ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲು
ಜಿಲ್ಲೆಯಲ್ಲಿ ಮತ್ತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲಾಗಿದೆ.
ಕಲಬುರಗಿ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಏಕೆಂದರೆ ಜಿಲ್ಲೆಯಲ್ಲಿ ಮತ್ತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲಾಗಿದೆ.
ಚಿಂಚೋಳಿ, ಕಾಳಗಿ ತಾಲೂಕಿನ ಹಲಚೇರಾ, ಗಡಿಕೇಶ್ವರ್, ರಾಜಾಪುರ ಸೇರಿ ಹಲವಡೆ ಭೂಮಿ ಕಂಪಿಸಿದಂತೆ ಭಾಸವಾಗಿದೆ. ಕಳೆದ 2 ದಿನದಿಂದ ಇದೇ ರೀತಿ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗುತ್ತಿದೆ. ಹೀಗಾಗಿ ಗ್ರಾಮಸ್ಥರು ಭಯದಲ್ಲೇ ಜೀವನ ಸಾಗಿಸುವಂತಾಗಿದೆ.
ಇನ್ನು ಮತ್ತೊಂದೆಡೆ ವಿಜಯಪುರ ಜಿಲ್ಲೆಯಲ್ಲೂ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮುಂಜಾನೆ 5.15, ಬೆಳಗ್ಗೆ 7.15ಕ್ಕೆ ಭೂಮಿ ಕಂಪಿಸಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ, ಮಲಘಾಣ, ಸುತ್ತಮುತ್ತ ಗ್ರಾಮಗಳಲ್ಲಿ ಕಂಪನದ ಅನುಭವವಾಗಿದೆ. ಜಿಲ್ಲೆಯಲ್ಲಿ ಸರಣಿ ಭೂಕಂಪನದಿಂದ ಜನರಲ್ಲಿ ಭಯ ಆವರಿಸಿದೆ. ಆತಂಕದಲ್ಲೇ ಜನ ಕಾಲ ಕಳೆಯುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಜಿಲ್ಲೆಯ ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ ಸೇರಿದಂತೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಧಾರಾಕರ ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸೂಕ್ತ ಮೋರಿ ವ್ಯವಸ್ಥೆಯಿಲ್ಲದೆ ರಸ್ತೆಗಳಲ್ಲೆ ನೀರು ನಿಂತಿದೆ. ರಸ್ತೆಗಳಲ್ಲಿ ನೀರು ನಿಂತ ಹಿನ್ನೆಲೆ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದ ಜಿಲ್ಲೆಯ ಕೆರೆ ಕುಂಟೆ ಜಲಾಶಯಗಳು ನದಿಗಳು ಉಕ್ಕಿ ಹರಿಯುತ್ತಿವೆ. ಮಳೆ ನೀರಿನಿಂದ ಜಕ್ಕಲಮಡಗು, ಶ್ರೀನಿವಾಸಸಾಗರ, ಮಂಚೇನಹಳ್ಳಿ ಕೆರೆ, ಗುಡಿಬಂಡೆ ಕೆರೆಗಳು ಕೋಡಿ ಹರಿಯುತ್ತಿವೆ.
ಇದನ್ನೂ ಓದಿ: ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು
Published On - 7:34 am, Sun, 10 October 21