Bravery Award: ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್​ನ ನ್ಯೂ ದೆಹಲಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

Bravery Award: ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
Edited By:

Updated on: Jul 10, 2023 | 7:11 PM

ಕಲಬುರಗಿ: 2023-24 ನೇ ಸಾಲಿನ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿ (National Children’s Bravery Award) ಗಾಗಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್​ನ ನ್ಯೂ ದೆಹಲಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಈ ಬಗ್ಗೆ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಕಟಣೆ ಹೊರಡಿಸಿದ್ದು ಅರ್ಹ ಮಕ್ಕಳು ಅರ್ಜಿ ಸಲ್ಲಿಸುವಂತೆ ಕೋರಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ, ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ

ಅರ್ಜಿ ಸಲ್ಲಿಸಲು ಅರ್ಹತೆ

  • ಅರ್ಜಿ ಸಲ್ಲಿಸಲು ಜುಲೈ 1 ರಿಂದ ಸೆಪ್ಟೆಂಬರ್ 30 ರ ರೊಳಗೆ ಪ್ರಕರಣಗಳನ್ನು ನಡೆದಿರಬೇಕು.
  • 6 ರಿಂದ 18 ವರ್ಷದೊಳಗಿನ ಮಕ್ಕಳಾಗಿರಬೇಕು.

ಆನ್-ಲೈನ್ ಮೂಲಕ www.iccw.co.in ಅಕ್ಟೋಬರ್ 15 ರ ಒಳಗಾಗಿ ಅರ್ಜಿ ಆಹ್ವಾನಿಸಿ ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್-ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ

ಸಂಪರ್ಕ ವಿಳಾಸ

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಂದ್ರಶೇಖರ ಪಾಟೀಲ್ ಕ್ರಿಡಾಂಗಣ ಎದುರುಗಡೆ, ಅಂಧ ಬಾಲಕರ ಸರ್ಕಾರಿ ಫ್ರೌಢ ಶಾಲೆ ಕಟ್ಟಡ, ಮೊದಲನೆ ಮಹಡಿ ಕಲಬುರಗಿ-585102 ದೂರವಾಣಿ ಸಂಖ್ಯೆ 08472-228659 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us