ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ; ಸಕ್ಕರೆ ಕಾರ್ಖಾನೆ ನೋಟಿಸ್ಗೆ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ
ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ, ಜ.27: ಪರಿಸರ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಯತ್ನಾಳ್ ಸರ್ಕಾರದ (Karnataka Government) ನಡೆಯನ್ನು ವಿರೋಧಿಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ. ‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ. ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ ಎಂದು ಯತ್ನಾಳ್ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ.
— Basanagouda R Patil (Yatnal) (@BasanagoudaBJP) January 27, 2024
ಇದನ್ನೂ ಓದಿ: ಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಕೆಎಸ್‌ಪಿಸಿಬಿ ಆದೇಶ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಒಡೆತನದ ಶುಗರ್ ಫ್ಯಾಕ್ಟರಿ ಬಂದ್ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:00 pm, Sat, 27 January 24