ನೀಡಬೇಕು’’ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ