ಹಣ ಸುಲಿಗೆ ಆರೋಪ: ಕಲಬುರಗಿ ಜಿಲ್ಲೆಯ ನಾಡ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

| Updated By: Rakesh Nayak Manchi

Updated on: Feb 26, 2024 | 8:00 PM

ಅದಾಯ ಪ್ರಮಾಣ ಪತ್ರ ಸೇರಿ ಸರ್ಕಾರಿ ದಾಖಲೆಗಳನ್ನ ಮಾಡಿಕೊಡಲು ಕಲಬುರಗಿ ಜಿಲ್ಲೆಯಲ್ಲಿರುವ ನಾಡ ಕಚೇರಿಗಳಲ್ಲಿ ಹೆಚ್ಚಿನ ಹಣ ಸುಲಿಗೆ ಮಾಡುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿದ್ದವು. ಅದರಂತೆ ಲೋಕಾಯುಕ್ತ ಅಧಿಕಾರಿಗಳು ಇಂದು ಕಲಬುರಗಿಯ ನಾಡ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಹಣ ಸುಲಿಗೆ ಆರೋಪ: ಕಲಬುರಗಿ ಜಿಲ್ಲೆಯ ನಾಡ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಕಲಬುರಗಿ ನಾಡ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Follow us on

ಕಲಬುರಗಿ, ಫೆ.26: ಜಿಲ್ಲೆಯ (Kalaburagi) ನಾಡ ಕಚೇರಿಗಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅದಾಯ ಪ್ರಮಾಣ ಪತ್ರ ಸೇರಿ ಸರ್ಕಾರಿ ದಾಖಲೆಗಳನ್ನ ಮಾಡಿಕೊಡಲು ಹಣ ಸುಲಿಗೆ ಮಾಡುತ್ತಿರುವ ಆರೋಪ ಸಂಬಂಧ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ನಾಡ ಕಚೇರಿಗಳಲ್ಲಿ ಜನರಿಗೆ ದಾಖಲೆಗಳನ್ನು ನೀಡಲು ಇಂತಿಷ್ಟು ಶುಲ್ಕ ಎಂದು ನಿಗದಿ ಮಾಡಲಾಗಿರುತ್ತದೆ. ಆದರೆ, ಅಧಿಕಾರಿಗಳು, ಸಿಬ್ಬಂದಿ ಜನರಿಗೆ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ, ಈ ಸಂಬಂಧ ಹಲವು ದೂರುಗಳು ಲೋಕಾಯುಕ್ತ ಕಚೇರಿಗೆ ಸಲ್ಲಿಕೆಯಾಗಿದ್ದವು.

ಇದನ್ನೂ ಓದಿ: ಲಂಚ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ: ಮರು ತನಿಖೆಗೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ದೂರುಗಳು ಬಂದ ಹಿನ್ನೆಲೆ ಲೋಕಾಯುಕ್ತ ಎಸ್​ಪಿ ಜಾನ್ ಆಂಟೋನಿ ನೇತೃತ್ವದಲ್ಲಿ ಕಲಬುರಗಿ ಜಿಲ್ಲೆಯ ಒಂಬತ್ತು ತಾಲೂಕುಗಳ ನಾಡಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ