AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1458 ಎಕರೆಯಲ್ಲಿ ಒಂದೂಕಾಲು ಲಕ್ಷ ಮೆಟ್ರಿಕ್ ಟನ್ ಕಬ್ಬು ಕಟಾವಿಗೆ ಸಮಯ ನಿಗದಿ, ಬರಲಿದೆ ಆ್ಯಪ್ ಆಧಾರಿತ ಸಹಾಯವಾಣಿ

Kalaburagi: ಕಲಬುರಗಿ ಜಿಲ್ಲೆಯಲ್ಲಿ ಸದ್ಯ ಕಬ್ಬು ಬೆಳೆಗಾರರು ಅನೇಕ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕಬ್ಬು ಬೆಳೆಗಾರರಿಗೆ ಅನಕೂಲ ಕಲ್ಪಿಸಲು ಆ್ಯಪ್ ಅಭಿವೃದ್ದಿ ಪಡಿಸುವ ಜೊತೆಗೆ ಸಹಾಯವಾಣಿಯನ್ನು ಪ್ರಾರಂಭಿಸಲಾಗುತ್ತಿದೆ. ಇದರಿಂದ ಸರಿಯಾದ ಸಮಯದಲ್ಲಿ ರೈತರ ಕಬ್ಬು ಕಟಾವಾಗಾಲು ಅನಕೂಲವಾಗಲಿದೆ ಎಂದು ಯಶವಂತ ಗುರುಕಾರ್, ಕಲಬುರಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

1458 ಎಕರೆಯಲ್ಲಿ ಒಂದೂಕಾಲು ಲಕ್ಷ ಮೆಟ್ರಿಕ್ ಟನ್ ಕಬ್ಬು ಕಟಾವಿಗೆ ಸಮಯ ನಿಗದಿ, ಬರಲಿದೆ ಆ್ಯಪ್ ಆಧಾರಿತ ಸಹಾಯವಾಣಿ
ರೈತರ ಕಬ್ಬು ಮಾರಾಟಕ್ಕೆ ಆ್ಯಪ್ ಅಭಿವೃದ್ಧಿ, ಸಹಾಯವಾಣಿ ಸ್ಥಾಪನೆ
TV9 Web
| Updated By: ಸಾಧು ಶ್ರೀನಾಥ್​|

Updated on:Mar 18, 2022 | 6:13 PM

Share

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಇದೀಗ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ರೈತರು ಬೆಳೆದ ಕಬ್ಬು ಸರಿಯಾದ ಸಮಯದಲ್ಲಿ ಕಟಾವಾಗದೇ ಇರುವದರಿಂದ ಬೆಂಕಿಗಾಹುತಿಯಾಗುತ್ತಿದೆ. ಲಕ್ಷಾಂತರ ಮೌಲ್ಯದ ಕಬ್ಬು ಸಕ್ಕರೆ ಕಾರ್ಖಾನೆಗಳ ಚೆಲ್ಲಾಟದಿಂದ ಹಾಳಾಗಿ ಹೋಗುತ್ತಿದೆ. ಜಿಲ್ಲೆಯಲ್ಲಿ ಬೆಳೆಯಲಾಗುವ ಕಬ್ಬು ಸಕಾಲದಲ್ಲಿ ಮತ್ತು ಎಲ್ಲಾ ರೈತರ ಕಬ್ಬು ಮಾರಾಟವಾಗುವಂತೆ ಮಾಡಲು ದೀರ್ಘಾವಧಿಯ ವ್ಯವಸ್ಥೆಯಾಗಿ ಇದೀಗ ಕಲಬುರಗಿ ಜಿಲ್ಲಾಡಳಿತದಿಂದ ವಿನೂತನವಾಗಿ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದೆ. ಆ್ಯಪ್ ಅಭಿವೃದ್ದಿ ಪಡಿಸುವ ಕೆಲಸಕ್ಕೆ ಇದೀಗ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮುಂದಾಗಿದ್ದಾರೆ.

ಆ್ಯಪ್ ಹೇಗೆ ಸಹಾಯ ಮಾಡಲಿದೆ ಕಬ್ಬು ಖರೀದಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದ್ದು, ಮೂರು ತಿಂಗಳಲ್ಲಿ ಆ್ಯಪ್ ಅಭಿವೃದ್ಧಿಪಡಿಸಿ ಮುಂದಿನ ವರ್ಷದಿಂದ ಇದನ್ನು ಜಾರಿಗೆ ತರಲು ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಮುಂದಾಗಿದ್ದಾರೆ. ನೂತನ ಆ್ಯಪ್ ಅಭಿವೃದ್ದಿಯಾದರೆ ರೈತರು ಆ್ಯಪ್‍ನಲ್ಲಿಯೇ ತಮ್ಮ ಜಮೀನಿನ ಸರ್ವೇ ಸಂಖ್ಯೆ ಜೊತೆಗೆ ಕಬ್ಬು ಕಟಾವಿಗೆ ವೈಯಕ್ತಿಕ ವಿವರದೊಂದಿಗೆ ಮನವಿ ಸಲ್ಲಿಸಬೇಕು. ಈ ಮಾಹಿತಿ ಸಕ್ಕರೆ ಕಾರ್ಖಾನೆ ಮತ್ತು ಜಿಲ್ಲಾಡಳಿತಕ್ಕೆ ಏಕಕಾಲದಲ್ಲಿ ರವಾನೆಯಾಗಲಿದೆ. ಅದರಂತೆ ಸಕ್ಕರೆ ಕಾರ್ಖಾನೆಯವರು ಕ್ಷೇತ್ರಕ್ಕೆ ಹೋಗಿ ಕಟಾವು ಮಾಡಿಕೊಳ್ಳುತ್ತಾರೆ. ಈ ರೀತಿಯ ತಂತ್ರಾಂಶ ಕಾರ್ಯನಿರ್ವಹಿಸಲಿದ್ದು, ಇದರ ಮೇಲೆ ಜಿಲ್ಲಾಡಳಿತ ನಿಗಾ ವಹಿಸಲಿದೆ.

ಕಟಾವಿಗೆ ದಿನಾಂಕ ನಿಗದಿ, ಪ್ರಾಯೋಗಿಕ ಜಾರಿ: ಪ್ರಸ್ತುತ ಕಲಬುರಗಿ ಜಿಲ್ಲೆಯಲ್ಲಿ ಆಳಂದ ತಾಲೂಕಿನ ಭೂಸನೂರ ಎನ್.ಎಸ್.ಎಲ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಬಾಕಿ ಉಳಿದಂತಹ 4,239 ಎಕರೆ ಪ್ರದೇಶದಲ್ಲಿ ಬೆಳೆಯಲಾದ ಕಬ್ಬನ್ನು ಕಟಾವು ಮಾಡಲು ಗ್ರಾಮವಾರು ದಿನಾಂಕ ನಿಗದಿ ಮಾಡಿದೆ. ಏಪ್ರಿಲ್ 10 ರೊಳಗೆ ಕಾರ್ಖಾನೆ ವ್ಯಾಪ್ತಿಯ ಎಲ್ಲಾ ಕಬ್ಬು ಕಟಾವು ಮಾಡುವಂತೆ ಪ್ರಾಯೋಗಿಕ ಯೋಜನೆಯಾಗಿ ಎನ್.ಎಸ್.ಎಲ್. ಕಾರ್ಖಾನೆಯ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ. ಇದು ಯಶ ಕಂಡಲ್ಲಿ ಮುಂದಿನ ದಿನದಲ್ಲಿ ಜಿಲ್ಲೆಯ ಇತರೆ ಸಕ್ಕರ ಕಾರ್ಖಾನೆ ವ್ಯಾಪ್ತಿಯಲ್ಲಿಯೂ ಜಾರಿಗೆ ತರಲು ಜಿಲ್ಲಾಡಳಿತ ಮುಂದಾಗಿದೆ.

ನಿಂಬರ್ಗಾ ವಿಭಾಗದಲ್ಲಿ 550 ಎಕರೆ, ಆಳಂದ ವಿಭಾಗದಲ್ಲಿ 410 ಎಕರೆ, ಕಲಬುರಗಿ ವಿಭಾಗದಲ್ಲಿ 1205 ಎಕರೆ, ಚೌಡಾಪೂರ ವಿಭಾಗದಲ್ಲಿ 1458 ಎಕರೆ, ಅಫಜಲಪೂರ ವಿಭಾಗದಲ್ಲಿ 184 ಎಕರೆ, ಕರಜಗಿ ವಿಭಾಗದಲ್ಲಿ 130 ಎಕರೆ ಹಾಗೂ ಕಡಗಂಚಿ ವಿಭಾಗದಲ್ಲಿ 302 ಸೇರಿ ಒಟ್ಟು 4,239 ಎಕರೆ ಪ್ರದೇಶಗಳಿಂದ ಅಂದಾಜು 1,24,768 ಮೆಟ್ರಿಕ್ ಟನ್ ಬಾಕಿ ಕಬ್ಬು ಕಟಾವು ಮಾಡಲು ಸಮಯ ನಿಗದಿಪಡಿಸಲಾಗಿದೆ ಎಂದರು.

ಸಹಾಯವಾಣಿ ಸ್ಥಾಪನೆ: ರೈತರಿಂದ ಕಬ್ಬು ಕಟಾವು ಸಮಸ್ಯೆಗಳನ್ನು ಆಲಿಸಲು ಕೂಡಾ ಜಿಲ್ಲಾಡಳಿತ ಸಹಾಯವಾಣಿ ಸ್ಥಾಪಿಸಲು ಕೂಡಾ ಮುಂದಾಗಿದೆ. ರೈತರು ದೂರವಾಣಿ ಕರೆ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಸಹಾಯವಾಣಿ ಸ್ಥಾಪನೆಗೆ ಜಿಲ್ಲಾಡಳಿತ ಮುಂದಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಸದ್ಯ ಕಬ್ಬು ಬೆಳೆಗಾರರು ಅನೇಕ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕಬ್ಬು ಬೆಳೆಗಾರರಿಗೆ ಅನಕೂಲ ಕಲ್ಪಿಸಲು ಆ್ಯಪ್ ಅಭಿವೃದ್ದಿ ಪಡಿಸುವ ಜೊತೆಗೆ ಸಹಾಯವಾಣಿಯನ್ನು ಪ್ರಾರಂಭಿಸಲಾಗುತ್ತಿದೆ. ಇದರಿಂದ ಸರಿಯಾದ ಸಮಯದಲ್ಲಿ ರೈತರ ಕಬ್ಬು ಕಟಾವಾಗಾಲು ಅನಕೂಲವಾಗಲಿದೆ ಎಂದು ಯಶವಂತ ಗುರುಕಾರ್, ಕಲಬುರಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. – ಸಂಜಯ್ ಚಿಕ್ಕಮಠ

Published On - 5:23 pm, Fri, 18 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ