ಕಲಬುರಗಿ: 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ

ಒಂದೆಡೆ ನೈಟ್ ಶಿಫ್ಟ್​ ಮಾಡುತ್ತಿದ್ದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ವೆಸಗಿ ಕೊಲೆ, ಮತ್ತೊಂದೆಡೆ ಸರ್ಕಾರಿ ಆಸ್ಪತ್ರೆಯಲ್ಲೇ ಮಹಿಳಾ ರೋಗಿಗಳ ಮೇಲೆ ಅತ್ಯಾಚಾರ. ಇದೀಗ ಕರ್ನಾಟಕದ ಕಲಬುರಗಿಯ ಸರ್ಕಾರಿ ಶಾಲೆಯಲ್ಲಿ 10 ವರ್ಷದ ಪುಟ್ಟ ಮಗುವಿನ ಮೇಲೆ ಶಿಕ್ಷಕನ ಕಾಮುಕನ ಕಣ್ಣು. 10 ವರ್ಷದ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ವೆಸಗಲು ಯತ್ನಿಸಿದ ಘಟನೆ ನಡೆದಿದೆ.

ಕಲಬುರಗಿ: 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ
ಮಲ್ಲಿಕಾರ್ಜುನ ಕುಮಸಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಆಯೇಷಾ ಬಾನು

Updated on: Aug 14, 2024 | 8:54 AM

ಕಲಬುರಗಿ, ಆಗಸ್ಟ್.14: 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗುವ ಯತ್ನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸದ್ಯ ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆ ಅವಧಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನ ಕರೆಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಶಾಲಾ ಕೋಣೆಯಲ್ಲೆ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು ಸದ್ಯ ಕಾಮುಕನ ಹೆಡೆಮುರಿಕಟ್ಟಲಾಗಿದೆ.

ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ವಾಹನವೊಂದು ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿದೆ. ಚಿತ್ರದುರ್ಗ ಜಿಲ್ಲೆ ತಮಟಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ವಾರದ ಹಿಂದಷ್ಟೇ ತಮಟಕಲ್ಲು ಬಳಿ ಕರಡಿ ಅಪಘಾತಕ್ಕೀಡಾಗಿತ್ತು. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ವೀರ್ಯ ಅಥವಾ ಅಂಡಾಣು ದಾನಿಗೆ ಮಗುವಿನ ಮೇಲೆ ಯಾವುದೇ ಕಾನೂನಾತ್ಮಕ ಹಕ್ಕಿಲ್ಲ: ಬಾಂಬೆ ಹೈಕೋರ್ಟ್​

IRB ಕಂಪನಿಯ 8 ನಿರ್ದೇಶಕರ ವಿಚಾರಣೆಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ, IRB ಕಂಪನಿಯ 8 ನಿರ್ದೇಶಕರನ್ನು ವಿಚಾರಣೆ ಮಾಡುವಂತೆ ಅಂಕೋಲಾ ಕೋರ್ಟ್ ಸೂಚಿಸಿದೆ. BNS 175(3)ರಡಿ ಪ್ರಕರಣ ದಾಖಲಿಸಿ 1 ತಿಂಗಳಲ್ಲಿ ವರದಿ ನೀಡುವಂತೆ JMFC ಕೋರ್ಟ್ ಸೂಚನೆ ನೀಡಿದೆ. ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದಶ್ರೀ ದಾವೆ ಹಿನ್ನೆಲೆ, ವಿಚಾರಣೆ ನಡೆಸಿ ವರದಿ ನೀಡುವಂತೆ ಕೋರ್ಟ್ ಆದೇಶಿಸಿದೆ.

ESIC ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಬಗ್ಗೆ ಅರಿವು

ವಿಶ್ವ ಅಂಗಾಂಗ ದಿನ ಹಿನ್ನೆಲೆ ಬೆಂಗಳೂರಿನ ರಾಜಾಜಿನಗರದ ESIC ಆಸ್ಪತ್ರೆಯಲ್ಲಿ ನಿನ್ನೆ ಅಂಗಾಂಗ ದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ESIC ಆಸ್ಪತ್ರೆ ವೈದ್ಯಕೀಯ ವಿದ್ಯಾರ್ಥಿಗಳು, ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಅಂಗಾಂಗ ದಾನದ ಬಗ್ಗೆ ಮಹತ್ವದ ಅರಿವು ಮೂಡಿಸಲು ಕಿರು ನಾಟಕ ಪ್ರದರ್ಶಿಸಿದ್ರು. ಒಬ್ಬ ವ್ಯಕ್ತಿ ಮರಣಾನಂತರ ತನ್ನ ಮೆದುಳು, ಹೃದಯ, ಕಿಡ್ನಿ, ಕಣ್ಣು ಸೇರಿದಂತೆ ಅಂಗಾಂಗ ದಾನ ಮಾಡಿದ್ರೆ, ಮತ್ತೊಬ್ಬ ರೋಗಿಯ ಜೀವನದಲ್ಲಿ ಹೇಗೆ ಆಶಾಕಿರಣವಾಗ್ತಾರೆ ಎಂಬುದರ ಬಗ್ಗೆ ತಿಳಿಸಿಕೊಟ್ರು. ಈ ಬಗ್ಗೆ ESIC ಆಸ್ಪತ್ರೆ ಡೀನ್ ಡಾ. ಸಂಧ್ಯಾ ಮಾತನಾಡಿ, ಕಿಡ್ನಿ, ಲಿವರ್, ಲಂಗ್ಸ್, ಕಣ್ಣು ಸೇರಿದಂತೆ ದೇಹದ ಅಂಗಾಂಗಳನ್ನು ಮರಣಾನಂತರ ದಾನ ಮಾಡಿದ್ದೇ ಆದಲ್ಲಿ, ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವವರಿಗೆ ಹೊಸ ಜೀವನ ಕೊಡಬಹುದು ಅಂತೇಳಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?