ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ

ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ
ಹಂದಿImage Credit source: News18
Follow us
TV9 Web
| Updated By: ಆಯೇಷಾ ಬಾನು

Updated on:Aug 23, 2022 | 8:51 PM

ಕಲಬುರಗಿ: ಬೆಂಗಳೂರು ಗ್ರಾಮಾಂತರ‌ ಜಿಲ್ಲೆಯ ಹೊಸಕೋಟೆ ತಾಲೂಕಿನ‌ ಬೆಳಮಂಗಲಾ ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರೋಗ ನಿಯಂತ್ರಣ ಕೈಗೊಳ್ಳಲು ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮದಡಿ ಹಾಗೂ ಭಾರತ ಸರ್ಕಾರದಿಂದ ಪ್ರಕಟಿಸಲಾದ ಜೂನ್ 2020ರ ರಾಷ್ಟ್ರೀಯ ಕ್ರಿಯಾ ಯೋಜನೆ ಅಧ್ಯಾಯ-4.4 ರ ಮಾರ್ಗಸೂಚಿ ಪ್ರಕಾರ ನೆರೆ ರಾಜ್ಯಗಳಿಂದ ಜಿಲ್ಲೆಯ ಒಳಗೆ, ಹೊರಗೆ ಹಂದಿಗಳು ಮತ್ತು ಹಂದಿಗಳ ಉತ್ಪನ್ನಗಳ ಸಾಗಾಣಿಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

African Swine Fever: ಕೇರಳದ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಮತ್ತೆ ಹಂದಿ ಜ್ವರ ಪತ್ತೆ

ಕೇರಳ: ಕೇರಳದಲ್ಲಿ ಇತ್ತೀಚೆಗೆ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಕೇವಲ ಒಂದು ವಾರದ ನಂತರ ಮತ್ತೆ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ ಒಂದೊಂದು ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರೋಗದ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಕಣ್ಣೂರಿನ ಜಿಲ್ಲಾಧಿಕಾರಿ ಕಚೇರಿ ಪಿಟಿಐಗೆ ತಿಳಿಸಿದೆ.

ವಯನಾಡಿನ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ರಾಜೇಶ್ ಅವರು, ಸುಲ್ತಾನ್ ಬತ್ತೇರಿಯ ನೆನ್ಮೆನಿ ಫಾರ್ಮ್ ಮತ್ತು ಅದರ ಸುತ್ತಮುತ್ತಲಿನ 193 ಹಂದಿಗಳನ್ನು ಈ ವಾರದಲ್ಲಿ ರೋಗ ಹರಡುವುದನ್ನು ತಡೆಯಲು ಕೊಲ್ಲಲಾಗುವುದು ಎಂದು ಪಿಟಿಐಗೆ ತಿಳಿಸಿದರು.

Published On - 8:46 pm, Tue, 23 August 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ