ಕಲಬುರಗಿ: ಜಿಲ್ಲೆಯ ಅಫಜಲಪುರ(Afzalpur) ಶಾಸಕ ಎಮ್ ವೈ ಪಾಟೀಲ್(MY Patil) ಪುತ್ರ ಅರುಣ್ ಎಂಬುವವರು ಪ್ರಬಾರಿ ಮುಖ್ಯೋಪಾಧ್ಯಾಯರ ಜೊತೆ ಮಾತನಾಡಿದ್ದಾರೆ ಅನ್ನಲಾಗುತ್ತಿರುವ ಆಡಿಯೋ ಇದೀಗ ವೈರಲ್ ಆಗಿದ್ದು, ಇದರಲ್ಲಿ ಎಮ್ ವೈ ಪಾಟೀಲ್ ಪುತ್ರ ಅರುಣ್ ಪಾಟೀಲ್ ಅವರು ಪ್ರಬಾರಿ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಕುರಿತು ಅಫಜಲಪುರ ಠಾಣೆಗೆ ಸರ್ಕಾರಿ ಶಾಲೆ ಪ್ರಭಾರಿ ಮುಖ್ಯೋಪಾಧ್ಯಾಯ ಶಿವಕುಮಾರ್ ಬಿರಾದರ್ ಎನ್ನುವವರು ದೂರು ನೀಡಿದ್ದಾರೆ.
ಹೌದು ಅಫಜಲಪುರ ತಾಲೂಕಿನ ಮಾಶಾಳ ಸರ್ಕಾರಿ ಮಾದರಿ ಶಾಲೆ ಪ್ರಭಾರಿ ಮುಖ್ಯೋಪಾಧ್ಯಾಯರಾಗಿರುವ ಶಿವಕುಮಾರ್ ಅವರು ತಮ್ಮ ಜೊತೆ ಶಾಸಕರ ಪುತ್ರ ಅರುಣ್ ಮಾತನಾಡಿರೋ ಆಡಿಯೋವನ್ನ ಪೊಲೀಸ್ ಠಾಣೆಗೆ ನೀಡಿದ್ದಾರೆ. ಅದರಲ್ಲಿ ‘ ಶಿವಕುಮಾರ್ ಅವರಿಗೆ ನೀನು ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಡ. ಮಾಡಿದ್ರು, ಅದನ್ನು ರದ್ದು ಮಾಡಬೇಕು. ನೀನು ಶಾಲೆಯಿಂದ ಜಾಗ ಖಾಲಿ ಮಾಡಬೇಕು. ಇಲ್ಲದಿದ್ದರೆ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಲಾಗಿದೆ. ಈ ಕುರಿತು ಶಾಸಕರ ಪುತ್ರ ಬೆದರಿಕೆ ಹಾಕಿದ್ದಾರೆ ಎಂದು ಶಿವಕುಮಾರ್ ಬಿರಾದರ್ ಆರೋಪಿಸಿ ದೂರು ನೀಡಿದ್ದಾರೆ.
ಇದನ್ನೂ ಓದಿ:Sharad Pawar: ಶರದ್ ಪವಾರ್ಗೆ ಕೊಲೆ ಬೆದರಿಕೆ, ಪೊಲೀಸ್ ಆಯುಕ್ತರನ್ನು ಭೇಟಿಯಾದ ಸುಪ್ರಿಯಾ ಸುಲೆ
ಬೆಳಗಾವಿ: ಆರ್ಥಿಕವಾಗಿ ತತ್ತರಿಸಿದ ಕೈಗಾರಿಕೆಗಳಿಗೆ ವಿದ್ಯುತ್ ದರ ಏರಿಕೆಯಿಂದ ಡಬಲ್ ಶಾಕ್ ಆಗಿದ್ದು, ಇದರಿಂದ ಸಣ್ಣ ಮತ್ತು ಮಧ್ಯಮ ವರ್ಗ ಕೈಗಾರಿಕೆಗಳಿಗೆ ಸಂಕಷ್ಟ ಬಂದೊದಗಿದೆ. ಈ ಕಾರಣ ಬೆಳಗಾವಿಯಲ್ಲಿಂದು ಕೈಗಾರಿಕಾ & ವಾಣಿಜ್ಯೋದ್ಯಮ ಸಂಸ್ಥೆ, ಸಣ್ಣ ಕೈಗಾರಿಕೆಗಳ ಸಂಘದಿಂದ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು. ಬೆಳಗ್ಗೆ 10.30ಕ್ಕೆ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಇದರಲ್ಲಿ ಬೆಳಗಾವಿ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಹೇಮಂತ್ ಪೋರವಾಲ್, ಬೆಳಗಾವಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರೋಹನ್ ಜವಳಿ ಸೇರಿ, ಹಲವು ಉದ್ಯಮಿಗಳು ಭಾಗಿಯಾಗಲಿದ್ದಾರೆ. ವಿದ್ಯುತ್ ದರ ತಗ್ಗಿಸದಿದ್ದರೆ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಎಚ್ಚರಿಕೆಯನ್ನ ಕೂಡ ನೀಡಿದ್ದಾರೆ. ಇನ್ನು ಬೆಳಗಾವಿ ಡಿಸಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿರುವ ಕೈಗಾರಿಕೋದ್ಯಮಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮನವಿ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ