ಅಪ್ರಾಪ್ತ ಬಾಲಕನಿಂದ ಅಪ್ರಾಪ್ತ ಬಾಲಕಿಯ ರೇಪ್​ ಅಂಡ್ ಮರ್ಡರ್: 9 ನೇ ದಿನಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಆಳಂದ ಪೊಲೀಸ್

| Updated By: ಸಾಧು ಶ್ರೀನಾಥ್​

Updated on: Nov 12, 2022 | 11:27 AM

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತಕ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇವಲ ಒಂದೇ ದಿನದಲ್ಲಿ ಆರೋಪಿ ಬಾಲಕನನ್ನು ಅರೆಸ್ಟ್ ಮಾಡಿದ್ದು ಒಂಬತ್ತೇ ದಿನದಲ್ಲಿ ಚಾರ್ಜ್ ಸೀಟ್ ಸಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಪ್ರಾಪ್ತ ಬಾಲಕನಿಂದ ಅಪ್ರಾಪ್ತ ಬಾಲಕಿಯ ರೇಪ್​ ಅಂಡ್ ಮರ್ಡರ್: 9 ನೇ ದಿನಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಆಳಂದ ಪೊಲೀಸ್
ಆಳಂದ ಪೊಲೀಸ್ ಠಾಣೆ
Follow us on

ಕಲಬುರಗಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತಕ ಕೊಲೆ ಮಾಡಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ಕೇವಲ ಒಂಬತ್ತೇ ದಿನದಲ್ಲಿ ಚಾರ್ಜ್ ಸೀಟ್ ಸಲ್ಲಿಸುವಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆಳಂದ ಠಾಣೆಯ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮತ್ತು ಗೃಹ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಘಟನೆ ವಿವರ

ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಂಬರ್ 1 ರಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ನಂತರ ಕೊಲೆ ಮಾಡಲಾಗಿತ್ತು. ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಬಹಿರ್ದೆಸೆಗೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅನೇಕ ಕಡೆ ಪ್ರತಿಭಟನೆಗಳು ನಡೆದಿದ್ದವು. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಆಳಂದ ಠಾಣೆಯ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಪ್ರಕರಣ ದಾಖಲಾದ 24 ಗಂಟೆಯಲ್ಲಿ ಆರೋಪಿ ಬಂಧಿಸಿದ್ದರು. ಬಂಧನದ ನಂತರ ಗೊತ್ತಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಅಪ್ರಾಪ್ತ ಬಾಲಕ ಅನ್ನೋದು. ಹದಿನಾರುವರೆ ವರ್ಷದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ.

ಇನ್ನು ಪ್ರಕರಣದಲ್ಲಿ ಎಲ್ಲಾ ರೀತಿಯ ಸಾಕ್ಷಿಗಳನ್ನು ಸಂಗ್ರಹಿಸಿದ ಆಳಂದ ಠಾಣೆಯ ಪೊಲೀಸರು ನವಂಬರ್ 10 ರಂದೆ ಬಾಲ ನ್ಯಾಯ ಮಂಡಳಿಗೆ ಅಂತಿಮ ವರದಿ ಸಲ್ಲಿಸಿದ್ದಾರೆ. ಕೇವಲ ಒಂಬತ್ತೇ ದಿನದಲ್ಲಿ ಪ್ರತರಣದ ತನಿಖೆಯನ್ನು ಮಾಡಿ, ಅಂತಿಮ ವರದಿ ಸಲ್ಲಿಸುವ ಮೂಲಕ ತಮ್ಮ ಕಾರ್ಯಕ್ಷಮತೆ ಮೆರದಿದ್ದಾರೆ.

ಬಹುಮಾನದ ಅರ್ಧ ಮೊತ್ತ ಬಾಲಕಿ ಕುಟುಂಬಕ್ಕೆ

ಇನ್ನು ಆಳಂದ ಪೊಲೀಸರ ಕಾರ್ಯಕ್ಕೆ ಮೆಚ್ಚಿ ರಾಜ್ಯ ಡಿಜಿ&ಐಜಿ ಆಳಂದ ಪೊಲೀಸರಿಗೆ ಒಂದು ಲಕ್ಷ ಬಹುಮಾನ ನೀಡಿದ್ದರು. ಅದರಲ್ಲಿ ಐವತ್ತು ಸಾವಿರ ಹಣವನ್ನು ಪೊಲೀಸರು ಮೃತ ಬಾಲಕಿ ಕುಟುಂಬಕ್ಕೆ ನೀಡಲು ನಿರ್ಧರಿಸಿದ್ದಾರೆ.

ಆಳಂದ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬೇದಿಸಿದ್ದಲ್ಲದೆ ಒಂಬತ್ತೇ ದಿನದಲ್ಲಿ ಚಾರ್ಜ್ ಸೀಟ್ ಸಲ್ಲಿಸಲಾಗಿದೆ. ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವ ಎಲ್ಲಾ ಪ್ರಯತ್ನ ಮಾಡುತ್ತೇವೆ ಎಂದು ಕಲಬುರಗಿ ಎಸ್​ಪಿ ಇಶಾ ಪಂತ್ ತಿಳಿಸಿದ್ದಾರೆ.

Published On - 11:12 am, Sat, 12 November 22