ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಕಲಬುರಗಿ ಜಿಲ್ಲೆಯ 6 ಜನರು ಸಾವು

ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿ ಜಿಲ್ಲೆಯ ಐವರು ಮಹಿಳೆಯರು, ಒಂದು ಮಗು ದುರ್ಮರಣ ಹೊಂದಿರುವಂತಹ ಘಟನೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಕಲಬುರಗಿ ಜಿಲ್ಲೆಯ 6 ಜನರು ಸಾವು
ಅಪಘಾತಕ್ಕೀಡಾದ ಕ್ರೂಸರ್ ವಾಹನ, ಟ್ಯಾಂಕರ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 30, 2023 | 7:56 PM

ಕಲಬುರಗಿ: ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ (Accident) ಹೊಡೆದ ಪರಿಣಾಮ ಕಲಬುರಗಿ ಜಿಲ್ಲೆಯ 6 ಜನರು ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ನಡೆದಿದೆ. ಕ್ರೂಸರ್‌ನಲ್ಲಿದ್ದ ಐವರು ಮಹಿಳೆಯರು, ಒಂದು ಮಗು ದುರ್ಮರಣ ಹೊಂದಿದೆ. ಮೃತರನ್ನು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಅಣೂರ ನಿವಾಸಿಗಳು ಎಂದು ಗುರುತಿಸಲಾಗಿದೆ. ಕ್ರೂಸರ್ ವಾಹನದಲ್ಲಿ ಮಹಾರಾಷ್ಟ್ರದ ತೀರ್ಥ ಕ್ಷೇತ್ರಗಳಿಗೆ ಪ್ರವಾಸಕ್ಕೆ ತೆರಳಿದ್ದರು. ವಾಪಸಾಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಸರಣಿ ಅಪಘಾತದಲ್ಲಿ ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಸರಣಿ ಅಪಘಾತವಾಗಿದ್ದು, ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರವಾಗಿದೆ. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಸರಣಿ ಅಪಘಾತ ಸಂಭವಿದೆ.  ಹೈವೇನಲ್ಲಿ ರಸ್ತೆ ಮಧ್ಯದ ಗಿಡಗಳಿಗೆ ಟ್ಯಾಂಕರ್‌ನಿಂದ ನೀರು ಹರಿಸುತ್ತಿದ್ದರು. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ  ಸಿಬ್ಬಂದಿ ಗಿಡಗಳಿಗೆ ನೀರು ಹರಿಸುತ್ತಿದ್ದರು.

ಇದನ್ನೂ ಓದಿ: ಬಳ್ಳಾರಿ: ಜಾತಿ ನೆಪವೊಡ್ಡಿ ಮದುವೆಗೆ ನಿರಾಕರಿಸಿದ ಪ್ರಿಯಕರ, ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಈ ವೇಳೆ ನೀರಿನ ಟ್ಯಾಂಕರ್ ಕಾಣದೇ ಕಾರು ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಮತ್ತೆರಡು ಕಾರುಗಳು ಡಿಕ್ಕಿ ಹೊಡೆದಿವೆ. ನೀರಿನ ಟ್ಯಾಂಕರ್‌ಗೆ ಡಿಕ್ಕಿಯಿಂದ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎನ್‌ಹೆಚ್‌ಎಐ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಪಘಾತ ಕಾರಣ ಎನ್ನಲಾಗುತ್ತಿದೆ.

ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವು‌

ಚಿಕ್ಕಮಗಳೂರು: ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.

ಇದನ್ನೂ ಓದಿ: Chikkamagaluru News: ಎಸ್ಟೇಟ್​ನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾಫಿ ತೋಟದಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯ ಬಂಧನ

ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್​ಗೆ ತೆರಳಿದ್ದರು. ನೇತ್ರಾವತಿ ಪೀಕ್​ಗೆ ಹೋಗುವ ಮಾರ್ಗದಲ್ಲಿ ಯುವಕ ಮೃತಪಟ್ಟಿದ್ದಾನೆ. ನೇತ್ರಾವತಿ ಪೀಕ್​ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Fri, 30 June 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ