ಕಲಬುರಗಿ: ಕಾಂಗ್ರೆಸ್​ ಶಾಸಕ ಅಜಯ್​ ಸಿಂಗ್​ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಸುಮಾರು 35 ವರ್ಷದ ವ್ಯಕ್ತಿಯೋರ್ವ ಕಾಂಗ್ರೆಸ್​ ಶಾಸಕರೊಬ್ಬರ ನಿವಾಸದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಜೇವರ್ಗಿ ಶಾಸಕ, KKRDB ಅಧ್ಯಕ್ಷ ಡಾ.ಅಜಯ್‌ ಸಿಂಗ್ ಅವರ ಕಲಬುರಗಿ ಮನೆಯ ಆವರಣದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಲಬುರಗಿ: ಕಾಂಗ್ರೆಸ್​ ಶಾಸಕ ಅಜಯ್​ ಸಿಂಗ್​ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ
ಶಾಸಕ ಡಾ.ಅಜಯ್‌ ಸಿಂಗ್ ನಿವಾಸ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಮೇಶ್ ಬಿ. ಜವಳಗೇರಾ

Updated on:Aug 24, 2023 | 10:42 AM

ಕಲಬುರಗಿ, (ಆಗಸ್ಟ್ 24):  ಜೇವರ್ಗಿ  ವಿಧಾನಸಭಾ ಕ್ಷೇತ್ರದ ಶಾಸಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ ಡಾ.ಅಜಯ್‌ ಸಿಂಗ್ (Dr Ajay Singh) ಅವರ ನಿವಾಸದ ಆವರಣದಲ್ಲೇ ವಕ್ತಿಯೋರ್ವ ಆತ್ಮಹತ್ಯೆ(Suicide)  ಮಾಡಿಕೊಂಡಿದ್ದಾರೆ. ಕಲಬುರಗಿಯ (Kalaburagi) ಶರಣ‌ನಗರದಲ್ಲಿರುವ ಡಾ.ಅಜಯ್‌ ಸಿಂಗ್ ನಿವಾಸದ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿ ಶವ ಇಂದು (ಆಗಸ್ಟ್ 24) ಪತ್ತೆಯಾಗಿದೆ.  ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ದೇವಪ್ಪ(35) ಎಂದು ಗುರುತಿಸಲಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

ಹೃದಯಾಘಾತದಿಂದ ಕಾನ್ಸ್​ಟೇಬಲ್​ ಸಾವು

ಯಾದಗಿರಿ/ಬೆಂಗಳೂರು, (ಆಗಸ್ಟ್ 24): ಯಾದಗಿರಿ ಮೂಲದ ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಹೃದಯಾಘಾತಕ್ಕೆ ( Heart attack) ಬಲಿಯಾಗಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೋಗಿ ಠಾಣೆ ಪೊಲೀಸ್ ಕಾನ್ಸ್​ಟೇಬಲ್ ದೇವಿಂದ್ರಪ್ಪ(40) ಅವರು ಆರೋಗ್ಯ ತಪಾಸಣೆಗಾಗಿ ಬೆಂಗಳೂರಿಗೆ ಬಂದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಕಳೆದ 3 ತಿಂಗಳಿನಿಂದ‌ ಅನಾರೋಗ್ಯದಿಂದ ಬಳಲುತ್ತಿದ್ದ ದೇವಿಂದ್ರಪ್ಪ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ಬಂದಾಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 16 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ದೇವಿಂದ್ರಪ್ಪಗೆ ಮೂರು‌ ತಿಂಗಳಿನಿಂದ‌ ಅನಾರೋಗ್ಯ ಕಾಡುತ್ತಿತ್ತಿ. ಇದರಿಂದ ಅವರು ಜೂನ್ ನಿಂದ ರಜೆಯಲ್ಲಿದ್ದರು.

ಇದನ್ನೂ ಓದಿ: ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಸಾವು

Published On - 10:29 am, Thu, 24 August 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್