ಹೆಚ್ಡಿ ಕುಮಾರಸ್ವಾಮಿ ರಕ್ತದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ -ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ
ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಹಿಂದೆ ದೇವಗೌಡರು ಹಿಂದೂ ಕುಟುಂಬದಲ್ಲಿ ಹುಟ್ಟಿದ್ದೆ ತಪ್ಪು ಅಂದಿದ್ದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಕುಟುಂಬದಲ್ಲಿ ಹುಟ್ಟೋದಾಗಿ ಹೇಳಿದ್ದರು. ಇಡೀ ಕುಟುಂಬದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ. -ಸಿದ್ದಲಿಂಗ ಸ್ವಾಮೀಜಿ
ಕಲಬುರಗಿ: ಹಿಂದೂ ಸಂಘಟನೆಗಳ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಹಿಂದೆ ದೇವಗೌಡರು ಹಿಂದೂ ಕುಟುಂಬದಲ್ಲಿ ಹುಟ್ಟಿದ್ದೆ ತಪ್ಪು ಅಂದಿದ್ದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಕುಟುಂಬದಲ್ಲಿ ಹುಟ್ಟೋದಾಗಿ ಹೇಳಿದ್ದರು. ಇಡೀ ಕುಟುಂಬದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ. ಹೀಗೆ ಹಿಂದೂ ವಿರೋಧಿ ಟೀಕೆ ಮಾಡ್ತಿದ್ದರೆ ನಿಮಗೆ ನೆಲೆ ಸಿಗಲಾರದು. ದೇಶ, ರಾಜ್ಯದಲ್ಲಿ ಹಿಂದೂ ಸಂಘಟನೆಗಳು ಇದ್ದಿದ್ದರಿಂದಲೇ ನೀವು ಹಿಂದೂವಾಗಿ ಹುಟ್ಟಲು ಸಾಧ್ಯವಾಗಿದೆ. ಭಾರತ ಹಿಂದೂ ರಾಷ್ಟ್ರ, ಹಿಂದೂಗಳ ಜಾಗೃತಿಗಾಗಿ ಹಿಂದೂ ಸಂಘಟನೆಗಳು ಕೆಲಸ ಮಾಡುತ್ತಿವೆ. ಕುಮಾರಸ್ವಾಮಿ ಮುಸ್ಲಿಂ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ. ಮುಸ್ಲಿಂ ಮತಗಳ ಕ್ರೋಡಿಕರಣಕ್ಕಾಗಿ ಅವರ ಓಲೈಕೆ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಅಶಾಂತಿ ಮೂಡಿಸಿದವರು ಹಿಂದೂ, ಹಿಂದೂ ಸಂಘಟನೆಗಳಲ್ಲಾ. ಮುಸ್ಲಿಂ ಮತ್ತು ಮುಸ್ಲಿಂ ಸಂಘಟನೆಗಳು ಅಶಾಂತಿ ಮೂಡಿಸಿವೆ. ನಿಮ್ಮದು ಜ್ಯಾತ್ಯಾತೀತ ಜನತಾದಳ ಪಕ್ಷ. ಆದ್ರೆ ಎಲ್ಲಿದೆ ನಿಮ್ಮ ಜ್ಯಾತ್ಯಾತೀತ ತತ್ವ ಎಂದು ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ.
ಗಂಡಸ್ತನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಹೆಚ್ಡಿ ಕುಮಾರಸ್ವಾಮಿ ಹಿಜಾಬ್(Hijab) ವಿವಾದ ಶುರುವಾದಾಗಿನಿಂದ ರಾಜ್ಯದಲ್ಲಿ ಒಂದಲ್ಲಾ ಒಂದು ಸರಣಿ ವಿವಾದಗಳು ಹುಟ್ಟುತ್ತಲೇ ಇವೆ. ಸರಣಿ ವಿವಾದಗಳಿಂದ ರಾಜ್ಯದಲ್ಲಿ ಹಿಂದೂ, ಮುಸ್ಲಿಂ(Hindu-Muslim) ಸಮುದಾಯದ ಮಧ್ಯೆ ಬಿರುಕು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy), ಗಂಡಸ್ತನ ಇದ್ರೆ ಎಲ್ಲವನ್ನೂ ನಿಲ್ಲಿಸಿ. ವಿಹೆಚ್‌ಪಿ, ಬಜರಂಗದಳದವರು ಸಮಾಜ ಘಾತುಕರು, ಪೋಲಿಗಳು. ಕಾಂಗ್ರೆಸ್ನವರಿಗೆ ತಾಕತ್ತಿಲ್ಲ ಎಂದು ಸಿಎಂ ಬೊಮ್ಮಾಯಿಗೆ(Basavaraj Bommai) ಗಂಡಸ್ತನ ಇದ್ರೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದರು. ಈ ಹೇಳಿಕೆಯ ಬಳಿಕ ಬಿಜೆಪಿ ಮುಖಂಡರು ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದ್ರೆ ಈಗ ಹೆಚ್ಡಿ ಕುಮಾರಸ್ವಾಮಿ ಗಂಡಸ್ತನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮಾತನಾಡುವ ಭರದಲ್ಲಿ ಗಂಡಸ್ತನದ ಕುರಿತು ಹೇಳಿದ್ದೇನೆ. ಕೂಡಲೇ ಅದನ್ನ ಸರಿ ಮಾಡಿಕೊಂಡಿದ್ದೇನೆ. ನನ್ನ ಪದ ಬಳಕೆ ನೋವು ತಂದಿದ್ರೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಅಮಾಯಕ ಮಕ್ಕಳ ಬಲಿದಾನ. ಇದನ್ನು ನೋಡಿದ ಮೇಲೆ ನನಗೆ ರೋಷ ಉಕ್ಕಿ ಬಂತು. ಆವೇಶದಲ್ಲಿ ನಾನು ಗಂಡಸ್ತನ ಎಂದು ಮಾತನಾಡಿದ್ದೇನೆ. ನನ್ನ ಪದ ಬಳಕೆ ನೋವು ತಂದಿದ್ರೆ ವಿಷಾದ ವ್ಯಕ್ತಪಡಿಸ್ತೇನೆ. ಆಗಲೇ ಪದ ಬಳಕೆ ಬಗ್ಗೆ ಅನ್ಯಥಾ ಭಾವಿಸಬೇಡಿ ಅಂದಿದ್ದೇನೆ ಎಂದು ಗಂಡಸ್ತನ ಹೇಳಿಕೆಗೆ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಉಕ್ರೇನ್ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ
ಕುಮಾರಸ್ವಾಮಿಯವರಿಗೆ ಒಂದೆರಡಲ್ಲ, ಮೂರು-ಮೂರು ಕಡೆ ಗಂಡಸ್ತನ ತೋರಿಸುವುದು ಗೊತ್ತು: ಕೆ ಎಸ್ ಈಶ್ವರಪ್ಪ