ಕಲಬುರಗಿ ನಗರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ.

ಕಲಬುರಗಿ ನಗರದ ಬೌಲಿಗಲ್ಲಿ ಬಳಿ ತಡರಾತ್ರಿ ಬೈಕ್​ನಲ್ಲಿ ಬಂದಿದ್ದ 3-4 ದುಷ್ಕರ್ಮಿಗಳ ತಂಡದಿಂದ ಕೃತ್ಯ ಎಸಗಲಾಗಿದೆ. ರೋಜಾ ಬಡಾವಣೆ ನಿವಾಸಿ ಮುದಾಸೀರ್​ (19) ಕೊಲೆಯಾಗಿದ್ದಾನೆ.

ಕಲಬುರಗಿ ನಗರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ.
ಕಲಬುರಗಿ ಮಾರಕಾಸ್ತ್ರಗಳಿಂದ ಕೊಲೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 16, 2022 | 2:58 PM

ಕಲಬುರಗಿ: ನಗರದ ಬೌಲಿಗಲ್ಲಿ ಪ್ರದೇಶದಲ್ಲಿ ತಡರಾತ್ರಿ ಬೈಕ್​ನಲ್ಲಿ ಬಂದಿದ್ದ 3-4 ದುಷ್ಕರ್ಮಿಗಳು ಮುದಾಸೀರ್ (19) ಎಂಬಾತನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಲಬುರಗಿ (kalburgi) ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ (ನ.15) ರಾತ್ರಿ ಬೈಕ್​ನಲ್ಲಿ ಬಂದಿದ್ದ 3 ರಿಂದ 4 ಜನ ಅಪರಿಚಿತ ವ್ಯಕ್ತಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಮುದಾಸೀರ್​ ಎಂಬಾತನ ಮೇಲೆ ಎರಗಿ ಆತನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಕುಖ್ಯಾತ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ ಹೆಣ್ಣೂರು ಪೊಲೀಸರು

ಹೆಣ್ಣೂರು ಠಾಣಾ ಪೊಲೀಸರ ಕಾರ್ಯಾಚರಣೆಯಿಂದ ಕುಖ್ಯಾತ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬೂಬಕರ್ ಸಿದ್ದಿಕಿ (19) ಎಂಬಾತನು ಹೆಣ್ಣೂರು, ಪುಲಿಕೇಶಿ ನಗರ, ಭಾರತಿನಗರ ವ್ಯಾಪ್ತಿಯಲ್ಲಿ ವಾಹನವನ್ನು ಕಳ್ಳತನ ಮಾಡಿದ್ದಾನೆ ಎನ್ನುವ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 6.7 ಲಕ್ಷ ರೂಪಾಯಿ ಮೌಲ್ಯದ 9 ವಿವಿಧ ದ್ವಿಚಕ್ರ ವಾಹನಗಳನ್ನು ಹೆಣ್ಣೂರು ಠಾಣಾ ಪೊಲೀಸರು ವಶಕ್ಕೆ ಪಡೆದುಕೊಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲೊಬ್ಬ ವಿಕೃತ ವೈದ್ಯ: ಚಿಕಿತ್ಸೆ ಹೆಸರಲ್ಲಿ ಅಸ್ಪತ್ರೆಗೆ ಬರುವ ಮಹಿಳೆಯರ ವಿಡಿಯೋವನ್ನು ಚಿತ್ರೀಕರಿಸಿದ್ದಾನೆ

ಆಸ್ಪತ್ರೆಗೆ ಬರುವ ಮಹಿಳೆಯರ ವಿಡಿಯೋ ಚಿತ್ರೀಕರಣ ಆರೋಪದಲ್ಲಿ ವೈದ್ಯ ವೆಂಕಟರಮಣ ಎಂಬಾತನನ್ನ ಯಶವಂತಪುರದ ಮತ್ತಿಕೆರೆಯಲ್ಲಿ ಬಂಧಿಸಿದ ಸಿಸಿಬಿ ಪೊಲೀಸರು. ಯಶವಂತಪುರದ ಮತ್ತಿಕೆರೆಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ವೈದ್ಯ ವೆಂಕಟರಮಣ ನ್ಯಾಚುರೋಪತಿ ಮತ್ತು ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದನು, ಕಾಲು ನೋವಿಗೆಂದು ಚಿಕಿತ್ಸೆಗೆ ಬಂದಿದ್ದ ಮಹಿಳೆ ಜೊತೆ ದುರ್ವರ್ತನೆ ತೋರಿದ್ದಾನೆ. ಖಾಸಗಿ ಅಂಗಗಳಿಗೆ ಇಂಜೆಕ್ಷನ್ ನೀಡಲು ಮುಂದಾಗಿದ್ದಾನೆ. ಇದನ್ನ ಪ್ರಶ್ನೆ ಮಾಡಿ ಮೊಬೈಲ್ ಪರಿಶೀಲಿಸಿದಾಗ ವಿಡಿಯೋಗಳು ಪತ್ತೆಯಾಗಿವೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ 354c ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ ಯಶವಂತಪುರ ಪೊಲೀಸರು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ. ಸಿಸಿಬಿ ಪೊಲೀಸರು ಆತನ ಮೊಬೈಲ್​ನ್ನು ಪರಿಶೀಲಿಸಿದಾಗ ಈತ ಹಲವು ತಿಂಗಳುಗಳಿಂದ ಈ ಕೃತ್ಯವನ್ನು ಎಸೆಗುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು