ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ; ಕಾರಣ?

ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಹಳೇ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ರೇವೂರು ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ; ಕಾರಣ?
ಸಾಂದರ್ಭಿಕ ಚಿತ್ರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 21, 2023 | 8:15 AM

ಕಲಬುರಗಿ, ಅ.21: ಮಾರಕಾಸ್ತ್ರದಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನ ಸಿದನೂರು ಗ್ರಾಮದಲ್ಲಿ ನಿನ್ನೆ(ಅ.20) ರಾತ್ರಿ ನಡೆದಿದೆ. ಬಲಭೀಮ್ ಸಗರ್(23) ಕೊಲೆಯಾದ ಯುವಕ. ಇನ್ನು ಬಲಭೀಮ ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಹಳೇ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ರೇವೂರು ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಹೆದ್ದಾರಿಯಲ್ಲಿ ಲಾರಿ ತಡೆದು ಎರಡು ಕಡೆ ಪ್ರತ್ಯೇಕ ದರೋಡೆ

ಬೆಂಗಳೂರು ಗ್ರಾಮಾಂತರ: ಹೆದ್ದಾರಿಯಲ್ಲಿ ಲಾರಿ ತಡೆದು ಎರಡು ಕಡೆ ಪ್ರತ್ಯೇಕ ದರೋಡೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿ ನಡೆದಿದೆ. ಲಾರಿ ಚಾಲಕ ಮೋಹನ್  ಕುಮಾರ್ ಎಂಬುವವರಿಗೆ ಚಾಕು ತೋರಿಸಿ 8 ಸಾವಿರ ನಗದು ಹಾಗೂ ಗೂಗಲ್ ಪೇ ಮುಖಾಂತರವಾಗಿ 10 ಸಾವಿರ ರೂ. ಪಡೆದು ದರೋಡೆ ಮಾಡಲಾಗಿದೆ. ಮೂರು ಜನ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಈ  ಕೃತ್ಯ ಎಸಗಲಾಗಿದೆ. ಇನ್ನು ಮತ್ತೊಂದು ಘಟನೆ ಹೊಸನಿಜಗಲ್ ಬಳಿ ನಾಲ್ವರು ಕಳ್ಳರು, ಚಾಲಕ ಕಣ್ಣನ್ ಎಂಬಾತನಿಗೆ ಬೆದರಿಸಿ ಲಾರಿಯಲ್ಲಿದ್ದ ನೌಕಾಪಡೆಗೆ ಸೇರಿದ್ದ ಬಾಕ್ಸ್ ಮತ್ತು ಶೂಗಳನ್ನ ಕದ್ದು ಪರಾರಿಯಾಗಿದ್ದಾರೆ. ಎರಡು ಬೈಕ್​ನಲ್ಲಿ ಬಂದು ದರೋಡೆ ಮಾಡಿದ್ದು, ನೆಲಮಂಗಲ ಗ್ರಾಮಾಂತರ ಹಾಗೂ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ; ಕಾರಣ?

ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ

ತುಮಕೂರು: ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆ ಚಿರತೆ ಬಿದ್ದ ಘಟನೆ ತುಮಕೂರು ತಾಲೂಕಿನ ಪುರದಕಟ್ಟೆ ಕಾವಲ್ ಬಳಿ ನಡೆದಿದೆ. ಗ್ರಾಮದ ವೆಂಕಟಪ್ಪರವರ ತೋಟದ ಮನೆ ಬಳಿ ಬೋನಿಗೆ ಚಿರತೆ ಸಿಕ್ಕಿಬಿದ್ದಿದೆ. ಇನ್ನು ಈ ಚಿರತೆ ಕಳೆದ ಆರು ತಿಂಗಳುಗಳಿಂದ ಹಸು,ಕರು ಹಾಗೂ ಮೇಕೆಗಳ ಮೇಲೆ ದಾಳಿ ಮಾಡಿತ್ತು. ಸದ್ಯ ಚಿರತೆ ಸೆರೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ವಿಷಯ ತಿಳಿದು ತುಮಕೂರು ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆಯನ್ನು ಸ್ಥಳಾಂತರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Sat, 21 October 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್