Loud Speakers: ನಾಳೆಯಿಂದ ಮಸೀದಿಗಳ ಬಳಿಯ ದೇಗುಲಗಳಲ್ಲಿ ಹನುಮಾನ್ ಚಾಲೀಸಾ: ಮತ್ತೊಂದು ಮಜಲಿಗೆ ಆಜಾನ್ ವಿವಾದ

ಮಸೀದಿಗಳಲ್ಲಿ ಸೌಡ್​ ಸ್ಪೀಕರ್ ಬಳಸಿ ಆಜಾನ್ ಕೂಗುವ ಪದ್ಧತಿಯನ್ನು ವಿರೋಧಿಸುತ್ತಿರುವ ಶ್ರೀರಾಮಸೇನೆಯು ಮೇ 9ರಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ ಮತ್ತು ಭಜನೆಗಳನ್ನು ಲೌಡ್​ಸ್ಪೀಕರ್​ಗಳಲ್ಲಿ ಮೊಳಗಿಸುವುದಾಗಿ ಹೇಳಿದೆ

Loud Speakers: ನಾಳೆಯಿಂದ ಮಸೀದಿಗಳ ಬಳಿಯ ದೇಗುಲಗಳಲ್ಲಿ ಹನುಮಾನ್ ಚಾಲೀಸಾ: ಮತ್ತೊಂದು ಮಜಲಿಗೆ ಆಜಾನ್ ವಿವಾದ
ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 08, 2022 | 8:22 AM

ಕಲಬುರಗಿ: ಮಸೀದಿಗಳಲ್ಲಿ ಸೌಡ್​ ಸ್ಪೀಕರ್ ಬಳಸಿ ಆಜಾನ್ ಕೂಗುವ ಪದ್ಧತಿಯನ್ನು ವಿರೋಧಿಸುತ್ತಿರುವ ಶ್ರೀರಾಮಸೇನೆಯು ಮೇ 9ರಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ ಮತ್ತು ಭಜನೆಗಳನ್ನು ಲೌಡ್​ಸ್ಪೀಕರ್​ಗಳಲ್ಲಿ ಮೊಳಗಿಸುವುದಾಗಿ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಆಟೊ ನಿಲ್ದಾಣ ಬಳಿಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಹಾಕಲಾಗುವುದು. ಮಧ್ಯಾಹ್ನ 12ರಿಂದ 2 ಗಂಟೆಯವರಗೆ ಭಜನೆ, ಹನುಮಾನ ಚಾಲಿಸಾ ಪಠಿಸಲಾಗುವುದು. ಮಸೀದಿ ಮೇಲಿನ ಧ್ವನಿವರ್ಧಕ ತೆರವುಗೊಳಿಸದೇ ಇರುವುದರಿಂದ ಜನರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಏನಾದರೂ ಅನಾಹುತವಾದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಸಿದ್ದಲಿಂಗ ಸ್ವಾಮಿಜಿ ಎಚ್ಚರಿಕೆ ನೀಡಿದರು.

ಧ್ವನಿವರ್ಧಕ ವಿವಾದಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಮಸೀದಿಗಳಲ್ಲಿ ಆಜಾನ್ ಮೊಳಗಿಸಲು ಲೌಡ್​ಸ್ಪೀಕರ್ ಬಳಸುವುದನ್ನು ವಿರೋಧಿಸುತ್ತಿರುವ ಶ್ರೀರಾಮಸೇನೆ, ಸುಪ್ರೀಂಕೋರ್ಟ್ ತೀರ್ಪು ಜಾರಿ ಮಾಡಲು ನೀಡಿದ್ದ ಗಡುವಿಗೆ ಇನ್ನೊಂದು ದಿನ ಮಾತ್ರ ಬಾಕಿಯಿದೆ. ನಾಳೆಯಿಂದ ರಾಜ್ಯದ ಬಹುತೇಕ ದೇವಸ್ಥಾನಗಳಲ್ಲಿ ರಾಮಮಂತ್ರ, ಹನುಮಾನ್ ಚಾಲೀಸದ ಜೊತೆಗೆ ವೇದಮಂತ್ರಗಳನ್ನು ಮೊಳಗಿಸಲು ಶ್ರೀರಾಮಸೇನೆ ಮತ್ತು ಇತರ ಹಿಂದುತ್ವಪರ ಸಂಘಟನೆಗಳು ಮುಂದಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಪೂರ್ವನಿಗದಿಯಂತೆ 9ರಿಂದ ದೇವಸ್ಥಾನಗಳಲ್ಲೂ ಲೌಡ್ ಸ್ಪೀಕರ್ ಅಳವಡಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ.

ಎಲ್ಲ ದೇಗುಲಗಳಿಂದ ಮೈಕ್​ನಲ್ಲಿ ರಾಮ ನಾಮ: ಪ್ರಮೋದ್ ಮುತಾಲಿಕ್

ಭಾರತದ ವಿವಿಧೆಡೆ ಮಸೀದಿಗಳಲ್ಲಿ ಅಳವಡಿಸಲಾಗಿರುವ ಅನಧಿಕೃತ ಲೌಡ್​ಸ್ಪೀಕರ್​ಗಳನ್ನು ತೆರವುಗೊಳಿಸುವ ಪ್ರಯತ್ನ ಭಾರತದ ವಿವಿಧೆಡೆ ನಡೆಯುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ, ಇಲ್ಲಿನ ಸರ್ಕಾರವು ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಕೇವಲ ನೊಟೀಸ್ ಮಾತ್ರ ಜಾರಿ ಮಾಡಲಾಗಿದೆ. ಆದರೆ ಈವರೆಗೆ ಲೌಡ್​ ಸ್ಪೀಕರ್ ತೆರವುಗೊಳಿಸುವ ಯಾವುದೇ ಪ್ರಯತ್ನ ನಡೆಯುತ್ತಿಲ್ಲ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಶ್ರೀರಾಮಸೇನೆಯು ಕಳೆದ ಆರು ತಿಂಗಳುಗಳಿಂದ ಮಸೀದಿ ಮೇಲಿರುವ ಅನಧಿಕೃತ ಲೌಡ್ ಸ್ಪೀಕರ್​ಗಳನ್ನು ತೆರವು ಮಾಡುವ ಬಗ್ಗೆ ಮನವಿ ಮಾಡುತ್ತಿದೆ. ಆದರೆ ಈವರೆಗೆ ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿಲ್ಲ. ಸರ್ಕಾರವು ಮಸೀದಿ, ಮಂದಿರ, ಚರ್ಚ್​ಗಳಿಗೆ ನೊಟೀಸ್ ಜಾರಿಗಳಿಸುವ ಮೂಲಕ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ತಂತ್ರ ಅನುಸರಿಸುತ್ತಿದೆ ಎಂದು ನೇರ ಆರೋಪ ಮಾಡಿದರು.

ಮಂದಿರ, ಮಸೀದಿ ಅಥವಾ ಚರ್ಚ್​ಗಳಲ್ಲಿ ಆಗುವ ಪ್ರಾರ್ಥನೆಗೆ ನಮ್ಮ ವಿರೋಧವಿಲ್ಲ. ನಮ್ಮ ವಿರೋಧ ಇರೋದು ಮೈಕ್ ಸಂಬಂಧಪಟ್ಟಂತೆ ಮಾತ್ರ. ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ ಆರು ಗಂಟೆಯವರೆಗೆ ಸಾರ್ವಜನಿಕವಾಗಿ ಮೈಕ್ ಬಳಸುವಂತಿಲ್ಲ. ಆದರೆ ಬೆಳಿಗ್ಗೆ ಐದು ಗಂಟೆಗೆ ಮಸೀದಿಯಲ್ಲಿ ಲೌಡ್ ಸ್ಪೀಕರ್ ಹಾಕುತ್ತಿದ್ದಾರೆ. ಇದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ. ಸರ್ಕಾರ ಈಗಾಗಲೇ ನಿಶ್ಯಬ್ದ ವಲಯಗಳನ್ನು ಗುರುತಿಸಿ, ಘೋಷಿಸಿದೆ. ಆಸ್ಪತ್ರೆ, ಶಾಲೆ, ಕಾಲೇಜು ಮತ್ತು ಜನವಸತಿ ಪ್ರದೇಶಗಳಲ್ಲಿ ಸಾರ್ವಜನಿಕ ಮೈಕ್ ಹಾಕುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದು ವಿವರಿಸಿದರು. ಇಂಥ ಸ್ಥಳಗಳಲ್ಲಿ ಸಾರ್ವಜನಿಕ ಮೈಕ್ ಬಳಕೆಗೆ ಸಂಪೂರ್ಣ ನಿರ್ಬಂಧವಿದೆ. ಇಂತಲ್ಲಿ ಕಡಿಮೆ ಶಬ್ದ ಅಥವಾ ಜಾಸ್ತಿ ಶಬ್ದ ಎಂಬ ವಿವರವನ್ನೇನೂ ಒದಗಿಸಿಲ್ಲ. ಸಾರ್ವಜನಿಕ ಮೈಕ್​ಗೆ ಅನುಮತಿಯೇ ನೀಡುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆದೇಶವಿದ್ದರೂ, ಅದನ್ನು ಪಾಲಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಸರ್ಕಾರಿ ಸಂಸ್ಥೆಗಳು ಗಮನ ನೀಡುತ್ತಿಲ್ಲ ಎಂದು ದೂರಿದರು.

ಮಸೀದಿಗಳ ಮೇಲಿರುವ ಲೌಡ್ ಸ್ಪೀಕರ್​ಗಳಿಗೆ ಯಾರೂ ಅನುಮತಿ ಪಡೆದಿಲ್ಲ. ಚರ್ಚ್, ಮಂದಿರಗಳ ವಿಚಾರವೂ ಅಷ್ಟೇ. ಅವರೂ ಯಾವುದೇ ಅನುಮತಿ ಪಡೆದಿಲ್ಲ. ಇಷ್ಟು ಡೆಸಿಬಲ್​ನಲ್ಲಿ ಮಾತ್ರ ಆಜಾನ್ ಕೂಗಬೇಕು ಎಂಬ ನಿಯಮವಿದೆ. ಆದರೆ ಊರು ತುಂಬಾ ಕೇಳಿಸುವ ಹಾಗೆ ಶಬ್ದ ಮಾಲಿನ್ಯ ಮಾಡುತ್ತಾರೆ. ಮೇ ಒಂದರೊಳಗೆ ಮಸೀದಿಗಳ ಮೇಲಿರುವ ಅನಧಿಕೃತ ಲೌಡ್ ಸ್ಪೀಕರ್​ಗಳನ್ನು ತೆರವು ಮಾಡಬೇಕು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಗಡುವು ನೀಡಿದ್ದೆವು. ಆದರೆ ಇಂದು ಬೆಳಗಿನ ಜಾವವು ಆಜಾನ್​ನಿಂದ ಶಬ್ದ ಮಾಲಿನ್ಯ ಆಗುತ್ತಿದೆ. ಸರ್ಕಾರ ನಮ್ಮ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ ಮೇ 9ರಂದು ರಾಜ್ಯದ ಎಲ್ಲ ದೇವಾಲಯಗಳ‌ ಮೇಲೆ ಬೆಳಿಗ್ಗೆ ಐದು ಗಂಟೆಗೆ ಓಂ ನಮಃ ಶಿವಾಯ, ರಾಮ ನಾಮ ಜಪ, ಹನುಮಾನ್ ಚಾಲೀಸಾ ಹಾಕಲು ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಘೋಷಿಸಿದರು.

ಇದನ್ನೂ ಓದಿ: ಮಸೀದಿಗಳಿಂದ ಲೌಡ್​ಸ್ಪೀಕರ್ ತೆರವುಗೊಳಿಸದ ಸರ್ಕಾರ, ಎಲ್ಲ ದೇಗುಲಗಳಿಂದ ಮೈಕ್​ನಲ್ಲಿ ರಾಮ ನಾಮ: ಪ್ರಮೋದ್ ಮುತಾಲಿಕ್

ಇದನ್ನೂ ಓದಿ: ಮೇ 9ರಿಂದ ಶ್ರೀರಾಮ ಸೇನೆಯಿಂದ ಬೃಹತ್ ಓಂಕಾರ ಅಭಿಯಾನ ನಡೆಯುತ್ತೆ: ಪ್ರಮೋದ್ ಮುತಾಲಿಕ್

Published On - 8:22 am, Sun, 8 May 22

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು